Maruti: ಲಕ್ಷುರಿ ಫೀಚರ್ಸ್‌.. ಮಾರುತಿಯ ಮೊದಲ ಎಲೆಕ್ಟ್ರಿಕ್ ಕಾರು ಶೀಘ್ರ ಬಿಡುಗಡೆ, ಬೆಲೆ ಎಷ್ಟು.. ರೇಂಜ್ ಏನು?

ಬಹುನೀರಿಕ್ಷಿತ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗೆ ದಿನಗಣನೇ ಶುರುವಾಗಿದೆ. ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾದ ಈ ಕಾರು, ಅತಿ ಶೀಘ್ರದಲ್ಲೇ ಮಾರಾಟಕ್ಕೆ ಬರಲಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಇದೇ ಏಪ್ರಿಲ್‌ನಲ್ಲಿ ಗ್ರಾಹಕರ ಖರೀದಿಗೆ ದೊರೆಯಬಹುದು ಎನ್ನಲಾಗಿದೆ. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಬನ್ನಿ.. ನೂತನ ಇ-ವಿಟಾರಾದ ನಿರೀಕ್ಷಿತ ಬೆಲೆ ಎಷ್ಟು.. ಯಾವೆಲ್ಲ ವಿಶೇಷತೆಗಳಿಗೆ ಸಾಕ್ಷಿಯಾಗಿದೆ ಎಂಬುದನ್ನು ತಿಳಿಯೋಣ.

ಟಾಟಾ ಕರ್ವ್ ಇವಿ (Tata Curvv EV) ಮತ್ತು ಹ್ಯುಂಡೈ ಕ್ರೆಟಾ (Hyundai Creta) ಎಲೆಕ್ಟ್ರಿಕ್ ಎಸ್‌ಯುವಿಗಳಿಗೆ ಮಾರುತಿ ಸುಜುಕಿ ಇ-ವಿಟಾರಾ ನೇರವಾದ ಪ್ರತಿಸ್ಪರ್ಧಿಯಾಗಿದ್ದು, ಕೊಂಚ ಹೆಚ್ಚಿನ ದರದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಕಾರು, ರೂ.17 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರುವ ಎನ್ನಲಾಗಿದೆ.

Maruti Suzuki E Vitara Suv Launch Soon Expected Price And Range Details

ಸದ್ಯ ಮಾರುತಿ ಸುಜುಕಿ ಇ-ವಿಟಾರಾ ಎಸ್‌ಯುವಿಯ ವಿನ್ಯಾಸ ಹಾಗೂ ವೈಶಿಷ್ಟ್ಯಗಳ ಕುರಿತ ಬಹುತೇಕ ಎಲ್ಲ ಮಾಹಿತಿಗಳು ಬಹಿರಂಗಗೊಂಡಿವೆ. ಈ ಕಾರು ಡೆಲ್ಟಾ, ಜಿಟಾ & ಆಲ್ಫಾ ಎಂಬ 3 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್ & ಒಪ್ಯುಲೆಂಟ್ ರೆಡ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಮಾರುತಿ ಸುಜುಕಿ ಇ-ವಿಟಾರಾ ಎಸ್‌ಯುವಿ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, 'ವೈ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಇ-ವಿಟಾರಾದ ಒಳಭಾಗವು ಚೆನ್ನಾಗಿದ್ದು, 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

Maruti Suzuki E Vitara Suv Launch Soon Expected Price And Range Details

ನೂತನ ಮಾರುತಿ ಸುಜುಕಿ ಇ-ವಿಟಾರಾ ಕಾರು ಹೆಚ್ಚು ಶಕ್ತಿಯುತವಾದ 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ ಗರಿಷ್ಠ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ ನ್ಯೂಟನ್ ಮೀಟರ್ ಪೀಕ್ ಟಾರ್ಕ್ ಹೊರಹಾಕುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮಿಟರ್‌ ರೇಂಜ್ (ಮೈಲೇಜ್) ಸಾಧ್ಯತೆಯಿದೆ.

ಹೊಸ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ.10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.1-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ಆಂಬಿಯೆಂಟ್ ಲೈಟಿಂಗ್, 10-ವೇ ಪವರ್ಡ್ ಡ್ರೈವರ್ ಸೀಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

Maruti Suzuki E Vitara Suv Launch Soon Expected Price And Range Details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, March 29, 2025, 11:59 [IST]
English summary
Maruti suzuki e vitara suv launch soon expected price and range details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+