ಶೋರೂಂ ಮುಂದೆ ಜನರು ಸಾಲು ಕಟ್ಟುವರು.. 5-ಸೀಟರ್, ಶೀಘ್ರ ಹೊಸ ಮಾರುತಿ ಕಾರು ಬಿಡುಗಡೆ.. ಬೆಲೆ ಎಷ್ಟಿರಲಿದೆ?

ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದೆ. ದೇಶೀಯವಾಗಿ ಈ ಕಾರನ್ನು ಬರಮಾಡಿಕೊಳ್ಳಲು ಗ್ರಾಹಕರು ಕೂಡ ಎದುರು ನೋಡುತ್ತಿದ್ದಾರೆ. ಇದನ್ನು ವಿದೇಶಿ ಮಾರುಕಟ್ಟೆಯಲ್ಲಿ ಸುಜುಕಿ ಇ-ವಿಟಾರಾ (Suzuki e Vitara) ಹೆಸರಿನಲ್ಲಿ ಮಾರಾಟಗೊಳ್ಳಲು ತೀರ್ಮಾನಿಸಲಾಗಿದೆ. ಈಗಾಗಲೇ, ಗುಜರಾತ್‌ನ ಹಂಸಲ್‌ಪುರದಲ್ಲಿರುವ ಕಂಪನಿಯ ಉತ್ಪಾದನಾ ಘಟಕದಿಂದ 2,900ಕ್ಕೂ ಅಧಿಕ 'ಇ-ವಿಟಾರಾ'ಗಳನ್ನು ಇಂಗ್ಲೆಂಡ್, ಜರ್ಮನಿ, ನಾರ್ವೆ, ಫ್ರಾನ್ಸ್, ಡೆನ್ಮಾರ್ಕ್, ಸ್ವಿಟ್ಜರ್‌ಲ್ಯಾಂಡ್ ಹಾಗೂ ನೆದರ್‌ಲ್ಯಾಂಡ್‌ಗಳಿಗೂ ರಫ್ತು ಮಾಡಲಾಗಿದೆ.

ಎಲ್ಲವು ಅಂದುಕೊಂಡಂತೆ ನಡೆದರೆ, ಹೊಚ್ಚ ಹೊಸ 'ಮಾರುತಿ ಸುಜುಕಿ ಇ-ವಿಟಾರಾ' ಡಿಸೆಂಬರ್‌ ತಿಂಗಳಲ್ಲಿ ಅದ್ದೂರಿಯಾಗಿ ಮಾರಾಟಕ್ಕೆ ಬರಲಿದೆ ಎಂದು ವರದಿಯಾಗಿದೆ. ಸದ್ಯಕ್ಕೆ ಬಿಡುಗಡೆ ದಿನಾಂಕದ ಕುರಿತಂತೆ ಅಧಿಕೃತವಾದ ವಿವರಗಳು ಲಭ್ಯವಾಗಿಲ್ಲ. ನೂತನ 'ಇ-ವಿಟಾರಾ' ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

Maruti Suzuki e Vitara Suv May Be Launch In December 2025 Expected Price Details

ಈ ಕಾರು ಡೆಲ್ಟಾ, ಜಿಟಾ & ಆಲ್ಫಾ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯಲಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಇದೇ ವರ್ಷದ ಜನವರಿಯಲ್ಲಿ ಮುಕ್ತಾಯಗೊಂಡ 'ಭಾರತ್ ಮೊಬಿಲಿಟಿ ಎಕ್ಸ್‌ಪೋ'ದಲ್ಲಿಯೂ ಪ್ರದರ್ಶಿಸಲಾಗಿತ್ತು. ಹೊಸ 'ಇ-ವಿಟಾರಾ' ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ.

ನೂತನ 'ಮಾರುತಿ ಸುಜುಕಿ ಇ-ವಿಟಾರಾ' ದೊಡ್ಡ ಗಾತ್ರದಲ್ಲಿದೆ. 4,275 ಮಿ.ಮೀ ಉದ್ದ, 1,800 ಎಂಎಂ ಅಗಲ ಮತ್ತು 1,640 ಎಂಎಂ ಎತ್ತರ ಕೂಡ ಇದೆ. ಜೊತೆಗೆ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki e Vitara Suv May Be Launch In December 2025 Expected Price Details

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 320 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಹೊಸ 'ಇ-ವಿಟಾರಾ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಡಿರುವ ನಿರೀಕ್ಷೆಯಿದೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ವಿಶಾಲ ಗಾತ್ರದ 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಯೂರೋಪ್‌ನಲ್ಲಿ ಮಾರಾಟವಾಗುವ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ 'ಯುರೋ ಎನ್‌ಸಿಎಪಿ' 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡುತ್ತದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 40ಕ್ಕೆ 31 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 42 ಅಂಕಗಳನ್ನು ಪಡೆದಿದೆ.

ನೂತನ 'ಮಾರುತಿ ಸುಜುಕಿ ಇ-ವಿಟಾರಾ' ಹತ್ತಾರು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ವೈಶಿಷ್ಟ್ಯಗಳನ್ನು ಹೊಂದಿದೆ. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ. ಇದಕ್ಕೆ ಟಾಟಾ ಹ್ಯಾರಿಯರ್ ಇವಿ ಹಾಗೂ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Wednesday, October 8, 2025, 22:19 [IST]
English summary
Maruti suzuki e vitara suv may be launch in december 2025 expected price details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+