8 ಲಕ್ಷ ಬೆಲೆ, 26 Km ಮೈಲೇಜ್.. ಈ 'ಮಾರುತಿ' ಕಾರು ನಮಗೆ ಬೇಕು ಎನ್ನುತ್ತಿದ್ದಾರೆ ಗ್ರಾಹಕರು, ಭಾರೀ ಸಂಖ್ಯೆಯಲ್ಲಿ ಸೇಲ್ಸ್!

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಪ್ರಮುಖ ಎಂಪಿವಿಯಾಗಿ ಹೊರಹೊಮ್ಮಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ಅದಕ್ಕೆ ತಕ್ಕಂತೆ ಈ ಕಾರಿಗೆ ವರ್ಷಗಳಿಂದ ಭಾರೀ ಬೇಡಿಕೆಯಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ ಏಪ್ರಿಲ್ ತಿಂಗಳಲ್ಲೂ ಎರ್ಟಿಗಾ ಎಂಪಿವಿ ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಇದರೊಂದಿಗೆ ದೇಶೀಯವಾಗಿ ಅತಿ ಹೆಚ್ಚು ಮಾರಾಟಗೊಂಡ ಪ್ರಮಖ 10 ಕಾರುಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಏಪ್ರಿಲ್-2025) ಮಾರುತಿ ಸುಜುಕಿಯು ಬರೋಬ್ಬರಿ 15,780 ಯುನಿಟ್ ಎರ್ಟಿಗಾ ಎಂಪಿವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. ಅದೇ ರೀತಿಯಲ್ಲಿ ಈ ವರ್ಷದ ಮೊದಲ ಮೂರು ತಿಂಗಳಲ್ಲೂ ಎರ್ಟಿಗಾ ಕಾರು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿತ್ತು. ಮಾರ್ಚ್‌ನಲ್ಲಿ 16,804 ಯುನಿಟ್, ಫೆಬ್ರವರಿಯಲ್ಲಿ 14,868 ಯುನಿಟ್ ಮತ್ತು ಜನವರಿಯಲ್ಲಿ 14,248 ಯುನಿಟ್‌ಗಳನ್ನು ಮಾರಲಾಗಿತ್ತು.

Maruti Suzuki Ertiga April 2025 Sales Details

ಹೋದ ವರ್ಷದ (2024) ಕೊನೆ ಎರಡು ತಿಂಗಳು ಸಹ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಡಿಸೆಂಬರ್‌ನಲ್ಲಿ 16,056 ಯುನಿಟ್ ಮತ್ತು ನವೆಂಬರ್‌ ತಿಂಗಳಲ್ಲಿ 15,150 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು 15,000 ಯುನಿಟ್ ಎರ್ಟಿಗಾ ಕಾರುಗಳು ಮಾರಾಟವಾಗಿವೆ.

ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರು ಸಾಕಷ್ಟು ಅತ್ಯುತ್ತಮವಾಗಿದೆ.. ಗರಿಷ್ಠ ಇಂಧನ ದಕ್ಷತೆಯನ್ನು ಒಳಗೊಂಡಿದೆ.. ಜೊತೆಗೆ ಹೆಚ್ಚಿನ ಆಸನಗಳನ್ನು ಪಡೆದಿದ್ದು, ದೊಡ್ಡ ಕುಟುಂಬಗಳ ಆಯ್ಕೆಯ ವಾಹನವಾಗಿದೆ. ಈ ಹಿನ್ನೆಲೆ, ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Maruti Suzuki Ertiga April 2025 Sales Details

ಎರ್ಟಿಗಾ ವಿಶಷತೆಗಳೇನು..

ಇದು ಫ್ಯಾಮಿಲಿ ಎಂಪಿವಿಯಾಗಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.8.96 ಲಕ್ಷದಿಂದ ರೂ.13.25 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 7 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಜೊತೆಗೆ ಲಗೇಜ್ ತೆಗೆದುಕೊಂಡು ಹೋಗಲು 209 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಮಾರುತಿ ಎರ್ಟಿಗಾ ಕಾರು 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 20 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್‌ನೈಟ್‌ ಬ್ಲ್ಯಾಕ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

Maruti Suzuki Ertiga April 2025 Sales Details

ಈ ಎಂಪಿವಿ ಹಲವು ನವೀನ ವೈಶಿಷ್ಟ್ಯಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪ್ಯಾಡಲ್ ಶಿಫ್ಟರ್ಸ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, May 12, 2025, 18:03 [IST]
English summary
Maruti suzuki ertiga april 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+