33 ಕಿ.ಮೀ ಮೈಲೇಜ್, 6 ಲಕ್ಷ.. ಇನ್ನು Maruti Dzire ಅತಿ ಸುರಕ್ಷಿತ ಕಾರು, ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ರೇಟಿಂಗ್!

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜನಪ್ರಿಯ ಸೆಡಾನ್ ಆಗಿದೆ. ಈ 'ಮೇ' ತಿಂಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಬರೋಬ್ಬರಿ 18,084 ಯುನಿಟ್‌ 'ಡಿಜೈರ್' ಸೆಡಾನ್‌ಗಳನ್ನು ಮಾರಾಟ ಮಾಡಲಾಗಿದೆ. ಸದ್ಯ ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) ನೂತನ 'ಡಿಜೈರ್‌'ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ.

ಹೊಚ್ಚ ಹೊಸ ಮಾರುತಿ ಸುಜುಕಿ ಡಿಜೈರ್ ಸೆಡಾನ್, ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 29.46 ಅಂಕಗಳನ್ನು ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 41.57 ಅಂಕಗಳನ್ನು ಗಳಿಸಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿ ಯಶಸ್ವಿಯಾಗಿದೆ.

Maruti Suzuki Dzire Sedan Get 5 Star Safety Rating in Bharat NCAP Details

ಮಾರುತಿ ಸುಜುಕಿ ಡಿಜೈರ್ ಕಾರಿನ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) 'ಎಲ್ಎಕ್ಸ್ಐ'ನ್ನು ಮಾತ್ರ ಭಾರತ್ ಎನ್‌ಸಿಎಪಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ಹೊರತಾಗಿಯೂ ಪ್ರಸ್ತುತ ನೀಡಲಾಗಿರುವ ರೇಟಿಂಗ್‌ ಈ ಸೆಡಾನ್‌ನ ಎಲ್ಲ ರೂಪಾಂತರಗಳಿಗೂ ಅನ್ವಯಿಸುತ್ತದೆ. ವಿಶೇಷವೆಂಬಂತೆ ಇದೇ 'ಡಿಜೈರ್' ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದ ದೇಶದ ಮೊದಲ ಸೆಡಾನ್ ಎಂಬ ಹಿರಿಮೆಗೂ ಪಾತ್ರವಾಗಿದೆ.

ಹೊಸ ಡಿಜೈರ್ ಸೆಡಾನ್ ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.

Maruti Suzuki Dzire Sedan Get 5 Star Safety Rating in Bharat NCAP Details

ಕಳೆದ ನವೆಂಬರ್‌ನಲ್ಲಿ ಜಾಗತಿಕವಾಗಿ ವಾಹನಗಳ ಸುರಕ್ಷತಾ ಪರೀಕ್ಷೆ ನಡೆಸುವ 'ಗ್ಲೋಬಲ್ ಎನ್‌ಸಿಎಪಿ' ಕೂಡ ಇದೇ ಮಾರುತಿ ಸುಜುಕಿ ಡಿಜೈರ್ ಸೆಡಾನ್‌ಗೆ ಗರಿಷ್ಠ ರೇಟಿಂಗ್ ನೀಡಿತ್ತು. ಈ ಕಾರು ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 31.24 ಅಂಕ ಗಳಿಸಿ, 5-ಸ್ಟಾರ್ ರೇಟಿಂಗ್‌ನ್ನು ಪಡೆದಿತ್ತು. ಮಕ್ಕಳ ರಕ್ಷಣೆ ವಿಭಾಗದಲ್ಲಿ 42ಕ್ಕೆ 39.20 ಅಂಕ ಪಡೆದು 4-ಸ್ಟಾರ್ ರೇಟಿಂಗ್‌ನ್ನು ಗಳಿಸಿತ್ತು.

ಮಾರುತಿ ಸುಜುಕಿ ಡಿಜೈರ್ ವಿಶೇಷತೆಗಳೇನು..

ಇದೊಂದು ಪ್ರಮುಖ ಸೆಡಾನ್ ಆಗಿದೆ. ರೂ.6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ ಆಯ್ಕೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 33 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರು 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 382 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. ಇದು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋ ಎಸಿ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, June 12, 2025, 8:30 [IST]
English summary
Maruti suzuki dzire sedan get 5 star safety rating in bharat ncap details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+