Maruti: 500 ಕಿ.ಮೀ ಓಡುತ್ತೆ.. ಬರುವ ಮಂಗಳವಾರದಂದೇ ಹೊಸ ಮಾರುತಿ ಕಾರು ಬಿಡುಗಡೆ, ಬೆಲೆ ಎಷ್ಟು.. ಹೇಗಿದೆ?

ಹೊಚ್ಚ ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಬಿಡುಗಡೆಗೆ ಕಾಲ ಕೂಡಿಬಂದಿದೆ. ಇದೇ ಡಿಸೆಂಬರ್ 2 ರಂದು (ಮಂಗಳವಾರ) ಈ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗುತ್ತಿದೆ. ನೂತನ 'ಇ-ವಿಟಾರಾ' ಮೇಲೆ ಖರೀದಿದಾರರು ಕೂಡ ದೊಡ್ಡ ಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಬನ್ನಿ, ಈ ಕಾರಿನ ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬಹುನಿರೀಕ್ಷಿತ 'ಮಾರುತಿ ಇ-ವಿಟಾರಾ' ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಡೆಲ್ಟಾ (Delta), ಜಿಟಾ (Zeta) ಹಾಗೂ ಆಲ್ಫಾ (Alpha) ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗಲಿದೆ.

Maruti Suzuki e Vitara Suv Launch On 2 December In India Here The Details

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಗ್ರ್ಯಾಂಡಿಯರ್ ಗ್ರೇ, ಬ್ಲ್ಯೂಯಿಶ್ ಬ್ಲ್ಯಾಕ್ ಹಾಗೂ ಆಪ್ಯುಲೆಂಟ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯಲಿದೆ.

ಇದು ಸಾಕಷ್ಟು ದೊಡ್ಡ ಗಾತ್ರದಲ್ಲಿದೆ. 4,275 ಎಂಎಂ ಉದ್ದ, 4,275 ಎಂಎಂ ಅಗಲ ಮತ್ತು 1,800 ಎಂಎಂ ಎತ್ತರವಿದೆ. ಜೊತೆಗೆ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಮಾರುತಿ ಇ-ವಿಟಾರಾ' 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವ ಹೆಚ್ಚಿನ ಲಗೇಜ್ ಸಾಗಿಸಲು 320 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿರುವ ನಿರೀಕ್ಷೆಯಿದೆ.

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುವ ಸಾಧ್ಯತೆಯಿದೆ. ವಿಶೇಷವಾಗಿ ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ ಬ್ಯಾಟರಿ ಪ್ಯಾಕ್‌ನ್ನು ಕೇವಲ 50 ನಿಮಿಷಗಳಲ್ಲಿ ಶೇಕಡ 0 ರಿಂದ 80% ಚಾರ್ಜ್ ಮಾಡಬಹುದು.

ಇದರ ಕ್ಯಾಬಿನ್ ವಿನ್ಯಾಸವು ಅತ್ಯಾಕರ್ಷಕವಾಗಿದೆ. ಅದಕ್ಕೆ ತಕ್ಕಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬಹುಮುಖ್ಯವಾಗಿ 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋ ಎಸಿಗಳನ್ನು ಹೊಂದಿದೆ.

ನೂತನ 'ಇ-ವಿಟಾರಾ' ಸುರಕ್ಷತೆಗೂ ಹೆಸರುವಾಸಿಯಾಗಿದೆ. 'ಯುರೋ ಎನ್‌ಸಿಎಪಿ'ಯಿಂದ 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಗಳಿಸಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ಇದಕ್ಕೆ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric), ಮಹೀಂದ್ರಾ ಬಿಇ 6 (Mahindra BE 6), ವಿನ್‌ಫಾಸ್ಟ್ ವಿಎಫ್6 (VinFast VF6) ಮತ್ತು ಟಾಟಾ ಹ್ಯಾರಿಯರ್ ಇವಿ (Tata Harrier EV) ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ. ಗುಜರಾತ್‌ನ ಹಂಸಲ್‌ಪುರದಲ್ಲಿರುವ ಕಂಪನಿಯ ಉತ್ಪಾದನಾ ಘಟಕದಲ್ಲಿ ನೂತನ 'ಇ-ವಿಟಾರಾ'ಗಳನ್ನು ತಯಾರಿಸಲಾಗುತ್ತಿದೆ. ಈಗಾಗಲೇ ಮೊದಲ ಬ್ಯಾಚ್‌ನ 6,000 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ.

More from DriveSpark

Article Published On: Friday, November 28, 2025, 11:29 [IST]
English summary
Maruti suzuki e vitara suv launch on 2 december in india here the details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+