Dzire: 5-ಸ್ಟಾರ್ ಸೇಫ್ಟಿಯ ಮಾರುತಿ ಡಿಜೈರ್ ಕಾರು ಭೀಕರ ಅಪಘಾತಕ್ಕೆ ತುತ್ತು, ನಿರ್ಮಾಣ ಗುಣಮಟಕ್ಕೆ ಸರಿಸಾಟಿಯೇ ಇಲ್ಲ!

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜನಪ್ರಿಯ ಸೆಡಾನ್ ಆಗಿದೆ. ಕಳೆದ ನವೆಂಬರ್ 11 ರಂದು ಈ ಕಾರನ್ನು ಹೊಸ ರೂಪದಲ್ಲಿ ಮಾರಾಟಕ್ಕೆ ತರಲಾಗಿತ್ತು. ನೂತನ ಡಿಜೈರ್ ಅತ್ಯಂತ ಸುರಕ್ಷಿತ ಕಾರಾಗಿಯೂ ಹೊರಹೊಮ್ಮಿದೆ. 'ಗ್ಲೋಬಲ್ ಎನ್‌ಸಿಎಪಿ'ಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ ಪಡೆದ ಕಂಪನಿಯ ಮೊದಲ ಕಾರು ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಸದ್ಯ ಈ ಡಿಜೈರ್ ಸೆಡಾನ್ ಭೀಕರ ಅಪಘಾತಕ್ಕೆ ತುತ್ತಾಗಿದ್ದು, ಹೆಚ್ಚಿನ ಹಾನಿಯಾಗಿದೆ. ಆದರೂ ಡಿಜೈರ್‌ನ ನಿರ್ಮಾಣ ಗುಣಮಟ್ಟಕ್ಕೆ ಸರಿಸಾಟಿಯೇ ಇಲ್ಲ ಎಂದು ಹೇಳಬಹುದು.

ಮೋಟಾರ್‌ಬೈಗ್ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ನೂತನ 'ಮಾರುತಿ ಸುಜುಕಿ ಡಿಜೈರ್' ಸೆಡಾನ್ ಅಪಘಾತಕ್ಕೆ ಒಳಗಾಗಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಬಹುಶಃ ಕಾಂಕ್ರೀಟ್ ತಡೆಗೋಡೆಯೊಂದಕ್ಕೆ ಡಿಜೈರ್ ಕಾರು ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಈ ಸೆಡಾನ್‌ನ ಬಲಭಾಗಕ್ಕೆ ಹೆಚ್ಚಿನ ಹಾನಿಯಾಗಿದೆ. ಜೊತೆಗೆ ಎಡಭಾಗವು ಸ್ವಲ್ಪ ಮಟ್ಟಿಗೆ ಡೆಂಟ್ ಆಗಿರುವುದನ್ನು ಗಮನಿಸಬಹುದು.

Maruti Suzuki Dzire Sedan Has Been Major Accident Proved As A 5 Star Safety Car

ಆದರೆ, ಈ ಅಪಘಾತ ಎಲ್ಲಿ ಸಂಭವಿಸಿತು.. ಹೇಗೆ ನಡೆಯಿತು, ಕಾರಿನಲ್ಲಿ ಎಷ್ಟು ಜನರಿದ್ದರೂ ಎಂಬುದರ ಬಗ್ಗೆ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಡಿಜೈರ್ ಅಪಘಾತಕ್ಕೆ ತುತ್ತಾಗಿದ್ದಾಗ 6 ಏರ್‌ಬ್ಯಾಗ್‌ಗಳು ಕೂಡ ತೆರೆದುಕೊಂಡಿರುವುದನ್ನು ನೋಡಬಹುದು. ಹಾಗೆಯೇ ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಹೇಳಲಾಗಿದೆ.

ಜಾಗತಿಕವಾಗಿ ವಾಹನಗಳ ಸುರಕ್ಷತಾ ಪರೀಕ್ಷೆ ನಡೆಸುವ 'ಗ್ಲೋಬಲ್ ಎನ್‌ಸಿಎಪಿ' ಈ ಮಾರುತಿ ಡಿಜೈರ್ ಸೆಡಾನ್‌ನ್ನು ಹಲವು ಹಂತಗಳಲ್ಲಿ ಪರಿಶೀಲನೆ ನಡೆಸಿ, ಗರಿಷ್ಠ ಸೇಫ್ಟಿ ರೇಟಿಂಗ್ ನೀಡಿದೆ. ಈ ಕಾರು ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 31.24 ಅಂಕ ಗಳಿಸಿ 5-ಸ್ಟಾರ್ ರೇಟಿಂಗ್‌ನ್ನು ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 42ಕ್ಕೆ 39.20 ಅಂಕ ಪಡೆದು 4-ಸ್ಟಾರ್ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ.

Maruti Suzuki Dzire Sedan Has Been Major Accident Proved As A 5 Star Safety Car

ನೂತನ ಡಿಜೈರ್ ಪ್ರಯಾಣಿಕರ ರಕ್ಷಣೆಗಾಗಿ ಹತ್ತಾರು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಹೊಸ ಮಾರುತಿ ಸುಜುಕಿ ಡಿಜೈರ್ ಸೆಡಾನ್ ರೂ.6.84 ಲಕ್ಷದಿಂದ ರೂ.10.19 ಲಕ್ಷ ಎಕ್ಸ್-ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಈ ಡಿಜೈರ್ ಕಾರಿನಲ್ಲಿ 5 ಮಂದಿ ಸುಲಭವಾಗಿ ಪ್ರಯಾಣ ಮಾಡಬಹುದು. ನೂತನ ಸೆಡಾನ್ ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಮತ್ತು ಬ್ಲ್ಯೂಯಿಷ್ ಬ್ಲ್ಯಾಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಸೆಂಟರ್ ಆರ್ಮ್‌ರೆಸ್ಟ್ ಸನ್‌ರೂಫ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, March 5, 2025, 12:29 [IST]
English summary
Maruti suzuki dzire sedan has been major accident proved as a 5 star safety car
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+