ಅಂಬಾಸಿಡರ್‌ಗೆ ಪುನರ್ಜನ್ಮ: ಬೈಕ್‌ನಂತೆ 33 ಕಿ.ಮೀ ಮೈಲೇಜ್.. 6.26 ಲಕ್ಷ, ಈ ಜನಪ್ರಿಯ ಕಾರಿಗೆ ಮನಸೋತ ಗ್ರಾಹಕರು!
ಭಾರತದಲ್ಲಿ ದಶಕಗಳ ಹಿಂದೆ 'ಸೆಡಾನ್' ಕಾರುಗಳಿಗೆ ವಿಪರೀತವಾದ ಬೇಡಿಕೆಯಿತ್ತು. ಅದರಲ್ಲೂ ಈ ವಿಭಾಗದಲ್ಲಿ ಹಿಂದೂಸ್ತಾನ್ ಅಂಬಾಸಿಡರ್ (Hindustan Ambassador) ಪಾರುಪತ್ಯ ಸಾಧಿಸಿತ್ತು. 1957 ರಿಂದ 2014 ವರೆಗೆ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿತ್ತು. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದರು. ಆದರೆ, ಇತ್ತೀಚಿನ ವರ್ಷಗಳಲ್ಲಿ ಎಸ್‌ಯುವಿಗಳ ಆರ್ಭಟದಿಂದಾಗಿ ಸೆಡಾನ್‌ಗಳನ್ನು ಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ.
ಸದ್ಯ, ಇದಕ್ಕೆ ಅಪವಾದವೆಂಬಂತೆ 'ಸೆಡಾನ್' ವಿಭಾಗದಲ್ಲಿ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಪಾರುಪತ್ಯ ಸಾಧಿಸುತ್ತಿದೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಅದು ಈ ನವೆಂಬರ್ನಲ್ಲೂ ಮುಂದುವರಿದಿದೆ. ಒಟ್ಟು 21,082 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 11,779 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 79% ಪ್ರಗತಿಯಾಗಿದೆ.

ಈ ನವೆಂಬರ್ ತಿಂಗಳು 'ಮಾರುತಿ ಡಿಜೈರ್' ಮಾರಾಟ ಸಂಖ್ಯೆ ಹೆಚ್ಚಳಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ, ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಜೊತೆಗೆ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಗ್ಲೋಬಲ್ ಎನ್‌ಸಿಎಪಿ ಹಾಗೂ ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಹೀಗಾಗಿ, ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಹೀಗಾಗಿ 'ಡಿಜೈರ್' ಮಾರಾಟವು ಅಧಿಕಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
'ಮಾರುತಿ ಸುಜುಕಿ ಡಿಜೈರ್' ವಿಶೇಷತೆಗಳೇನು:
ಇದು ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಬಹುದು. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಡಿಜೈರ್' ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 15-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಬ್ಲೂಯಿಶ್ ಬ್ಲ್ಯಾಕ್, ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ಗ್ಯಾಲಂಟ್ ರೆಡ್ ಹಾಗೂ ಅಲ್ಲುರಿಂಗ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ಈ ಕಾರು ಶಕ್ತಿಯುತವಾದ 2 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 160 ಕೆಎಂಪಿಹೆಚ್ ಸ್ಪೀಡ್‌ನ್ನು ಪಡೆದಿದೆ. ಕೇವಲ 17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಇದು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 382 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್‌ಪ್ಲೇ, ಆಂಡ್ರಾಯ್ಡ್ ಆಟೋ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ 'ಮಾರುತಿ ಡಿಜೈರ್' ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ರೇರ್ ಪಾರ್ಕಿಂಗ್ ಸೆನ್ಸರ್ಸ್, ಕ್ರೂಸ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications