ಬಡವರ ಬಂಡಿ.. 27 ಕಿ.ಮೀ ಮೈಲೇಜ್, 6-ಸೀಟರ್.. 5 ಲಕ್ಷ, ಈ ಮಾರುತಿ ಎಂಪಿವಿಗೆ ಮನಸೋತ ಗ್ರಾಹಕರು!

ಮಾರುತಿ ಸುಜುಕಿ ಇಕೋ (Maruti Suzuki Eeco) ಪ್ರಮುಖ ಎಂಪಿವಿಯಾಗಿದೆ. ಇದು ನೋಡಲು ತುಂಬಾ ಚಿಕ್ಕದಾಗಿದ್ದರೂ ಹೆಚ್ಚು ಆಕರ್ಷಕವಾಗಿದ್ದು, ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್‌ನಲ್ಲಿಯೂ 'ಇಕೋ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಸರಿ ಸುಮಾರು 13,537 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. ಅದೇ ರೀತಿಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ 10,035 ಯುನಿಟ್‌ಗಳನ್ನು ಮಾರಲಾಗಿತ್ತು.

ಈ ಅಕ್ಟೋಬರ್‌ನಲ್ಲಿ 'ಮಾರುತಿ ಇಕೋ' ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ಜೊತೆಗೆ ದೀಪಾವಳಿಯಿದ್ದ ಹಿನ್ನೆಲೆ, 'ಇಕೋ' ಎಂಪಿವಿಯನ್ನು ಖರೀದಿದಾರರು ಮುಗಿಬಿದ್ದು ಕೊಂಡುಕೊಂಡಿದ್ದಾರೆ. ಇದರಿಂದಾಗಿ ಮಾರಾಟ ಪ್ರಮಾಣವು ಹೆಚ್ಚಳಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

Maruti Suzuki Eeco Mpv October 2025 Sales Report

ಮಾರುತಿ ಸುಜುಕಿ ಇಕೋ ವಿಶೇಷತೆಗಳೇನು:

ಈ ಕಾರು ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಕನಿಷ್ಠ ರೂ.5.21 ಲಕ್ಷ ಹಾಗೂ ಗರಿಷ್ಠ ರೂ.6.36 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿಸಲು ಸಾಧ್ಯವಾಗಲಿದೆ.

ಇದು ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಬ್ಲ್ಯಾಕ್-ಔಟ್ ಬಂಪರ್‌, ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು ಹಾಗೂ ಟೈಲ್‌ಲೈಟ್‌ಗಳನ್ನು ಹೊಂದಿದೆ. ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ, ಸಾಲಿಡ್ ವೈಟ್, ಮೆಟಾಲಿಕ್ ಬ್ರಿಸ್ಕ್ ಬ್ಲೂ ಮತ್ತು ಮೆಟಾಲಿಕ್ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

Maruti Suzuki Eeco Mpv October 2025 Sales Report

ನೂತನ 'ಇಕೋ' ಹೆಚ್ಚು ದೊಡ್ಡ ಗಾತ್ರದಲ್ಲಿದೆ. 3675 ಮಿ.ಮೀ ಉದ್ದ, 1475 ಮಿ.ಮೀ ಅಗಲ ಮತ್ತು 1825 ಮಿ.ಮೀ ಎತ್ತರವಿದೆ. ಹಾಗೆಯೇ 160 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2350 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1050 ಕೆಜಿ ತೂಕವಿದೆ.

ಈ ಕಾರು ಶಕ್ತಿಯುತವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 81 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 105.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.71 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

ಮತ್ತೊಂದು 1.2 ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 71 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗಿದು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 26.78 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 40 ಲೀಟರ್‌ನಷ್ಟು ಪೆಟ್ರೋಲ್ ಟ್ಯಾಂಕ್ ಮತ್ತು 65 ಕೆಜಿಯಷ್ಟು ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.

ಇದು 5/ 6 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 275 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 15.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ 'ಇಕೋ' ಸೆಮಿ-ಡಿಜಿಟಲ್ ಸ್ಪೀಡೋಮೀಟರ್, ಬೇಸಿಕ್ ಆಡಿಯೋ ಸಿಸ್ಟಮ್, ಮ್ಯಾನುವಲ್ ಎಸಿ, 12ವಿ-ಚಾರ್ಜಿಂಗ್ ಸಾಕೆಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಪಾರ್ಕಿಂಗ್ ಸೆನ್ಸರ್‌ಗಳು, ಚೈಲ್ಡ್ ಲಾಕ್‌ಗಳು ಮತ್ತು ಸೀಟ್‌ಬೆಲ್ಟ್ ರಿಮೈಂಡರ್‌ನ್ನು ಒಳಗೊಂಡಿದೆ.

More from DriveSpark

Article Published On: Tuesday, November 4, 2025, 8:30 [IST]
English summary
Maruti suzuki eeco mpv october 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+