Maruti Suzuki: ಮಾರುತಿ ಸುಜುಕಿಯ ಮೊದಲ ಎಲೆಕ್ಟ್ರಿಕ್ ಕಾರು ಶೀಘ್ರ ಅನಾವರಣ.. ಬೆಲೆ ಇಷ್ಟೇನಾ?
ಮಾರುತಿ ಸುಜುಕಿ ಇಂಡಿಯಾ (Maruti Suzuki India) ನಂಬರ್ 1 ಕಾರು ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹತ್ತಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇದೇ 17 ರಿಂದ ನವದೆಹಲಿಯ ಭಾರತ ಮಂಟಪದಲ್ಲಿ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ' ಶುರುವಾಗಲಿದೆ. ಈ ಕಾರ್ಯಕ್ರಮದಲ್ಲಿ ಇ ವಿಟಾರಾ (e Vitara) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅದ್ದೂರಿಯಾಗಿ ಅನಾವರಣಗೊಳಿಸುವ ನಿರೀಕ್ಷೆಯಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಬೆಲೆ (Price): ಹೊಚ್ಚ ಹೊಸ ಮಾರುತಿ ಸುಜುಕಿ ಇ ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿ, ಬಜೆಟ್ ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗುವ ನಿರೀಕ್ಷೆಯಿದೆ. ಈ ಕಾರು ರೂ.20 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ವಿವಿಧ ರೂಪಾಂತರಗಳು (ವೇರಿಯೆಂಟ್) ಮತ್ತು ಆಕರ್ಷಕ ಬಣ್ಣಗಳೊಂದಿಗೆ ಸಿಗಬಹುದು ಎನ್ನಲಾಗಿದೆ.

ವಿನ್ಯಾಸ (Design): ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿರುವುದು ಬಹುತೇಕ ಖಚಿತವಾಗಿದೆ. ಅದು ಹಲವಾರು ಬಾರಿ ಕಾಣಿಸಿಕೊಂಡ ಸ್ಪೈ ಫೋಟೋಗಳಿಂದಲೂ ದೃಢಪಟ್ಟಿದೆ. ಫ್ರಂಟ್ ಫೆಂಡರ್‌ನಲ್ಲಿ ಚಾರ್ಜಿಂಗ್ ಪೋರ್ಟ್, 18-ಇಂಚಿನ ಅಲಾಯ್ ವೀಲ್‌ಗಳು, ಎಂಆರ್‌ಎಫ್ ಟೈರ್‌ಗಳು, 'ವೈ' ಆಕಾರಕ್ಕೆ ಹೋಲಿಕೆಯಾಗಬಲ್ಲ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance): ನೂತನ ಮಾರುತಿ ಸುಜುಕಿ ಇ ವಿಟಾರಾ ಎಸ್‌ಯುವಿ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದುಕೊಂಡಿರಲಿದೆ ಎನ್ನಲಾಗಿದೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‍ನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಸಂಪೂರ್ಣ ಚಾರ್ಜ್‌ನಲ್ಲಿ 400 ರಿಂದ 500 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡಬಹುದು ಎಂದು ತಿಳಿದುಬಂದಿದೆ.
ಆಸನ ಆಯ್ಕೆ & ವೈಶಿಷ್ಟ್ಯಗಳು (Seating Capacity & Features): ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣ ಮಾಡಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್ ಮತ್ತು ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features): ಹೊಸ ಮಾರುತಿ ಇ ವಿಟಾರಾ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಲಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ನಿರೀಕ್ಷೆಯೂ ಇದೆ.
ಒಟ್ಟಾರೆಯಾಗಿ ನೂತನ ಮಾರುತಿ ಸುಜುಕಿ ಇ ವಿಟಾರಾ ಎಸ್‌ಯುವಿಯನ್ನು 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ' ಪ್ರದರ್ಶಿಸುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ. ಆ ನಂತರ, ಈ ಕಾರನ್ನು ಮಾರಾಟಕ್ಕೆ ತರುವ ನೀರಿಕ್ಷೆಯಿದೆ. ಹೊಸ 'ಇ ವಿಟಾರಾ' ಬಿಡುಗಡೆಯಾದ ಮೇಲೆ ಟಾಟಾ ನೆಕ್ಸಾನ್ ಇವಿ, ಟಾಟಾ ಕರ್ವ್ ಇವಿ ಮತ್ತು ಮಹೀಂದ್ರಾ ಎಕ್ಸ್‌ಯುವಿ400ಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂ


Click it and Unblock the Notifications








