ಬಿಡುಗಡೆಗೂ ಮೊದಲೇ ಹೊಸ ಮಾರುತಿ ಇ ವಿಟಾರಾ ರಸ್ತೆಯಲ್ಲಿ.. 500+ ಕಿ.ಮೀ ರೇಂಜ್, ಬೆಲೆ ಅಗ್ಗವೇ?

ಬಹುನಿರೀಕ್ಷಿತ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿ, ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ನೂತನ ಕಾರನ್ನು ಮಾರಾಟಕ್ಕೆ ತರಲು ಎಲ್ಲ ರೀತಿಯ ತಯಾರಿಗಳು ನಡೆಯುತ್ತಿವೆ. ಇದು ಅತ್ಯಾಧುನಿಕ ತಂತ್ರಜ್ಞಾನ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಪರಿಸರ ಸ್ನೇಹಿಯಾಗಿರುವ ಇ-ವಿಟಾರಾ ಮೇಲೆ ಗ್ರಾಹಕರು ಕೂಡ ತುಂಬಾ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

ಈಚೆಗೆ ಹರಿಯಾಣದ ಗುರುಗ್ರಾಮದಲ್ಲಿ ಕಪ್ಪು (ಬ್ಲ್ಯಾಕ್) ಬಣ್ಣದ ಹೊಚ್ಚ ಹೊಸ 'ಮಾರುತಿ ಸುಜುಕಿ ಇ-ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿ ಪ್ರಾಯೋಜಿಕ ಸಂಚಾರ ನಡೆಸುವಾಗ ಕಂಡುಬಂದಿದೆ. ಅದರ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿಯೂ ಸೋರಿಕೆಯಾಗಿವೆ. ಇದರಲ್ಲಿ ಈ ಕಾರನ್ನು ಯಾವುದೇ ರೀತಿಯಿಂದಲ್ಲೂ ಮರೆಮಾಚಲಾಗಿಲ್ಲ. ಹೀಗಾಗಿ, ಇ-ವಿಟಾರಾ ಸಂಪೂರ್ಣವಾಗಿ ಸಿದ್ದಗೊಂಡಿದೆ ಎಂಬುದು ಗೊತ್ತಾಗುತ್ತಿದೆ.

Maruti Suzuki E Vitara Electric Suv Spied Undisguised Launch Soon Details

ಎಲ್ಲವು ಅಂದುಕೊಂಡಂತೆ ನಡೆದರೆ, ನೂತನ ಮಾರುತಿ ಇ-ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿ ಇದೇ ಸೆಪ್ಟೆಂಬರ್‌ನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ಕನಿಷ್ಠ ರೂ.17 ಲಕ್ಷ ಹಾಗೂ ಗರಿಷ್ಠ ರೂ.22.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಸದ್ಯ ಚೀನಾ ಅಪರೂಪದ ಅಯಸ್ಕಾಂತ ಖನಿಜಗಳನ್ನು ರಫ್ತು ಮಾಡುವುದನ್ನು ಸ್ಥಗಿತಗೊಳಿಸಿದೆ. ಇದು ಮಾರುತಿ ಸುಜುಕಿ ಇ-ವಿಟಾರಾ ಕಾರಿನ ಉತ್ಪಾದನೆ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ. ಅದಕ್ಕೆ ತಕ್ಕಂತೆ ಈ ಎಲೆಕ್ಟ್ರಿಕ್ ಎಸ್‌ಯುವಿಯ ತಯಾರಿಕಾ ಗುರಿಯನ್ನು ಪರಿಷ್ಕರಣೆ ಮಾಡಿಲಾಗಿದ್ದು, ಏಪ್ರಿಲ್‌ನಿಂದ ಸೆಪ್ಟೆಂಬರ್‌ ಅವಧಿಯಲ್ಲಿ 8,221 ಯುನಿಟ್‌ಗಳನ್ನು ಉತ್ಪಾದಿಸಲು ಯೋಜಿಸಲಾಗಿದೆ. ಆದರೂ 2026ರ ಮಾರ್ಚ್ ವೇಳೆಗೆ 67,000 ಯುನಿಟ್‌ಗಳನ್ನು ತಯಾರಿಸಲು ಉದ್ದೇಶಿಸಲಾಗಿದೆ.

Maruti Suzuki E Vitara Electric Suv Spied Undisguised Launch Soon Details

ಮಾರುತಿ ಸುಜುಕಿ ಇ-ವಿಟಾರಾ ವಿಶೇಷತೆಗಳೇನು:

ಈ ಎಲೆಕ್ಟ್ರಿಕ್ ಎಸ್‌ಯುವಿ ಹೊರಭಾಗದಲ್ಲಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, 'ವೈ' ಅಕ್ಷರದಂತಿರುವ ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್ ಮತ್ತು ಒಪ್ಯುಲೆಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ನೂತನ ಇ-ವಿಟಾರಾ ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯವಿರುವ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿ.ಮೀ ರೇಂಜ್ (ಮೈಲೇಜ್) ನೀಡುವ ನಿರೀಕ್ಷೆಯಿದೆ. ಇದು ಡೆಲ್ಟಾ, ಜಿಟಾ ಮತ್ತು ಆಲ್ಫಾ ಎಂಬ 3 ಅತ್ಯುತ್ತಮ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

Maruti Suzuki E Vitara Electric Suv Spied Undisguised Launch Soon Details

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.1-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ - ಫ್ರಂಟ್ ಸೀಟ್‌ಗಳು, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ - ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 - ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Source: Team Bhp

Article Published On: Monday, June 23, 2025, 15:51 [IST]
English summary
Maruti suzuki e vitara electric suv spied undisguised launch soon details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+