33 Km ಮೈಲೇಜ್.. 6 ಲಕ್ಷ, 5-ಸೀಟರ್.. ಮಾರುತಿ ಶೋರೂಂ ಮುಂದೆ ಕ್ಯೂ ನಿಂತ ಜನರು, 16,500 ಕಾರುಗಳು ಉಡೀಸ್!

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ವಿಶ್ವಾಸಾರ್ಹ ಸೆಡಾನ್‌ ಎಂದೇ ಹೆಸರುವಾಸಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಅಗ್ಗದ ದರದಲ್ಲೂ ಸಿಗುತ್ತದೆ. ಗ್ರಾಹಕರು ಕೂಡ ನಾ ಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಆಗಸ್ಟ್ ತಿಂಗಳು ಕೂಡ 'ಡಿಜೈರ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 16,509 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024 ಇದೇ ಅವಧಿಯಲ್ಲಿ 10,627 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 55.35% ಪ್ರಗತಿಯಾಗಿದೆ.

ಹೊಸ ಮಾರುತಿ ಡಿಜೈರ್ ಸೆಡಾನ್ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಾರಾಟಗೊಳ್ಳಲು ಹತ್ತಾರು ಕಾರಣಗಳಿವೆ. ಬಹುಮುಖ್ಯವಾಗಿ ಆಗಸ್ಟ್‌ನಲ್ಲಿ ಹಬ್ಬಗಳಿರುವ ಹಿನ್ನೆಲೆ, ಈ ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿದೆ. ಜೊತೆಗಿದು ಸುರಕ್ಷತೆಯ ದೃಷ್ಟಿಯಿಂದ ಗ್ಲೋಬಲ್ ಎನ್‌ಸಿಎಪಿ (Global NCAP) ಹಾಗೂ ಭಾರತ್ ಎನ್‌ಸಿಎಪಿ (Bharat NCAP) ಪರೀಕ್ಷೆಯಲ್ಲಿ 5-ಸ್ಟಾರ್ ರೇಟಿಂಗ್‌ನ್ನು ಪಡೆದಿದೆ. ಇದರಿಂದಾಗಿ ಉತ್ತಮ ಸಂಖ್ಯೆಯಲ್ಲಿ ಮಾರಾಟವವಾಗಿದೆ ಎಂದು ಹೇಳಲಾಗಿದೆ.

Maruti Suzuki Dzire Sedan August 2025 Sales Report

ಮಾರುತಿ ಸುಜುಕಿ ಡಿಜೈರ್ ವಿಶೇಷತೆಗಳೇನು:

ಇದೊಂದು ಸೆಡಾನ್ ಆಗಿದೆ. ಸದ್ಯ ಕನಿಷ್ಠ ರೂ.6.84 ಲಕ್ಷ ಹಾಗೂ ಗರಿಷ್ಠ ರೂ.10.19 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. ಕೇಂದ್ರ ಸರ್ಕಾರವು 1200 ಸಿಸಿ ವರೆಗಿನ ಪೆಟ್ರೋಲ್, ಸಿಎನ್‌ಜಿ & 1500 ಸಿಸಿ ವರೆಗಿನ ಡೀಸೆಲ್ ಎಂಜಿನ್‌ನ್ನು ಪಡೆದಿರುವ ಕಾರುಗಳ ಖರೀದಿ ಮೇಲಿನ ಜಿಎಸ್‌ಟಿ ಪ್ರಮಾಣವನ್ನು 28% ರಿಂದ 18%ಗೆ ಕಡಿತಗೊಳಿಸಿದೆ. ನೂತನ ದರಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದ್ದು, ನಂತರದಲ್ಲಿ ಈ ಕಾರಿನ ಬೆಲೆ ದೊಡ್ಡ ಮಟ್ಟದಲ್ಲಿ ಇಳಿಕೆಯಾಗಲಿದೆ.

ನೂತನ ಡಿಜೈರ್ ಸೆಡಾನ್ ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದು ಹೆಚ್ಚು ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

Maruti Suzuki Dzire Sedan August 2025 Sales Report

ಈ ಕಾರು ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ಗ್ಯಾಲಂಟ್ ರೆಡ್ ಹಾಗೂ ಅಲ್ಲುರಿಂಗ್ ಬ್ಲೂ ಬಣ್ಣಗಳೊಂದಿಗೂ ಲಭ್ಯವಿದೆ. 3,995 ಎಂಎಂ ಉದ್ದ, 1,735 ಎಂಎಂ ಅಗಲ ಹಾಗೂ 1,515 ಎಂಎಂ ಎತ್ತರ ಕೂಡ ಇದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 1020 ಕೆಜಿ ತೂಕವಿದೆ.

ಇದು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24 ರಿಂದ 33 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಹೊಸ ಡಿಜೈರ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 382 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ಸನ್‌ರೂಫ್ ಹಾಗೂ ಆಟೋ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ಸುರಕ್ಷತೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) & 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Wednesday, September 10, 2025, 22:38 [IST]
English summary
Maruti suzuki dzire sedan august 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+