Maruti: 33.73 ಕಿ.ಮೀ ಮೈಲೇಜ್.. 6.26 ಲಕ್ಷ, ಈ ಜನಪ್ರಿಯ ಮಾರುತಿ ಕಾರಿನ ಕುರಿತ ಪ್ರಮುಖಾಂಶಗಳು!

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಪ್ರಖ್ಯಾತ ಸೆಡಾನ್ ಎಂದೇ ಹೆಸರುವಾಸಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ನವೀನ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಎಲ್ಲ ವರ್ಗದ ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಬೇಕೇ.. ಹಾಗಾದರೆ 'ಡಿಜೈರ್' ಸೆಡಾನ್ ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.6.26 ಲಕ್ಷ ಹಾಗೂ ಗರಿಷ್ಠ 9.31 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ (LXi), ವಿಎಕ್ಸ್ಐ (VXi), ಝಡ್ಎಕ್ಸ್ಐ (ZXi) ಮತ್ತು ಝಡ್ಎಕ್ಸ್ಐ ಪ್ಲಸ್ (ZXi Plus) ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Dzire Sedan Price Design Mileage Features And All Top Things

ವಿನ್ಯಾಸ & ಬಣ್ಣಗಳು (Design & Colors):

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15 ಇಂಚಿನ ಡುಯಲ್-ಟೋನ್ ಡೈಮಂಡ್ ಕಟ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಬ್ಲ್ಯೂಯಿಶ್ ಬ್ಲ್ಯಾಕ್, ಪರ್ಲ್ ಆರ್ಕ್ಟಿಕ್ ವೈಟ್, ಗ್ಯಾಲಂಟ್ ರೆಡ್ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ಹೊಸ 'ಡಿಜೈರ್' ಸಾಕಷ್ಟು ವಿಶಾಲವಾಗಿದೆ. 3,995 ಎಂಎಂ ಉದ್ದ, 1,735 ಎಂಎಂ ಅಗಲ ಮತ್ತು 1,515 ಎಂಎಂ ಎತ್ತರವಿದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,450 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 1435 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ದೂರದ ಊರುಗಳಿಗೆ ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 382 ಲೀ. ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಪೆಟ್ರೋಲ್+ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 24.79 ರಿಂದ 33.73 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 160 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. 17.04 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):

ನೂತನ 'ಮಾರುತಿ ಡಿಜೈರ್' ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್‌ಪ್ಲೇ, ಆಂಡ್ರಾಯ್ಡ್ ಆಟೋ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ ಆಟೋ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಕ್ರೂಸ್ ಕಂಟ್ರೋಲ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Sunday, November 30, 2025, 21:33 [IST]
English summary
Maruti suzuki dzire sedan price design mileage features and all top things
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+