ಬಡವರಿಗೆ ಪರ್ಫೆಕ್ಟ್ ಕಾರಿದು.. ರೂ.5.70 ಲಕ್ಷದ ಈ ಮಾರುತಿ ಎಂಪಿವಿಗೆ ಮುಗಿಬಿದ್ದ ಖರೀದಿದಾರರು.. 27 Km ಮೈಲೇಜ್, 6-ಸೀಟರ್!
ಮಾರುತಿ ಸುಜುಕಿ ಇಕೋ (Maruti Suzuki Eeco) ವಿಶ್ವಾಸಾರ್ಹ ಎಂಪಿವಿಯಾಗಿದೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಮತ್ತು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಉತ್ತಮವಾದ ಇಂಧನ ದಕ್ಷತೆ ಹಾಗೂ ಕಾರ್ಯಕ್ಷಮತೆಯಿಂದಲೂ ಮನೆ ಮಾತಾಗಿದೆ. ಖರೀದಿದಾರರು ಸಹ ಇಷ್ಟುಪಟ್ಟು ಕೊಂಡುಕೊಳ್ಳುತ್ತದ್ದಾರೆ. ಈ ಜುಲೈ ತಿಂಗಳಲ್ಲೂ 'ಇಕೋ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 12,341 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 11,916 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 4% ಪ್ರಗತಿಯಾಗಿದೆ.
ಇದೇ ಜೂನ್‌ನಲ್ಲಿ 9,340 ಯುನಿಟ್ 'ಮಾರುತಿ ಇಕೋ' ಎಂಪಿವಿಯನ್ನು ಮಾರಾಟ ಮಾಡಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ತಿಂಗಳಿನಿಂದ ತಿಂಗಳಿಗೆ ಶೇಕಡ 24% ಬೆಳವಣಿಗೆಯಾಗಿದೆ. ಈ ವರ್ಷದ ಮೊದಲ 6 ತಿಂಗಳಲ್ಲೂ ಇಕೋ ಕಾರು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗಿದೆ. ಬರೋಬ್ಬರಿ 66,257 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಪ್ರತಿ ತಿಂಗಳು 11,042 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಮಾರುತಿ ಸುಜುಕಿ ಇಕೋ ವಿಶೇಷತೆಗಳೇನು:
ಇದೊಂದು ಎಂಪಿವಿಯಾಗಿದೆ. ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದ್ದು, ರೂ.5.70 ಲಕ್ಷದಿಂದ ರೂ.6.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೀಗಾಗಿ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಬ್ಲ್ಯಾಕ್-ಔಟ್ ಬಂಪರ್, ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು ಹಾಗೂ ಟೈಲ್‌ಲೈಟ್‌ಗಳನ್ನು ಪಡೆದಿದೆ.
ಈ ಕಾರು ಬ್ಲ್ಯೂಯಿಸ್ ಬ್ಲ್ಯಾಕ್, ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ, ಸಾಲಿಡ್ ವೈಟ್, ಮೆಟಾಲಿಕ್ ಬ್ರಿಸ್ಕ್ ಬ್ಲೂ ಹಾಗೂ ಮೆಟಾಲಿಕ್ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳನ್ನು ಪಡೆದಿದೆ. 3675 ಎಂಎಂ ಉದ್ದ, 1475 ಎಂಎಂ ಅಗಲ ಮತ್ತು 1825 ಎಂಎಂ ಎತ್ತರ ಕೂಡ ಇದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2350 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ ಇಕೋ ಎಂಪಿವಿ 5/6 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ವಾರಾಂತ್ಯ & ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಅನುವಾಗಲು 275 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ನೂತನ ಮಾರುತಿ ಇಕೋ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್, 81 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 104.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 72 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಪಡೆದಿದೆ. ಈ ಕಾರು ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ 19 ರಿಂದ 26.78 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು.
ಇದು 40 ಲೀಟರ್‌ನಷ್ಟು ಪೆಟ್ರೋಲ್ ಟ್ಯಾಂಕ್ ಹಾಗೂ 65 ಕೆಜಿ ಸಾಮರ್ಥ್ಯದ ಸಿಎನ್‌ಜಿ ಟ್ಯಾಂಕ್‍ನ್ನು ಒಳಗೊಂಡಿದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 15.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಕೂಡ ಅಚ್ಚುಕಟ್ಟಾಗಿದೆ. ಸೆಮಿ - ಡಿಜಿಟಲ್ ಸ್ಪೀಡೋಮೀಟರ್, ಮ್ಯಾನುವಲ್ ಎಸಿ, 12ವಿ ಚಾರ್ಜಿಂಗ್ ಸಾಕೆಟ್, ಸ್ಲೈಡಿಂಗ್ ಡ್ರೈವರ್ ಸೀಟ್, ರೇಕ್ಲಿನಿಂಗ್ ಫ್ರಂಟ್ ಸೀಟ್‌ಗಳು, ಬೇಸಿಕ್ ಆಡಿಯೊ ಸಿಸ್ಟಮ್, ಯುಎಸ್‌ಬಿ ಕನೆಕ್ಟಿವಿಟಿ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಮಾರುತಿ ಸುಜುಕಿ ಇಕೋ ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಬಲ್ಲದು. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸಮ್), ಪಾರ್ಕಿಂಗ್ ಸೆನ್ಸರ್‌ಗಳು, ಚೈಲ್ಡ್ ಲಾಕ್‌ಗಳು ಮತ್ತು ಸೀಟ್‌ಬೆಲ್ಟ್ ರಿಮೈಂಡರ್‌ನ್ನು ಪಡೆದಿದೆ.


Click it and Unblock the Notifications