ಮಾರುತಿ ಓಮ್ನಿಗೆ ಪರ್ಯಾಯವಿದು: 27 ಕಿ.ಮೀ ಮೈಲೇಜ್.. 6-ಸೀಟರ್, 5 ಲಕ್ಷ.. ಈ ಎಂಪಿವಿಯದ್ದೇ ಕಾರುಬಾರು!

ಮಾರುತಿ ಸುಜುಕಿ ಇಕೋ (Maruti Suzuki Eeco) ಜನಪ್ರಿಯ ಎಂಪಿವಿ ಎಂದೇ ಹೆಸರುವಾಸಿಯಾಗಿದೆ. 'ಓಮ್ನಿ' ಮಾರಾಟ ಸ್ಥಗಿತಗೊಂಡ ನಂತರ, ಅದಕ್ಕೆ ಉತ್ತಮವಾದ ಬದಲಿ ಕಾರಾಗಿಯೂ ಹೊರಹೊಮ್ಮಿದೆ. ಇದು ಕಣ್ಮನ ಸೆಳೆಯುವಂತಿದ್ದು, ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನರು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ನವೆಂಬರ್ ತಿಂಗಳು 'ಇಕೋ' ಎಂಪಿವಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 13,200 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 10,589 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ಶೇಕಡ 19.78% ಪ್ರಗತಿಯಾಗಿದೆ.

ಇದೇ ವರ್ಷದ ಜೂನ್‌ನಿಂದ ಅಕ್ಟೋಬರ್‌ವರೆಗೂ 'ಮಾರುತಿ ಇಕೋ' ಮಾರಾಟವು ಸಾಕಷ್ಟು ಉತ್ತಮವಾಗಿದೆ. ಬರೋಬ್ಬರಿ 56,074 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ - ಅಂಶವನ್ನು ವಿಶ್ಲೇಷಣೆ ಮಾಡಿದಾಗ, ಪ್ರತಿ ತಿಂಗಳು ಸರಾಸರಿ 11,214 ಯುನಿಟ್‌ಗಳನ್ನು ಮಾರಾಟವಾಗಿವೆ.

Maruti Suzuki Eeco November 2025 Sales Details

ಕಳೆದ ತಿಂಗಳು (ನವೆಂಬರ್ - 2025) 'ಮಾರುತಿ ಸುಜುಕಿ ಇಕೋ' ಎಂಪಿವಿ ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಳ್ಳಲು ನಾನಾ ಕಾರಣಗಳಿವೆ. ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಕಾರನ್ನು ಗ್ರಾಹಕರು ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡಿದ್ದಾರೆ. ಜೊತೆಗಿದು ಬಜೆಟ್ ಬೆಲೆಯಲ್ಲಿ ಲಭ್ಯವಿರುವುದರಿಂದ ಮಾರಾಟ ಪ್ರಮಾಣವು ವಿಪರೀತವಾಗಿ ಹೆಚ್ಚಳಗೊಂಡಿದೆ ಎನ್ನಲಾಗಿದೆ.

'ಮಾರುತಿ ಇಕೋ' ವಿಶೇಷತೆಗಳೇನು:

ಈ ಎಂಪಿವಿಯು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.5.21 ಲಕ್ಷದಿಂದ ರೂ.6.36 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಲ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಹಾಗೆಯೇ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದ್ದು, ದೀರ್ಘಕಾಲ ಬಾಳಿಕೆಯೂ ಬರಲಿದೆ.

Maruti Suzuki Eeco November 2025 Sales Details

ಇದು ತುಂಬಾನೇ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಅತ್ಯಾಕರ್ಷಕವಾದ ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು ಮತ್ತು ಟೈಲ್‌ಲೈಟ್‌ಗಳನ್ನು ಪಡೆದಿದೆ. ಸಾಲಿಡ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಬ್ರಿಸ್ಕ್ ಬ್ಲೂ, ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2350 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಮಾರುತಿ ಇಕೋ' ಅತ್ಯುತ್ತಮವಾದ ಫ್ಯಾಮಿಲಿ ಕಾರಾಗಿದೆ. 5/ 6 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಓಡಾಟ ನಡೆಸಬಹುದು. ವೀಕೆಂಡ್‌ನಲ್ಲಿ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 275 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Maruti Suzuki Eeco November 2025 Sales Details

ಈ ಕಾರು ಸಾಕಷ್ಟು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 15.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 40 ಲೀ.ನಷ್ಟು ಪೆಟ್ರೋಲ್ ಹಾಗೂ 65 ಕೆಜಿಯಷ್ಟು ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದ್ದು, ಆರಾಮದಾಯಕವಾಗಿ ಸಂಚರಿಸಲು ಯೋಗ್ಯವಾಗಿದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್, ಬೇಸಿಕ್ ಆಡಿಯೋ ಸಿಸ್ಟಮ್, ಮ್ಯಾನುವಲ್ ಎಸಿ, 12ವಿ ಚಾರ್ಜಿಂಗ್ ಸಾಕೆಟ್ ಮತ್ತು ರೇರ್ - ಪಾರ್ಕಿಂಗ್ ಸೆನ್ಸಾರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಸೀಟ್‌ಬೆಲ್ಟ್ ರಿಮೈಂಡರ್‌ನ್ನು ಹೊಂದಿದೆ.

More from DriveSpark

Article Published On: Tuesday, December 2, 2025, 17:23 [IST]
English summary
Maruti suzuki eeco november 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+