33.73 Km ಮೈಲೇಜ್.. 5-ಸೀಟರ್, 6.84 ಲಕ್ಷ.. ಮಾರುತಿಯ ಮೊದಲ 5-ಸ್ಟಾರ್ ಸೇಫ್ಟಿ ಕಾರಿಗೆ ಮುಗಿಬಿದ್ದ ಗ್ರಾಹಕರು!

ಭಾರತದಲ್ಲಿ ಅತಿ ದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ 2024ರ ನವೆಂಬರ್‌ನಲ್ಲಿ ಕಂಪನಿಯು ನಾಲ್ಕನೇ ತಲೆಮಾರಿನ ಹೊಸ ಡಿಜೈರ್ (Dzire) ಸೆಡಾನ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಈ ಕಾರನ್ನು ಗ್ಲೋಬಲ್ ಎನ್‌ಸಿಎಪಿ (Global NCAP) ಸಂಸ್ಥೆ ಅತ್ಯಂತ ಸುರಕ್ಷಿತ ಸೆಡಾನ್‌ ಎಂದು ನಿರ್ಣಯಿಸಿ, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಕೂಡ ನೀಡಿದೆ. ಸದ್ಯ, ಜನವರಿಯಲ್ಲಿಯೂ ನೂತನ ಡಿಜೈರ್ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಜನವರಿ - 2025) ಹೊಸ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್‌ನ 15,383 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ. ಇದರೊಂದಿಗೆ ಈ ಕಾರು, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಂಡ ಟಾಪ್ 10 ಕಾರುಗಳ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

Maruti Suzuki Dzire Sedan January 2025 Sales Report Setails

ಮೊದಲ ಸ್ಥಾನದಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ (24,078 ಯುನಿಟ್), ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ ಬಲೆನೊ (19,965 ಯುನಿಟ್), ಮೂರನೇ ಸ್ಥಾನದಲ್ಲಿ ಹ್ಯುಂಡೈ ಕ್ರೆಟಾ (18,522 ಯುನಿಟ್), ನಾಲ್ಕನೇ ಸ್ಥಾನದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ (17,081 ಯುನಿಟ್) ಹಾಗೂ ಐದನೇ ಸ್ಥಾನದಲ್ಲಿ ಟಾಟಾ ಪಂಚ್ (16,231 ಯುನಿಟ್) ಇದೆ.

ಆರನೇ ಸ್ಥಾನದಲ್ಲಿ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (15,784 ಯುನಿಟ್), ಏಳನೇ ಸ್ಥಾನದಲ್ಲಿ ಮಹೀಂದ್ರಾ ಸ್ಕಾರ್ಪಿಯೋ (15,442 ಯುನಿಟ್), ಎಂಟನೇ ಸ್ಥಾನದಲ್ಲಿ ಟಾಟಾ ನೆಕ್ಸಾನ್ (15,397 ಯುನಿಟ್‌) ಹಾಗೂ ಹತ್ತನೇ ಸ್ಥಾನವನ್ನು ಮಾರುತಿ ಸುಜುಕಿ ಫ್ರಾಂಕ್ಸ್ (15,192 ಯುನಿಟ್‌) ತನ್ನದಾಗಿಸಿಕೊಂಡಿದೆ.

Maruti Suzuki Dzire Sedan January 2025 Sales Report Setails

ಮಾರುತಿ ಸುಜುಕಿ ಡಿಜೈರ್ ವಿಶೇಷತೆಗಳೇನು: ಈ ಕಾರು ಕನಿಷ್ಠ ರೂ.6.84 ಲಕ್ಷ ಮತ್ತು ಗರಿಷ್ಠ ರೂ.10.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಇದು ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಗ್ಯಾಲಂಟ್ ರೆಡ್, ಅಲ್ಲುರಿಂಗ್ ಬ್ಲೂ, ಬ್ಲೂಯಿಶ್ ಬ್ಲ್ಯಾಕ್, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮ್ಯಾಗ್ಮಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 382 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ತನ್ನದಾಗಿಸಿಕೊಂಡಿದೆ.

Maruti Suzuki Dzire Sedan January 2025 Sales Report Setails

ನೂತನ ಸೆಡಾನ್ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) & 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, February 6, 2025, 11:04 [IST]
English summary
Maruti suzuki dzire sedan january 2025 sales report details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+