ಮುಂದಿನ ತಿಂಗಳೇ ಮಾರುತಿಯ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆ ಸಾಧ್ಯತೆ.. ಬೆಲೆ ಎಷ್ಟಿರಲಿದೆ?

ಮಾರುತಿ ಸುಜುಕಿ ಇಂಡಿಯಾ (Maruti Suzuki India), ದೇಶೀಯ ಮಾರುಕಟ್ಟೆಯಲ್ಲಿ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ 'ಇ-ವಿಟಾರಾ'ವನ್ನು ಬಿಡುಗಡೆಗೊಳಿಸಲು ಭರದಿಂದ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಕಳೆದ ತಿಂಗಳು (ಜನವರಿ - 2025) ನವದೆಹಲಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಹೊಚ್ಚ ಹೊಸ ಇ-ವಿಟಾರಾವನ್ನು ಅನಾವರಣಗೊಳಿಸಿತ್ತು. ಸದ್ಯ, ಈ ಕಾರು ಮುಂದಿನ ತಿಂಗಳು (ಮಾರ್ಚ್) ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಬನ್ನಿ.. ನೂತನ ಇ-ವಿಟಾರಾದ ನಿರೀಕ್ಷಿತ ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಬೆಲೆ (Price): ನೂತನ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಸ್ವಲ್ಪ ಹೆಚ್ಚಿನ ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು ಕನಿಷ್ಠ ರೂ.17 ಲಕ್ಷ ಮತ್ತು ಗರಿಷ್ಠ ರೂ.22.50 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ.

Maruti Suzuki e Vitara May Be Launch Next Month Details

ವಿನ್ಯಾಸ (Design): ಈ ಎಲೆಕ್ಟ್ರಿಕ್ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, 'ವೈ' ಅಕ್ಷರಂತಿರುವ ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಒಪ್ಯುಲೆಂಟ್ ರೆಡ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೆ ದೊರೆಯುತ್ತದೆ.

ಕಾರ್ಯಕ್ಷಮತೆ (Performance): ಈ ಎರಡು ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಇದರ 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನಲ್ಲಿ ಉಪಯೋಗಿಸಿರುವ ಎಲೆಕ್ಟ್ರಿಕ್ ಮೋಟಾರ್, 144 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 192.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Maruti Suzuki e Vitara May Be Launch Next Month Details

ಇನ್ನೊಂದು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ಕಾರಿನಲ್ಲಿ ಬಳಸಿರುವ ಎಲೆಕ್ಟ್ರಿಕ್ ಮೋಟಾರ್, 174 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 192.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ನೂತನ ಇ-ವಿಟಾರಾ ಭರ್ತಿ ಚಾರ್ಜ್‌ನಲ್ಲಿ 500 ಕಿಲೋಮಿಟರ್‌ಗೂ ಹೆಚ್ಚಿನ ರೇಂಜ್ (ಮೈಲೇಜ್) ಕೊಡುತ್ತದೆ ಎಂದು ಹೇಳಲಾಗಿದೆ.

ಆಸನ ಆಯ್ಕೆ & ವೈಶಿಷ್ಟ್ಯಗಳು (Seat Capacity & Features): ಈ ಕಾರು 5 ಆಸನ ವ್ಯವಸ್ಥೆಯನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.1-ಇಂಚು), ಆಟೋ ಎಸಿ, ಆಂಬಿಯೆಂಟ್ ಲೈಟಿಂಗ್, 10-ವೇ ಪವರ್ಡ್ ಡ್ರೈವರ್ ಸೀಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki e Vitara May Be Launch Next Month Details

ಸುರಕ್ಷತಾ ವೈಶಿಷ್ಟ್ಯಗಳು (Safety Features): ಮಾರುತಿ ಸುಜುಕಿ ಇ-ವಿಟಾರಾ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಡಿಸ್ಕ್ ಬ್ರೇಕ್‌ಗಳು, ಮುಂಭಾಗ (ಫ್ರಂಟ್) - ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, February 25, 2025, 8:30 [IST]
English summary
Maruti suzuki e vitara may be launch next month details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+