27 ಕಿ.ಮೀ ಮೈಲೇಜ್.. 7-ಸೀಟರ್, 5 ಲಕ್ಷ.. Maruti Eeco ಖರೀದಿಸಲು ಒಲ್ಲೆ ಎನ್ನುತ್ತಿದ್ದಾರೆ ಗ್ರಾಹಕರು.. ಕಾರಣವೇನು?
ಮಾರುತಿ ಸುಜುಕಿ ಇಕೋ (Maruti Suzuki Eeco) ಜನಪ್ರಿಯ ವ್ಯಾನ್ ಆಗಿದ್ದು, ಮಧ್ಯಮ ವರ್ಗದ ಜನರಿಗೆ ಹೇಳಿ ಮಾಡಿಸಿದ ರೀತಿಯಲ್ಲಿದೆ. ಬೆಲೆಗೆ ತಕ್ಕಂತೆ ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಆದರೂ ಇಕೋ ವ್ಯಾನ್‌ನ ಮಾರಾಟ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಅದಕ್ಕೆ ಈ ಮಾರ್ಚ್ ತಿಂಗಳು ಸಹ ಹೊರತಾಗಿಲ್ಲ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಮಾರ್ಚ್-2025) ಮಾರುತಿ ಸುಜುಕಿ ಇಂಡಿಯಾ, ಬರೋಬ್ಬರಿ 10,409 ಯುನಿಟ್ ಇಕೋ ವ್ಯಾನ್‌ನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 12,019 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ-ಸಂಖ್ಯೆಗಳಿಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ -13.40% ಕುಸಿತವಾಗಿದೆ.

ಈ ವರ್ಷದ ಮೊದಲೆರೆಡು ತಿಂಗಳು ಕೂಡ ಮಾರುತಿ ಇಕೋ ವ್ಯಾನ್ ಮಾರಾಟವು ಸಾಧಾರಣ ಮಟ್ಟದಲ್ಲಿತ್ತು. ಫೆಬ್ರವರಿಯಲ್ಲಿ 11,493 ಮತ್ತು ಜನವರಿಯಲ್ಲಿ 11,250 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಹೋದ ವರ್ಷವು ಇಕೋ ವ್ಯಾನ್‌ನ ಮಾರಾಟವು ಅಷ್ಟು ಚೆನ್ನಾಗಿರಲಿಲ್ಲ. ಡಿಸೆಂಬರ್‌ನಲ್ಲಿ 11,678 ಯುನಿಟ್, ನವೆಂಬರ್‌ನಲ್ಲಿ 10,589 ಯುನಿಟ್ ಹಾಗೂ ಅಕ್ಟೋಬರ್ ತಿಂಗಳಲ್ಲಿ 11,653 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.
ಸದ್ಯ, ಮಾರುತಿ ಸುಜುಕಿ ಇಕೋ ವ್ಯಾನ್‌ನ ಮಾರಾಟ ಸಂಖ್ಯೆ ಇಳಿಕೆಯಾಗಿರುವ ಕುರಿತಂತೆ ಕಂಪನಿಯು ಯಾವುದೇ ಸ್ಪಷ್ಟವಾದ ಕಾರಣವನ್ನು ಬಹಿರಂಗಪಡಿಸಲ್ಲ. ಆದರೂ ಈ ಕಾರಿನಲ್ಲಿ ಒಂದಷ್ಟು ವೈಶಿಷ್ಟ್ಯಗಳ ಕೊರತೆ ಇದ್ದು, ಗ್ರಾಹಕರು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಇತ್ತೀಚೆಗೆ ಈ ಇಕೋ ವ್ಯಾನ್‌ನ್ನು 6 ಏರ್‌ಬ್ಯಾಗ್‌ನೊಂದಿಗೆ ಮೇಲ್ದರ್ಜೆರಿಸಲಾಗಿದ್ದು, ಮಾರಾಟ ಸಂಖ್ಯೆಯೂ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಮಾರುತಿ ಸುಜುಕಿ ಇಕೋ ವ್ಯಾನ್ ವಿಶೇಷತೆಗಳೇನು: ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ರೂ.5.44 ಲಕ್ಷದಿಂದ ರೂ.6.70 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರು 5/7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 275 ರಿಂದ 540 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ವ್ಯಾನ್ ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಒಳಗೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19.71 ರಿಂದ 26.78 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಮಾರುತಿ ಸುಜುಕಿ ಇಕೋ ವ್ಯಾನ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಸೆಮಿ-ಡಿಜಿಟಲ್ ಸ್ಪೀಡೋಮೀಟರ್, ಮ್ಯಾನುವಲ್ ಎಸಿ ಮತ್ತು 12ವಿ ಚಾರ್ಜಿಂಗ್ ಸಾಕೆಟ್ ಅನ್ನು ಹೊಂದಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಫ್ರಂಟ್ ಸೀಟ್‌ಬೆಲ್ಟ್ ರಿಮೈಂಡರ್, ಸ್ಪೀಡ್ ಅಲರ್ಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications