Maruti Dzire: 5-ಸ್ಟಾರ್ ಸೇಫ್ಟಿ, ಹೊಸ ಮಾರುತಿ ಡಿಜೈರ್ ಕಾರು ಖರೀದಿಸಬೇಕೇ.. ಈ ವಿಷಯದ ಬಗ್ಗೆ ಗೊತ್ತಿರಲಿ!
ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಇತ್ತೀಚೆಗೆ ಫೆ.1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಎಲ್ಲ ಕಾರುಗಳ ಬೆಲೆಯನ್ನು ಮಾಡೆಲ್‌ಗಳಿಗೆ ತಕ್ಕಂತೆ ರೂ.1,500 ರಿಂದ ರೂ.32,500 ವರೆಗೆ ಹೆಚ್ಚಳ ಮಾಡುವುದಾಗಿ ಕಂಪನಿ ಘೋಷಣೆ ಮಾಡಿತ್ತು. ತಯಾರಿಕಾ ವೆಚ್ಚದ ಏರಿಕೆಯನ್ನು ಸರಿದೂಗಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೂಡ ತಿಳಿಸಿತ್ತು.
ಮಾರುತಿ ಸುಜುಕಿಯ ಬೆಲೆ ಏರಿಕೆ ಬಿಸಿ 5-ಸ್ಟಾರ್ ಸೇಫ್ಟಿ 'ಡಿಜೈರ್' ಸೆಡಾನ್‌ಗೂ ತಟ್ಟಿದೆ. ಈ ಕಾರಿನ ದರ ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ, ಬರೋಬ್ಬರಿ ರೂ.10,500 ವರೆಗೆ ಹೆಚ್ಚಳಗೊಂಡಿದೆ. ಹಾಗೆಂದ ಮಾತ್ರಕ್ಕೆ ಇದು ದೊಡ್ಡಮಟ್ಟದ ಬೆಲೆ ಏರಿಕೆಯಾಗಿಲ್ಲ. ಸಾಮಾನ್ಯವಾದ ಹೆಚ್ಚಳವಾಗಿದೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ನೂತನ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್, ರೂ.6.79 ಲಕ್ಷದಿಂದ ರೂ.10.14 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

ಈ ಕಾರು, ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ಬೃಹತ್ ಗಾತ್ರದ ಗ್ರಿಲ್, ಹೊಸದಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಹಿಂಭಾಗ (ರೇರ್) 'ವೈ' ಆಕಾರಕ್ಕೆ ಹೋಲುವ ಟೈಲ್‌ಲೈಟ್‌ಗಳು ಮತ್ತು ಡುಯಲ್- ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. 2,450 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಎಲ್ಎಕ್ಸ್ಐ ಮತ್ತು ವಿಎಕ್ಸ್ಐ ಸೇರಿದಂತೆ ಹಲವು ರೂಪಾಂತರಗಳ ಆಯ್ಕೆಯನ್ನು ಹೊಂದಿದೆ. ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ & ಬ್ಲ್ಯೂಯಿಷ್ ಬ್ಲ್ಯಾಕ್ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ. ಈ ಕಾರು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು.

ಹೊಸ ಸೆಡಾನ್ ಶಕ್ತಿಯುತವಾದ 1.2-ಲೀ. 3-ಸಿಲಿಂಡರ್ ಝಡ್-ಸೀರೀಸ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಸೆಂಟರ್ ಆರ್ಮ್‌ರೆಸ್ಟ್ ಸನ್‌ರೂಫ್ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ಮಾರುತಿ ಸುಜುಕಿ ಡಿಜೈರ್ ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), 3-ಪಾಯಿಂಟ್ ಸೀಟ್ ಬೆಲ್ಟ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಹೊಂದಿದೆ. ಈ ಕಾರಿಗೆ ಹೋಂಡಾ ಅಮೇಜ್, ಹ್ಯುಂಡೈ ಔರಾ ಹಾಗೂ ಟಾಟಾ ಟಿಗೂರ್ ಸೆಡಾನ್‌ಗಳು ಪ್ರಬಲವಾದ ಎದುರಾಳಿಯಾಗಿವೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications