5-ಸೀಟರ್.. 500+ ಕಿ.ಮೀ ರೇಂಜ್! ಮೊದಲ ಎಲೆಕ್ಟ್ರಿಕ್ ಕಾರಿದು.. ಮಾರುತಿ ಇ ವಿಟಾರಾ ಕುರಿತಂತೆ ದೊಡ್ಡ ಘೋಷಣೆ!
ಬಹುನಿರೀಕ್ಷಿತ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಪರಿಸರ ಸ್ನೇಹಿಯಾದ ಈ ಕಾರನ್ನು ಬಿಡುಗಡೆಗೊಳಿಸಲು ಕಂಪನಿಯು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ನೂತನ ಎಲೆಕ್ಟ್ರಿಕ್ ಎಲೆಕ್ಟ್ರಿಕ್ ಎಸ್‌ಯುವಿ ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಹೊಸ 'ಇ-ವಿಟಾರಾ' ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ.
ಸದ್ಯ, ಮಾರುತಿ ಸುಜುಕಿ ಇ-ವಿಟಾರಾ ಕುರಿತಂತೆ ಮಹತ್ವದ ಘೋಷಣೆಯೊಂದನ್ನು ಮಾಡಲಾಗಿದೆ. ಸೆಪ್ಟೆಂಬರ್ 3 ರಂದು ಈ ಕಾರು ಅದ್ದೂರಿಯಾಗಿ ಮಾರಾಟಕ್ಕೆ ಬರಲಿದೆ. ಅದಕ್ಕೂ ಮೊದಲು ಆಗಸ್ಟ್ 26 ರಂದು ಗುಜರಾತ್‌ನ ಹಂಸಲ್‌ಪುರ ತಯಾರಿಕಾ ಘಟಕದಿಂದ ಪ್ರಪ್ರಥಮ 'ಇ-ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿಯನ್ನು ಹೊರತರಲಾಗುತ್ತದೆ ಎಂದು ವರದಿಯಾಗಿದೆ.

ಮಾರುತಿ ಸುಜುಕಿ ಇ-ವಿಟಾರಾ ವಿಶೇಷತೆಗಳೇನು:
ಈ ಎಲೆಕ್ಟ್ರಿಕ್ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದ್ದು, ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಹೇಳಲಾಗದೆ. ಭಾರತದಲ್ಲಿ ತಯಾರಿಸಿದ ಇದೇ ಕಾರನ್ನು 100ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲು ಸಹ ಕಂಪನಿಯು ಉದ್ದೇಶಿಸಿದೆ. ಈಗಾಗಲೇ, 'ಇ-ವಿಟಾರಾ' ಕುರಿತಂತೆ ಒಂದಷ್ಟು ವಿವರಗಳು ಬಹಿರಂಗಗೊಂಡಿವೆ.
ಇದು ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ ಮೂರು ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದೆ. ಹೊರಭಾಗದಲ್ಲೂ ನೋಡುಗರನ್ನು ಸೆಳೆಯುವಂತಹ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಮತ್ತು ಬೃಹಾಕಾರದ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
ನೂತನ ಇ-ವಿಟಾರಾ ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಬ್ಲ್ಯೂಯಿಸ್ ಬ್ಲ್ಯಾಕ್ ಹಾಗೂ ಒಪ್ಯುಲೆಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 4,275 ಎಂಎಂ ಉದ್ದ, 4,275 ಎಂಎಂ ಅಗಲ ಹಾಗೂ 1,800 ಎಂಎಂ ಎತ್ತರವು ಇದೆ. ಜೊತೆಗೆ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ವೀಲ್‌ಬೇಸ್‌ನ್ನು ಪಡೆದಿದೆ.
ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ & ರಜಾ ದಿನಗಳಲ್ಲಿ ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ದೊಡ್ಡ ಗಾತ್ರದ 398 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.
ಹೊಸ ಇ-ವಿಟಾರಾ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿರಲಿದೆ ಎನ್ನಲಾಗಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತಂತೆ ಕೆಲವೇ ದಿನಗಳಲ್ಲಿ ಅಧಿಕೃತ ವಿವರಗಳು ಹೊರಬೀಳಲಿವೆ.
ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿರಲಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.1-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯ ಅಂದರೆ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ನೂತನ ಮಾರುತಿ ಸುಜುಕಿ ಇ-ವಿಟಾರಾ ಟಾಟಾ ಹ್ಯಾರಿಯರ್ ಇವಿ, ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್, ಟಾಟಾ ಕರ್ವ್ ಇವಿ, ಎಂಜಿ ವಿಂಡ್ಸರ್ ಇವಿ, ಟಾಟಾ ನೆಕ್ಸಾನ್ ಇವಿಗಳು ಪ್ರಬಲವಾದ ಪ್ರತಿಸ್ಫರ್ಧಿಯಾಗಲಿದೆ. ಈ ಕಾರು ಬಿಡುಗಡೆಯಾದ ಮೇಲೆ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications