Maruti Suzuki: 27 Km ಮೈಲೇಜ್.. 7-ಸೀಟರ್, 5.44 ಲಕ್ಷ.. ಈ ಜನಪ್ರಿಯ ಮಾರುತಿ ಕಾರಿಗೆ ಮನಸೋತ ಗ್ರಾಹಕರು!

ಮಾರುತಿ ಸುಜುಕಿ ಇಕೋ (Maruti Suzuki Eeco) ಜನಪ್ರಿಯ ವ್ಯಾನ್ ಆಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ವಿವಿಧ ಕಾರು ತಯಾರಕ ಕಂಪನಿಗಳು ಜನವರಿ ತಿಂಗಳ ಕಾರು ಮಾರಾಟದ ಅಂಕಿಅಂಶದ ವರದಿಯನ್ನು ಪ್ರಕಟಿಸಿವೆ. ಅದರಲ್ಲೂ 'ಇಕೋ' ವ್ಯಾನ್‌ನ್ನು ಖರೀದಿದಾರರು ತಾಮುಂದು - ನಾಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಜನವರಿ - 2025) ಮಾರುತಿ ಸುಜುಕಿ ಕಂಪನಿಯು ಬರೋಬ್ಬರಿ 11,250 ಯುನಿಟ್ ಇಕೋ ವ್ಯಾನ್‌ಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಾಟ ಮಾಡಿದ 12,019 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY ಶೇಕಡ -6% ಇಳಿಕೆಯಾಗಿದೆ. ಆದರೆ, ಮಾರಾಟ ಪ್ರಮಾಣ ಸ್ವಲ್ಪ ಮಟ್ಟಿಗೆ ಕುಸಿತವಾಗಿರುವ ಬಗ್ಗೆ ಕಂಪನಿಯು ಯಾವುದೇ ನಿಖರವಾದ ಕಾರಣವನ್ನು ಬಹಿರಂಗಪಡಿಸಿಲ್ಲ. ಮುಂಬರುವ ದಿನಗಳಲ್ಲಿ ಮಾರಾಟ ಅಂಕಿ ಸಂಖ್ಯೆಯು ಸುಧಾರಿಸಿಕೊಳ್ಳುವ ನಿರೀಕ್ಷೆಯಿದೆ.

Maruti Suzuki Eeco January 2025 Sales Report Details

ಈ ಮಾರುತಿ ಸುಜುಕಿ ಇಕೋ ವ್ಯಾನ್‌ನ ಮಾರಾಟ ಪ್ರಮಾಣ ಕುಸಿತವಾಗಿದ್ದರೂ ಪ್ರತಿ ತಿಂಗಳು 10,000 ಯುನಿಟ್‌ಗೂ ಅಧಿಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. 2024ರ ಡಿಸೆಂಬರ್‌ನಲ್ಲಿ 11,678 ಯುನಿಟ್, ನವೆಂಬರ್‌ನಲ್ಲಿ 10,589 ಯುನಿಟ್, ಅಕ್ಟೋಬರ್‌ನಲ್ಲಿ 11,653 ಯುನಿಟ್, ಸೆಪ್ಟೆಂಬರ್‌ನಲ್ಲಿ 11,908 ಯುನಿಟ್ ಹಾಗೂ ಆಗಸ್ಟ್ ತಿಂಗಳಲ್ಲಿ 10,985 ಯುನಿಟ್‌ಗಳು ಮಾರಾಟಗೊಂಡಿವೆ.

ಇತ್ತೀಚೆಗೆ ಫೆಬ್ರವರಿ 1ಕ್ಕೆ ಅನ್ವಯವಾಗುವಂತೆ ಮಾರುತಿ ಸುಜುಕಿ ಇಕೋ ವ್ಯಾನ್‌ನ ಎಲ್ಲ ರೂಪಾಂತರಗಳ (ವೇರಿಯೆಂಟ್) ದರ ರೂ.12,000 ಹೆಚ್ಚಳಗೊಂಡಿದೆ. ಇದರೊಂದಿಗೆ ಈ ಕಾರು, ಕನಿಷ್ಠ ರೂ.5.44 ಲಕ್ಷ ಹಾಗೂ ಗರಿಷ್ಠ ರೂ.6.70 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಜೊತೆಗೆ ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ, ಪರ್ಲ್ ಮಿಡ್ನೈಟ್ ಬ್ಲ್ಯಾಕ್ ಮತ್ತು ಮೆಟಾಲಿಕ್ ಬ್ರಿಸ್ಕ್ ಬ್ಲೂ ಒಳಗೊಂಡನಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

Maruti Suzuki Eeco January 2025 Sales Report Details

ಈ ವ್ಯಾನ್‌ 2 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀ ಪೆಟ್ರೋಲ್ ಎಂಜಿನ್ 81 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 104.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀ ಸಿಎನ್‌ಜಿ ಮಾಡೆಲ್ ಇದೇ ಎಂಜಿನ್‌ನ್ನು ಒಳಗೊಂಡಿದೆ. ಆದರೆ, 72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ನೂತನ ಮಾರುತಿ ಸುಜುಕಿ ಇಕೋ ವ್ಯಾನ್‌, ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 19.71 ರಿಂದ 26.78 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದು 5 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು.

Maruti Suzuki Eeco January 2025 Sales Report Details

ಹೊಸ ಇಕೋ ವ್ಯಾನ್‌ ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 275 ರಿಂದ 540 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಸೆಮಿ-ಡಿಜಿಟಲ್ ಸ್ಪೀಡೋಮೀಟರ್, ಮ್ಯಾನುವಲ್ ಎಸಿ ಮತ್ತು 12ವಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಫ್ರಂಟ್ ಸೀಟ್‌ಬೆಲ್ಟ್ ರಿಮೈಂಡರ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, February 9, 2025, 12:32 [IST]
English summary
Maruti suzuki eeco january 2025 sales report details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+