Maruti Suzuki: 5-ಸೀಟರ್.. ಡಿ.2ಕ್ಕೆ ಹೊಸ ಮಾರುತಿ SUV ಬಿಡುಗಡೆ.. ಯಾವುದು, ಬೆಲೆ ಎಷ್ಟು?

ಬಹುನಿರೀಕ್ಷಿತ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೊಂದು ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದೆ. ದೇಶಾದ್ಯಂತ ಈ ಕಾರಿನ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಹೊಚ್ಚ ಹೊಸ 'ಇ-ವಿಟಾರಾ' ಆಕರ್ಷಕವಾದ ವಿನ್ಯಾಸ ಹೊಂದಿದ್ದು, ಹತ್ತಾರು ನವೀನ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಾಗುವ ನಿರೀಕ್ಷೆಯಿದೆ.

ಡಿಸೆಂಬರ್ 2 ರಂದು ದೇಶೀಯವಾಗಿ ನೂತನ 'ಮಾರುತಿ ಇ-ವಿಟಾರಾ' ಮಾರಾಟಕ್ಕೆ ಬರಲಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇದು ವಿದೇಶಿ ಮಾರುಕಟ್ಟೆಯಲ್ಲಿಯೂ ಖರೀದಿಗೆ ಲಭ್ಯವಾಗಲಿದೆ. ಸೆಪ್ಟೆಂಬರ್ 1 ರಿಂದಲೇ ಗುಜರಾತ್‌ನ ಹಂಸಲ್‌ಪುರದಲ್ಲಿರುವ ಕಂಪನಿಯ ತಯಾರಿಕಾ ಘಟಕದಿಂದ 2,900ಕ್ಕೂಅಧಿಕ 'ಇ-ವಿಟಾರಾ' ಮಾಡೆಲ್‌ಗಳನ್ನು ಇಂಗ್ಲೆಂಡ್, ಜರ್ಮನಿ, ಫ್ರಾನ್ಸ್, ಸ್ವಿಟ್ಜರ್‌ಲ್ಯಾಂಡ್ & ನೆದರ್‌ಲ್ಯಾಂಡ್‌ಗಳಿಗೂ ರಫ್ತು ಮಾಡಲಾಗಿದೆ.

Maruti Suzuki e-Vitara Suv Launch On December 2 Expected Price Here The Details

ಈ ಕಾರು ಕನಿಷ್ಠ ರೂ.17 ಲಕ್ಷ ಹಾಗೂ ಗರಿಷ್ಠ ರೂ.22.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ಸಾಧ್ಯತೆಯಿದೆ. ಈಗಾಗಲೇ, ಹೊಸ 'ಇ-ವಿಟಾರಾ'ದ ರೂಪಾಂತಗಳು (ವೇರಿಯೆಂಟ್), ವಿನ್ಯಾಸ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಎಲ್ಲ ವಿವರಗಳನ್ನು ಸಹ ಬಹಿರಂಗಪಡಿಸಲಾಗಿದೆ.

ನೂತನ 'ಮಾರುತಿ ಇ-ವಿಟಾರಾ' ಎಸ್‌ಯುವಿಯು ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ 3 ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗಲಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಮನವನ್ನು ಸೆಳೆಯುತ್ತದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಇದು ಎಲೆಕ್ಟ್ರಿಕ್ ಕಾರು ಆಗಿದ್ದರೂ ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,275 ಮಿ.ಮೀ ಉದ್ದ, 4,275 ಮಿ.ಮೀ ಅಗಲ ಹಾಗೂ 1,800 ಮಿ.ಮೀ ಎತ್ತರವಿದೆ. ಹಾಗೆಯೇ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, 144 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 189 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಅದೇ ರೀತಿಯಲ್ಲಿ 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿರುವ ಮಾಡೆಲ್, 174 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 189 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಹೊಸ 'ಇ-ವಿಟಾರಾ' ಭರ್ತಿ ಚಾರ್ಜ್‌ನಲ್ಲಿ 500 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಅದಕ್ಕೆ ತಕ್ಕಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್-ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ ಆಟೋ ಎಸಿಯನ್ನು ತನ್ನದಾಗಿಸಿಕೊಂಡಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಲಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ನೂತನ 'ಮಾರುತಿ ಇ-ವಿಟಾರಾ' ಎಸ್‌ಯುವಿಗೆ ಸಾಲು - ಸಾಲು ಎದುರಾಳಿಗಳಿವೆ. ಇದಕ್ಕೆ ಟಾಟಾ ಹ್ಯಾರಿಯರ್ ಇವಿ (Tata Harrier EV), ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric), ಟಾಟಾ ಕರ್ವ್ ಇವಿ (Tata Curvv EV) ಹಾಗೂ ಎಂಜಿ ವಿಂಡ್ಸರ್ ಇವಿ (MG Windsor EV) ಕಾರುಗಳು ಪ್ರಬಲವಾದ ಸ್ಪರ್ಧೆಯೊಡ್ಡಬಲ್ಲವು.

More from DriveSpark

Article Published On: Friday, October 31, 2025, 16:04 [IST]
English summary
Maruti suzuki e vitara suv launch on december 2 expected price here the details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+