Maruti Suzuki: ಆಯ್ದ ಶೋರೂಂಗಳಲ್ಲಿ ಮಾರುತಿ ಸುಜುಕಿ ಇ ವಿಟಾರಾ ಕಾರಿನ ಬುಕ್ಕಿಂಗ್ ಓಪನ್.. ಬೆಲೆ ಎಷ್ಟಿರಲಿದೆ?

ಮಾರುತಿ ಸುಜುಕಿ ಇಂಡಿಯಾ (Maruti Suzuki India) ನಂ.1 ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿಯೂ ತನ್ನದೇಯಾದ ಛಾಪನ್ನು ಮೂಡಿಸಲು ಮುಂದಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಕಂಪನಿಯು ಹೊಚ್ಚ ಹೊಸ 'ಇ ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಹಿರಂಗಪಡಿಸಿತ್ತು. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಅತಿ ಶೀಘ್ರದಲ್ಲಿಯೇ ಮಾರಾಟಕ್ಕೂ ಬರಲಿದೆ.

ಸದ್ಯ, ದೇಶಾದ್ಯಂತ ಆಯ್ದ ಮಾರುತಿ ಸುಜುಕಿ ಶೋರೂಂಗಳಲ್ಲಿ ನೂತನ ಇ ವಿಟಾರಾ (e Vitara) ಎಸ್‌ಯುವಿಗಾಗಿ ಅನಧಿಕೃತವಾಗಿ ಬುಕ್ಕಿಂಗ್ ತೆಗೆದುಕೊಳ್ಳುವುದನ್ನು ಶುರು ಮಾಡಲಾಗಿದೆ. ಆಸಕ್ತ ಗ್ರಾಹಕರು, ರೂ.25,000 ಟೋಕನ್ ಮೊತ್ತವನ್ನು ಮುಂಗಡವಾಗಿ ಪಾವತಿಸುವುದರೊಂದಿಗೆ ಈ ಕಾರನ್ನು ಆರ್ಡರ್ ಮಾಡಬಹುದು ಎಂದು ವರದಿಯಾಗಿದೆ. ಹೊಸ ಇ ವಿಟಾರಾ, ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿಯೂ ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ.

Maruti Suzuki E Vitara Suv Unofficial Booking Starts Details

ಹೊಸ ಮಾರುತಿ ಸುಜುಕಿ ಇ ವಿಟಾರಾ (Maruti Suzuki e Vitara) ಎಸ್‌ಯುವಿ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು. ಸ್ಪೋರ್ಟಿ ವೈ-ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, 3-ಪೀಸ್ ಎಲ್ಇಡಿ ಟೈಲ್ ಲೈಟ್ ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು 4,275 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,635 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್
ಹಾಗೂ 2,700 ಎಂಎ ಉದ್ದದ ವೀಲ್‌ಬೇಸ್‌ನ್ನು ಒಳಗೊಂಡಿದೆ. ಜೊತೆಗೆ ನೆಕ್ಸಾ ಬ್ಲೂ, ಗ್ರಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಓಪ್ಯುಲೆಂಟ್ ರೆಡ್ ಮತ್ತು ಬ್ಲೂಯಿಶ್ ಬ್ಲ್ಯಾಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ.

Maruti Suzuki E Vitara Suv Unofficial Booking Starts Details

ನೂತನ ಮಾರುತಿ ಸುಜುಕಿ ಇ ವಿಟಾರಾ ಎರಡು ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮಿಟರ್‌ಗೂ ಅಧಿಕ ರೇಂಜ್ (ಮೈಲೇಜ್) ನೀಡುತ್ತದೆ. ವಿಶೇಷವಾಗಿ ಇದರ 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್‌ನಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 144 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 192.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದು 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿರುವ ಮಾಡೆಲ್‌ನಲ್ಲಿ ಉಪಯೋಗಿಸಲಾದ ಎಲೆಕ್ಟ್ರಿಕ್ ಮೋಟಾರ್, 174 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ192.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಹಾಗೆಯೇ ಈ ಎಲೆಕ್ಟ್ರಿಕ್ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

Maruti Suzuki E Vitara Suv Unofficial Booking Starts Details

ಹೊಸ ಮಾರುತಿ ಸುಜುಕಿ ಇ ವಿಟಾರಾ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.1-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ಆಂಬಿಯೆಂಟ್ ಲೈಟಿಂಗ್, 10-ವೇ ಪವರ್ಡ್ ಡ್ರೈವರ್ ಸೀಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್‌ನ್ನು ಪಡೆದಿದೆ.

ಈ ಕಾರು, ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಡಿಸ್ಕ್ ಬ್ರೇಕ್‌ಗಳು, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, January 29, 2025, 15:20 [IST]
English summary
Maruti suzuki e vitara suv unofficial booking starts details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+