33.73 Km ಮೈಲೇಜ್, 6.79 ಲಕ್ಷ.. 5-ಸೀಟರ್.. ದಾಖಲೆ ಸಂಖ್ಯೆಯಲ್ಲಿ ಈ ಪ್ರಖ್ಯಾತ ಮಾರುತಿ ಕಾರು ಮಾರಾಟ!

ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಅತ್ಯಂತ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಇದನ್ನು ಸೆಡಾನ್ ವಿಭಾಗದಲ್ಲಿ ಮಾರಾಟ ಮಾಡಲಾಗುತ್ತದೆ. ಎಸ್‌ಯುವಿಗಳಿಗೆ ಹೋಲಿಕೆ ಮಾಡಿದರೆ, ಸೆಡಾನ್‌ಗಳಿಗೆ ತೀವ್ರತರವಾಗಿ ಬೇಡಿಕೆ ಕುಸಿತವಾಗಿದೆ. ಆದರೂ ಡಿಜೈರ್ ಸೆಡಾನ್ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಕಳೆದ ವರ್ಷವು ಗ್ರಾಹಕರು ಈ ಕಾರನ್ನು ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮಾರುತಿ ಸುಜುಕಿ ಇಂಡಿಯಾ, 2024ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ 1,67,988 ಯುನಿಟ್ ಡಿಜೈರ್ ಸೆಡಾನ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. ಈ ಮೂಲಕ ಹೋದ ವರ್ಷ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಟಾಪ್ 10 ಕಾರಗಳ ಪಟ್ಟಿಯಲ್ಲಿ ಡಿಜೈರ್ ಎಂಟನೇ ಸ್ಥಾನದಲ್ಲಿದೆ. ನವೆಂಬರ್‌ನಲ್ಲಿ ನಾಲ್ಕನೇ ತಲೆಮಾರಿನ ಡಿಜೈರ್ ಕಾರನ್ನು ಪರಿಚಯಿಸಲಾಗಿದ್ದು, ಈ ವರ್ಷ (2025) ಮಾರಾಟ ಪ್ರಮಾಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

Maruti Suzuki Dzire Sedan Total Sales 2024 Details

2024ರಲ್ಲಿ ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡ ಕಾರುಗಳ ಪಟ್ಟಿಯಲ್ಲಿ ಟಾಟಾ ಪಂಚ್ (2,02,031 ಯುನಿಟ್) ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ (1,90,855 ಯುನಿಟ್), ಮೂರನೇ ಸ್ಥಾನದಲ್ಲಿ ಮಾರುತಿ ಸುಜುಕಿ ಎರ್ಟಿಗಾ (1,90,091 ಯುನಿಟ್) ನಾಲ್ಕನೇ ಸ್ಥಾನದಲ್ಲಿ ಮಾರುತಿ ಸುಜುಕಿ ಬ್ರೆಝಾ (1,88,160 ಯುನಿಟ್) ಮತ್ತು ಐದನೇ ಸ್ಥಾನದಲ್ಲಿ ಹ್ಯುಂಡೈ ಕ್ರೆಟಾ (1,86,919 ಯುನಿಟ್) ಇದೆ.

ಆರನೇ ಸ್ಥಾನವನ್ನು ಮಾರುತಿ ಸುಜುಕಿ ಸ್ವಿಫ್ಟ್ (1,72,808 ಯುನಿಟ್) ಹಾಗೂ ಏಳನೇ ಸ್ಥಾನವನ್ನು ಮಾರುತಿ ಸುಜುಕಿ ಬಲೆನೊ (1,72,094 ಯುನಿಟ್) ಕಾರುಗಳು ತನ್ನದಾಗಿಸಿಕೊಂಡಿವೆ. ಒಂಬತ್ತನೇ ಸ್ಥಾನದಲ್ಲಿ ಮಹೀಂದ್ರಾ ಸ್ಕಾರ್ಪಿಯೋ (1,66,364 ಯುನಿಟ್) ಮತ್ತು ಹತ್ತನೇ ಸ್ಥಾನದಲ್ಲಿ ಟಾಟಾ ನೆಕ್ಸಾನ್ (1,61,611 ಯುನಿಟ್) ಕಾರುಗಳಿವೆ.

Maruti Suzuki Dzire Sedan Total Sales 2024 Details

ಈ ಮಾರಾಟದ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಕಳೆದ ವರ್ಷ (2024) ಪ್ರತಿ ತಿಂಗಳು ಸರಾಸರಿ 13,999 ಯುನಿಟ್ ಮಾರುತಿ ಸುಜುಕಿ ಡಿಜೈರ್ ಕಾರುಗಳು ಮಾರಾಟವಾಗಿವೆ. ಇದರೊಂದಿಗೆ ಡಿಜೈರ್ ಸೆಡಾನ್‌ ಆಗಿದ್ದರೂ ಹ್ಯಾಚ್‌ಬ್ಯಾಕ್, ಎಸ್‌ಯುವಿ ಹಾಗೂ ಎಂಪಿವಿಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡುತ್ತಿದೆ ಎಂದು ಹೇಳಬಹುದು.

ಸದ್ಯ ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ಹೊಚ್ಚ ಹೊಸ ಮಾರುತಿ ಸುಜುಕಿ ಡಿಜೈರ್ ಸೆಡಾನ್, ರೂ.6.79 ಲಕ್ಷದಿಂದ ರೂ.10.14 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣ ಮಾಡಬಹುದು.

Maruti Suzuki Dzire Sedan Total Sales 2024 Details

ನೂತನ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 382 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, January 10, 2025, 12:28 [IST]
English summary
Maruti suzuki dzire sedan total sales 2024 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+