ಬಿಡುಗಡೆಗೂ ಮುನ್ನವೇ ಡೀಲರ್‌ಶಿಪ್‌ಗಳಿಗೆ ಬಂದೇ ಬಿಡ್ತು ಮಾರುತಿಯ ಮೊದಲ ಎಲೆಕ್ಟ್ರಿಕ್ ಕಾರು.. ಬೆಲೆ ಇಷ್ಟೇನಾ?

ಮಾರುತಿ ಸುಜುಕಿ ಇಂಡಿಯಾ (Maruti Suzuki India), ಈ ಜನವರಿಯಲ್ಲಿ ಅದ್ದೂರಿಯಾಗಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಉತ್ಪಾದನೆಗೆ ಸಿದ್ದಗೊಂಡಿರುವ ನೂತನ 'ಇ-ವಿಟಾರಾ' ಹೆಸರಿನ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅನಾವರಣಗೊಳಿಸಿತ್ತು. ಈ ಕಾರನ್ನು ಬಿಡುಗಡೆಗೊಳಿಸಲು ಕಂಪನಿಯು ಕೂಡ ಭರದಿಂದ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಹೊಚ್ಚ ಹೊಸ ಇ-ವಿಟಾರಾ ಅತಿ ಶೀಘ್ರದಲ್ಲಿ ಮಾರಾಟಕ್ಕೂ ಬರಲಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಸದ್ಯ, ಮಾರುತಿ ಸುಜುಕಿ ಕಂಪನಿಯು ದೇಶಾದ್ಯಂತ ವಿವಿಧ ಸ್ಥಳೀಯ ಡೀಲರ್‌ಶಿಪ್‌ಗಳಿಗೆ ನೂತನ ಇ-ವಿಟಾರಾವನ್ನು ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿವೆ. ಈ ಕಾರು ಮಾರಾಟಕ್ಕೆ ಬಂದ ಮೇಲೆ ಟಾಟಾ ಕರ್ವ್ ಇವಿ ಹಾಗೂ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಎಸ್‌ಯುವಿಗಳ ಪ್ರಬಲವಾದ ಪೈಪೋಟಿಯನ್ನು ಎದುರಿಸಬೇಕಾಗಿ ಬರಬಹುದು.

Maruti Suzuki e Vitara Suv Reaching Dealerships Launch Soon Details

ನೂತನ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara), ರೂ.17 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ ಮೂರು ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್ ಮತ್ತು ಒಪ್ಯುಲೆಂಟ್ ರೆಡ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು ಹೊರ ಭಾಗದಲ್ಲಿ ಸಾಕಷ್ಟು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, 'ವೈ' ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಮತ್ತು ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಜೊತೆಗೆ 4275 ಎಂಎಂ ಉದ್ದ, 1800 ಎಂಎಂ ಅಗಲ ಹಾಗೂ 2700 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ ಮಾರುತಿ ಇ-ವಿಟಾರಾ ಎಸ್‌ಯುವಿ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದು 49 & 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮಿಟರ್‌ ದೂರವನ್ನು ಕ್ರಮಿಸುವ ಸಾಧ್ಯತೆಯಿದೆ. ಈ ಕಾರಿನ 5 ಮಂದಿ ಸುಲಭವಾಗಿ ಪ್ರಯಾಣಿಸಬಹುದು.

ನೂತನ ಇ-ವಿಟಾರಾ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.1-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಎಸಿ, 10-ವೇ ಪವರ್ಡ್ ಡ್ರೈವರ್ ಸೀಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್‌ನ್ನು ಪಡೆದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಡಿಸ್ಕ್ ಬ್ರೇಕ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Image Courtesy: Priyanko Mukherjee / Facebook

Article Published On: Thursday, February 27, 2025, 16:45 [IST]
English summary
Maruti suzuki e vitara suv reaching dealerships launch soon details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+