ಶೋರೂಂ ಮುಂದೆ ಸಾಲು ಕಟ್ಟಿದ ಗ್ರಾಹಕರು! 33 Km ಮೈಲೇಜ್.. ಬರೀ 6.26 ಲಕ್ಷ.. ಈ ಮಾರುತಿ ಕಾರಿಗೆ ಫುಲ್ ಡಿಮ್ಯಾಂಡ್
ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜಗಮೆಚ್ಚಿದ ಸೆಡಾನ್ ಆಗಿದೆ. ಇದು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯೂ ಸಿಗುತ್ತದೆ. ಸದ್ಯ, ಈ ಸೆಪ್ಟೆಂಬರ್ ತಿಂಗಳಲ್ಲಿ ದೇಶೀಯವಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 5 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಅದರಲ್ಲೂ ಇದೇ 'ಡಿಜೈರ್' ಎರಡನೇ ಸ್ಥಾನದಲ್ಲಿದೆ. ಸರಿ ಸುಮಾರು 20,038 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. ಮೊದಲ ಸ್ಥಾನವನ್ನು ಟಾಟಾ ನೆಕ್ಸಾನ್ (22,573 ಯುನಿಟ್‌ಗಳು) ತನ್ನದಾಯಿಸಿಕೊಂಡಿದೆ.
ಇದರೊಂದಿಗೆ ಮೂರನೇ ಸ್ಥಾನದಲ್ಲಿ ಹ್ಯುಂಡೈ ಕ್ರೆಟಾ (18,861 ಯುನಿಟ್), ನಾಲ್ಕನೇ ಸ್ಥಾನದಲ್ಲಿ ಮಹೀಂದ್ರಾ ಸ್ಕಾರ್ಪಿಯೋ (18,372 ಯುನಿಟ್‌ಗಳು) ಮತ್ತು ಐದನೇ ಸ್ಥಾನದಲ್ಲಿ ಟಾಟಾ ಪಂಚ್ (15,891 ಯುನಿಟ್‌ಗಳು) ಇದೆ. ಈ ವರ್ಷದ ಜೂನ್‌ನಿಂದ ಆಗಸ್ಟ್‌ವರೆಗೂ 'ಮಾರುತಿ ಡಿಜೈರ್' ಮಾರಾಟ ಪ್ರಮಾಣವು ಉತ್ತಮವಾಗಿದೆ. ಒಟ್ಟು 52,888 ಯುನಿಟ್‌ಗಳನ್ನು ಮಾರಲಾಗಿದೆ.

ಈ ಸೆಪ್ಟೆಂಬರ್‌ನಲ್ಲಿ 'ಡಿಜೈರ್' ಸೆಡಾನ್ ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿವೆ. ಇದರ ಸಂಪೂರ್ಣ ಪ್ರಯೋಜನವು ಡಿಜೈರ್‌ಗೂ ಲಭ್ಯವಿದ್ದು, ರೂ.87,700 ವರೆಗೆ ಬೆಲೆ ಇಳಿಕೆಯಾಗಿದೆ. ಜೊತೆಗಿದು ಪ್ರಯಾಣಿಕರ ರಕ್ಷಣೆಗಾಗಿ ಗ್ಲೋಬಲ್ ಎನ್‌ಸಿಎಪಿ ಮತ್ತು ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. ಹೀಗಾಗಿ, ಗ್ರಾಹಕರು ಕೂಡ ನಾ ಮುಂದು - ನಾ ಮುಂದು ಎಂನಂತೆ ಖರೀದಿ ಮಾಡುತ್ತಿದ್ದಾರೆ.
ಮಾರುತಿ ಸುಜುಕಿ ಡಿಜೈರ್ ವಿಶೇಷತೆಗಳೇನು:
ಇದು ಕನಿಷ್ಠ ರೂ.6.26 ಲಕ್ಷದಿಂದ ಗರಿಷ್ಠ ರೂ.9.31 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ಆಕರ್ಷಕವಾದ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.
ನೂತನ ಡಿಜೈರ್ ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ಗ್ಯಾಲಂಟ್ ರೆಡ್ ಮತ್ತು ಅಲ್ಲುರಿಂಗ್ ಬ್ಲೂ ಬಣ್ಣಗಳೊಂದಿಗೂ ದೊರೆಯುತ್ತದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,450 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಯಾವುದೇ ಸಾಮಾನ್ಯ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24 ರಿಂದ 33 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 160 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಸರಿ ಸುಮಾರು 12 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 382 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್‌ಪ್ಲೇ, ಆಂಡ್ರಾಯ್ಡ್ ಆಟೋ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಹೊಸ ಡಿಜೈರ್ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಒದಗಿಸುತ್ತದೆ. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಕ್ರೂಸ್ ಕಂಟ್ರೋಲ್, ಹೈ ಸ್ಪೀಡ್ ಅಲರ್ಟ್ ಸಿಸ್ಟಮ್ & 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








