ಟ್ಯಾಕ್ಸಿಯಿಂದ ಬದುಕು ಕಟ್ಟಿಕೊಳ್ಳಬೇಕೇ.. 6.79 ಲಕ್ಷಕ್ಕೆ ಹೊಸ ಮಾರುತಿ ಡಿಜೈರ್ ಟೂರ್ ಎಸ್ ಬಿಡುಗಡೆ, ಭಾರೀ ಮೈಲೇಜ್!

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (Maruti Suzuki India Limited - MSIL) ಅತಿ ದೊಡ್ಡ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಸದ್ಯ, ದುಡಿಯುವ ವರ್ಗದ ಜನರ ಅನುಕುಲಕ್ಕಾಗಿ 'ಡಿಜೈರ್' ಸೆಡಾನ್‌ನ ಟ್ಯಾಕ್ಸಿ ವರ್ಷನ್ 'ಟೂರ್ ಎಸ್'ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬನ್ನಿ.. ಈ ಕಾರಿನ ಬೆಲೆ ಹಾಗೂ ವಿಶೇಷತೆಗಳೇನು ಎಂಬುದನ್ನು ತಿಳಿಯೋಣ.

ಹೊಸ ತಲೆಮಾರಿನ ಮಾರುತಿ ಸುಜುಕಿ ಡಿಜೈರ್ ಟೂರ್ ಎಸ್ (New-Generation Maruti Suzuki Dzire Tour S) ಸೆಡಾನ್‌ನ್ನು ಅತ್ಯಂತ ಕೈಗೆಟುಕುವ ದರದಲ್ಲಿ ಪರಿಚಯಿಸಲಾಗಿದೆ. ಇದರ ಪೆಟ್ರೋಲ್ ಮಾಡೆಲ್ ರೂ.6.79 ಲಕ್ಷ ಹಾಗೂ ಸಿಎನ್‌ಜಿ ಮಾಡೆಲ್ ರೂ. 7.74 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

Maruti Suzuki Dzire Tour S Launched Rs 6 79 Lakh Starting Price Details

ಈ ಕಾರು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಅದು ಸಾಮಾನ್ಯ ಡಿಜೈರ್ ಸೆಡಾನ್‌ಗೆ ಹೋಲಿಕೆಯಾಗುತ್ತದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ 'ವೈ' ಆಕಾರಕ್ಕೆ ಹೋಲಿಕೆಯಾಗುವ ಟೈಲ್‌ಲೈಟ್‌ಗಳನ್ನು ಪಡೆದಿದೆ. ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಬ್ಲೂಯಿಶ್ ಬ್ಲೂ ಎಂಬ 3 ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಮಾರುತಿ ಸುಜುಕಿ ಡಿಜೈರ್ ಟೂರ್ ಎಸ್ ಕಾರಿನಲ್ಲೂ ಖಾಸಗಿ ಬಳಕೆಗೆ ಸಿಗುವ ಡಿಜೈರ್‌ನಂತೆಯೇ ಎರಡು ಪವರ್‌ಟ್ರೇನ್‌ನ್ನು ಬಳಕೆ ಮಾಡಲಾಗಿದೆ. ಇದರ 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್, 80 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್‌ 69 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಪೆಟ್ರೋಲ್ & ಸಿಎನ್‌ಜಿ ಮಾಡೆಲ್‌ಗಳೆರೆಡು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಾಗುತ್ತವೆ.

ಈ ಕಾರಿನ ಗರಿಷ್ಠ ವೇಗವನ್ನು 80 ಕೆಎಂಪಿಹೆಚ್‌ಗೆ ಸೀಮಿತಗೊಳಿಸಲಾಗಿದೆ. ಕಂಪನಿ ಪ್ರಕಾರ, ಪೆಟ್ರೋಲ್ ಮಾಡೆಲ್‌ 24.69 ಕಿ.ಮೀ ಹಾಗೂ ಸಿಎನ್‌ಜಿ ಮಾಡೆಲ್‌ 22.72 ಕೆಎಂ/ಕೆಜಿ ಮೈಲೇಜ್ ಕೊಡಲಿದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 382 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಹೊಸ ಮಾರುತಿ ಡಿಜೈರ್ ಟೂರ್ ಎಸ್ ಸೆಡಾನ್‌ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಅಲಾಯ್ ವೀಲ್‌ಗಳು, ರೇರ್ ಡಿಫಾಗರ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಆಯ್ಕೆಯನ್ನು ಪಡೆದಿದೆ. ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, March 19, 2025, 8:15 [IST]
English summary
Maruti suzuki dzire tour s launched rs 6 79 lakh starting price details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+