33 Km ಮೈಲೇಜ್.. 6 ಲಕ್ಷ, 5-ಸ್ಟಾರ್ ಸೇಫ್ಟಿಯ Maruti Dzire ಇನ್ನೂ ನಂ 1.. ಸೇಲ್ಸ್‌ನಲ್ಲಿ ರೆಕಾರ್ಡ್, ಕಾರಣವೇನು?
ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಪ್ರಮುಖ ಸೆಡಾನ್ ಆಗಿ ಹೊರಹೊಮ್ಮಿದ್ದು, ಸಾಮಾನ್ಯ ಹಳ್ಳಿಯಿಂದ ರಾಷ್ಟ್ರ ರಾಜಧಾನಿ ದಿಲ್ಲಿವರೆಗೆ ಮನೆ ಮಾತಾಗಿದೆ. ಸದ್ಯ, ಈ 'ಮೇ' ತಿಂಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಅದರಲ್ಲಿ ಇದೇ 'ಡಿಜೈರ್' ಮೊದಲ ಸ್ಥಾನದಲ್ಲಿದ್ದು, ಕಂಪನಿಯು ನಿರೀಕ್ಷೆ ಮಾಡಿದ್ದಕ್ಕಿಂತ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬನ್ನಿ, ಆ ಬಗ್ಗೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೋದ ತಿಂಗಳು (ಮೇ - 2025) ಮಾರುತಿ ಸುಜುಕಿಯು18,084 ಯುನಿಟ್ 'ಡಿಜೈರ್' ಕಾರುಗಳನ್ನು ಮಾರಾಟಗೊಳಿಸಿದೆ. 2024ರ 'ಮೇ'ನಲ್ಲಿ 16,061 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ-ಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣ ಕೂಡ ವರ್ಷದಿಂದ ವರ್ಷಕ್ಕೆ (YoY) ಶೇಕಡ 13% ಬೆಳವಣಿಗೆಯಾಗಿದೆ.

ಇದೇ ವರ್ಷದ ಮೊದಲ 4 ತಿಂಗಳಲ್ಲೂ ಮಾರುತಿ ಸುಜುಕಿ ಡಿಜೈರ್ ಸೆಡಾನ್‌ಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿವೆ. ಏಪ್ರಿಲ್‌ನಲ್ಲಿ 16,996 ಯುನಿಟ್, ಮಾರ್ಚ್‌ನಲ್ಲಿ 15,460 ಯುನಿಟ್, ಫೆಬ್ರವರಿಯಲ್ಲಿ 14,694 ಯುನಿಟ್ ಮತ್ತು ಜನವರಿಯಲ್ಲಿ 15,383 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿಅಂಶವನ್ನು ಲೆಕ್ಕಹಾಕಿದಾಗ ಪ್ರತಿ ತಿಂಗಳು ಕನಿಷ್ಠ 16,000 ಯುನಿಟ್ ಕಾರುಗಳು ಮಾರಾಟವಾಗಿವೆ.
ಮಾರುತಿ ಸುಜುಕಿ ಡಿಜೈರ್ ಸೆಡಾನ್‌ಗಳು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಳ್ಳಲು ಹತ್ತಾರು ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಗ್ರಾಹಕರು ಸಹ ನಾಮುಂದು - ತಾಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಹಾಗೆಯೇ, ಇದೇ ಕಾರು ಗ್ಲೋಬಲ್ ಎನ್‌ಸಿಎಪಿಯಿಂದ ಸುರಕ್ಷತೆಗಾಗಿ 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿರುವ ಹಿನ್ನೆಲೆ, ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಮಾರುತಿ ಸುಜುಕಿ ಡಿಜೈರ್ ವಿಶೇಷತೆಗಳೇನು ಗೊತ್ತಾ?
ಇದೊಂದು ಸೆಡಾನ್ ಆಗಿದ್ದು, ಅತಿ ಕಡಿಮೆ ಬೆಲೆಗೆ ಗ್ರಾಹಕರ ಖರೀದಿಗೆ ಲಭ್ಯವಿದೆ. ಅದಕ್ಕೆ ತಕ್ಕಂತೆ ರೂ.6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಹೀಗಾಗಿ ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 382 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಅಮ್ತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವುದೇ ಸಾಮಾನ್ಯ ಬೈಕ್‌ಗೂ ಕಡಿಮೆಯಿಲ್ಲ ಎಂಬಂತೆ 24 ರಿಂದ 33 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಸೆಡಾನ್ ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮ್ಯಾಗ್ಮಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್ ಮತ್ತು ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications