33 Km ಮೈಲೇಜ್.. 6 ಲಕ್ಷ, 5-ಸೀಟರ್.. Maruti Dzire ಕೊಳ್ಳಲು ಮುಂದಾದ ಗ್ರಾಹಕರು, ರೆಕಾರ್ಡ್ ಸಂಖ್ಯೆಯಲ್ಲಿ ಸೇಲ್ಸ್!

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜನಪ್ರಿಯ ಸೆಡಾನ್ ಆಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುವ ಕಾರಾಗಿಯೂ ಹೊರಹೊಮ್ಮಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಇತ್ತೀಚೆಗೆ, ಏಪ್ರಿಲ್ ತಿಂಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಮಾರಾಟ ವರದಿ ಪ್ರಕಟಗೊಂಡಿದೆ. ವಿಶೇಷವಾಗಿ ಹ್ಯುಂಡೈ ಕ್ರೆಟಾ ಎಸ್‌ಯುವಿ ಬಳಿಕ, ಇದೇ ಡಿಜೈರ್ ಎರಡನೇ ಸ್ಥಾನದಲ್ಲಿದೆ.

ಕಳೆದ ತಿಂಗಳು (ಏಪ್ರಿಲ್ - 2025) ಮಾರುತಿ ಸುಜುಕಿಯು ಸರಿ ಸುಮಾರು 16,996 ಯುನಿಟ್‌ ಡಿಜೈರ್ ಸೆಡಾನ್‌ಗಳನ್ನು ಮಾರಾಟಗೊಳಿಸಿದೆ. ಅದೇ ರೀತಿಯಲ್ಲಿ ಮಾರ್ಚ್‌ನಲ್ಲಿ 15,460 ಯುನಿಟ್, ಫೆಬ್ರವರಿಯಲ್ಲಿ 14,694 ಯುನಿಟ್ ಹಾಗೂ ಜನವರಿಯಲ್ಲಿ 15,383 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ.

Maruti Suzuki Dzire Sedan April 2025 Sales Details

ಹಾಗೆಯೇ 2024ರ ಕೊನೆಯ ತ್ರೈಮಾಸಿಕದಲ್ಲೂ 'ಮಾರುತಿ ಸುಜುಕಿ ಡಿಜೈರ್' ಸೆಡಾನ್‌ಗಳು ಉತ್ತಮ ಸಂಖ್ಯೆಯಲ್ಲಿಯೇ ಮಾರಾಟಗೊಂಡಿವೆ. ಡಿಸೆಂಬರ್‌ನಲ್ಲಿ 16,573 ಯುನಿಟ್, ನವೆಂಬರ್‌ನಲ್ಲಿ 11,779 ಯುನಿಟ್ & ಅಕ್ಟೋಬರ್‌ನಲ್ಲಿ 12,698 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ಪ್ರತಿ ತಿಂಗಳು ಬರೋಬ್ಬರಿ 14,000 ಯುನಿಟ್ ಡಿಜೈರ್ ಕಾರುಗಳು ಮಾರಾಟವಾಗಿವೆ.

ನಾಲ್ಕನೇ ತಲೆಮಾರಿನ ಮಾರುತಿ ಸುಜುಕಿ ಡಿಜೈರ್ ಸೆಡಾನ್‌ ಮಾರಾಟ ಸಂಖ್ಯೆ ಹೆಚ್ಚಳಗೊಳ್ಳಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರು ಸುರಕ್ಷತೆಯ ವಿಚಾರದಲ್ಲಿ ಗ್ಲೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದುಕೊಂಡಿದೆ. ಇದರಿಂದ ಮಾರಾಟ ಅಂಕಿಅಂಶಗಳು ಅಧಿಕಗೊಂಡಿವೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಜೊತೆಗೆ ಡಿಜೈರ್ ಸೆಡಾನ್‌ ಕಡಿಮೆ ಬೆಲೆಗೆ ಹೆಚ್ಚು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಹಿನ್ನೆಲೆ, ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

Maruti Suzuki Dzire Sedan April 2025 Sales Details

ಮಾರುತಿ ಸುಜುಕಿ ಡಿಜೈರ್ ವಿಶೇಷತೆಗಳೇನು..

ನೂತನ ಮಾರುತಿ ಸುಜುಕಿ ಡಿಜೈರ್ ಬಜೆಟ್ ಬೆಲೆಯಲ್ಲಿ ದೊರೆಯಲಿದ್ದು, ಖರೀದಿದಾರರು ಸಹ ಸುಲಭವಾಗಿ ಮನೆಗೆ ತರಬಹುದು. ಇದು ರೂ.6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಹೊರಭಾಗದಲ್ಲೂ ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದ್ದು, ನೋಡುಗರನ್ನು ಸೆಳೆಯುತ್ತದೆ. ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ & ಬ್ಲ್ಯೂಯಿಷ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

ಹೊಸ ಡಿಜೈರ್ ಕಾರು 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 382 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Maruti Suzuki Dzire Sedan April 2025 Sales Details

ಈ ಸೆಡಾನ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ರೇರ್ ಸೆಂಟರ್ ಆರ್ಮ್‌ರೆಸ್ಟ್ ಸನ್‌ರೂಫ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), 3-ಪಾಯಿಂಟ್ ಸೀಟ್ ಬೆಲ್ಟ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, May 6, 2025, 8:30 [IST]
English summary
Maruti suzuki dzire sedan april 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+