33 Km ಮೈಲೇಜ್, ಬೆಲೆಯೂ ಅಗ್ಗ, 5-ಸ್ಟಾರ್ ಸೇಫ್ಟಿಯ Maruti Dzire ಕಾರನ್ನು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಪ್ರಮುಖ ಸೆಡಾನ್ ಆಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಗ್ಲೋಬಲ್ ಎನ್‌ಸಿಎಪಿ ಮತ್ತು ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ನೀವು ಹೊಚ್ಚ ಹೊಸ 'ಡಿಜೈರ್' ಕಾರನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ನಾವಿಲ್ಲಿ, ಈ ಸೆಡಾನ್‌ನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ದೇಶೀಯವಾಗಿ 'ಮಾರುತಿ ಡಿಜೈರ್' ಕಾರು ವಿವಿಧ ರೂಪಾಂತರಗಳೊಂದಿಗೆ (ವೇರಿಯೆಂಟ್) ಲಭ್ಯವಿದೆ. ಇದರ 'ಎಲ್ಎಕ್ಸ್ಐ' (ಪೆಟ್ರೋಲ್) ರೂಪಾಂತರ ರೂ.7.70 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ಈ ಕಾರನ್ನು ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.4.70 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.9,500 ವರೆಗೆ ಇಎಂಐ ಕಟ್ಟಬೇಕು.

Maruti Suzuki Dzire On Road Price And Emi Details

ಇದೇ ಸೆಡಾನ್‌ನ ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.8.80 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.5.80 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ 5 ವರ್ಷಗಳಿಗೆ ಮಾಸಿಕ ರೂ.11,700 ವರೆಗೆ ಇಎಂಐ ಪಾವತಿ ಮಾಡಬೇಕು.

ಈ ಕಾರಿನ ಝಡ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.10 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ. 7 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.14,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Dzire On Road Price And Emi Details

ನೂತನ ಡಿಜೈರ್ ಸೆಡಾನ್‌ನ ಝಡ್ಎಕ್ಸ್ಐ ಪ್ಲಸ್ (ಪೆಟ್ರೋಲ್) ರೂಪಾಂತರ, ರೂ.10.80 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಇದನ್ನು ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.7.80 ಲಕ್ಷವರೆಗೆ ಸಾಲವಿರುತ್ತದೆ. 8% ಬಡ್ಡಿ ಹಾಕಿ 5 ವರ್ಷಗಳಿಗೆ ಮಾಸಿಕ 16,500 ವರೆಗೆ ಇಎಂಐ ಪಾವತಿಸಬೇಕು.

ಹೊಸ ಮಾರುತಿ ಡಿಜೈರ್ ಕಾರಿನ ವಿಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.9.85 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.6.85 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.14,000 ವರೆಗೆ ಇಎಂಐ ಕಟ್ಟಬೇಕು.

ಮಾರುತಿ ಸುಜುಕಿ ಡಿಜೈರ್ ವಿಶೇಷತೆಗಳೇನು:

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು & ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಮ್ಯಾಗ್ಮಾ ಗ್ರೇ, ಗ್ಯಾಲಂಟ್ ರೆಡ್, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್ ಹಾಗೂ ಅಲ್ಲುರಿಂಗ್ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 5 ಆಸನಗಳನ್ನು ಒಳಗೊಂಡಿದೆ.

ಇದು 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24.79 ರಿಂದ 33.73 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್-ಸೆಂಟರ್ ಆರ್ಮ್‌ರೆಸ್ಟ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.

ನಿಮ್ಮ ಗಮನಕ್ಕೆ.. ಈ ಮಾರುತಿ ಸುಜುಕಿ ಡಿಜೈರ್ ಸೆಡಾನ್‌ನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Tuesday, July 29, 2025, 8:30 [IST]
English summary
Maruti suzuki dzire on road price and emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+