ಕಣ್ಣುಕುಕ್ಕುವ ಫೀಚರ್ಸ್‌, 5 ಸೀಟರ್.. ಮುಂದಿನ ತಿಂಗಳು ಹೊಸ Maruti e Vitara ಬಿಡುಗಡೆ, ಪ್ರಿ-ಬುಕ್ಕಿಂಗ್ ಶುರು?

ಹೊಚ್ಚ ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿ ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಕಾರು ನೋಡುಗರ ಕಣ್ಣುಕುಕ್ಕುವ ರೀತಿಯಲ್ಲಿ ಹೆಚ್ಚು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ. ಕಳೆದ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ತಯಾರಿಕೆಗೆ ಸಿದ್ಧಗೊಂಡಿದ್ದ ನೂತನ 'ಇ-ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿಯನ್ನು ಕಂಪನಿಯು ಪ್ರದರ್ಶನ ಮಾಡಲಾಗಿತ್ತು.

ಎಲ್ಲವು ಅಂದುಕೊಂಡರೆ ನಡೆದರೆ, ಹೊಸ ಮಾರುತಿ ಸುಜುಕಿ ಇ-ವಿಟಾರಾ ಎಸ್‌ಯುವಿ ಮುಂದಿನ ತಿಂಗಳೇ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸದ್ಯ ಈ ಕಾರಿಗಾಗಿ ಪ್ರಿ-ಬುಕ್ಕಿಂಗ್ ಶುರುವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Maruti Suzuki e Vitara Launch Next Month Unofficial Booking Open Details

ನೂತನ ಮಾರುತಿ ಸುಜುಕಿ ಇ-ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿಯಾಗಿರುವುದರಿಂದ ಸ್ವಲ್ಪ ಮಟ್ಟಿಗೆ ಹೆಚ್ಚಿನ ಬೆಲೆಯನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು, ರೂ.17 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ದರವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ಆದಷ್ಟು ಬೇಗ ಇ-ವಿಟಾರಾದ ಬೆಲೆ ಕುರಿತಂತೆ ಎಲ್ಲ ವಿವರಗಳು ದೊರೆಯಲಿವೆ.

ಟಾಟಾ ಕರ್ವ್ ಇವಿ ಹಾಗೂ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಎಸ್‌ಯುವಿಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಬಲ್ಲ ಇ-ವಿಟಾರಾ ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್ & ಒಪ್ಯುಲೆಂಟ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki e Vitara Launch Next Month Unofficial Booking Open Details

ಈ ಕಾರು 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿಲೋ ಮಿಟರ್‌ ಕ್ರಮಿಸುವ ನಿರೀಕ್ಷೆಯಿದೆ. ಜೊತೆಗೆ ಡೆಲ್ಟಾ, ಜಿಟಾ ಮತ್ತು ಆಲ್ಫಾ ಎಂಬ 3 ಅತ್ಯಾಕರ್ಷಕ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ.

ಹೊಸ ಮಾರುತಿ ಇ-ವಿಟಾರಾ ಎಸ್‌ಯುವಿಯು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಟಚ್‌ಸ್ಕ್ರೀನ್ - ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ - ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್ ಮತ್ತು ವೈರ್‌ಲೆಸ್ - ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki e Vitara Launch Next Month Unofficial Booking Open Details

ನೂತನ ಇ-ವಿಟಾರಾ ಎಲೆಕ್ಟ್ರಿಕ್ ಕಾರು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಬಹುಮುಖ್ಯವಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಲೆವೆಲ್ - 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, April 5, 2025, 18:36 [IST]
English summary
Maruti suzuki e vitara launch next month unofficial booking open details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+