ಮಿಡಲ್ ಕ್ಲಾಸ್ ಜನರ ನೆಚ್ಚಿನ ಕಾರಿದು.. 26 Km ಮೈಲೇಜ್.. 7-ಸೀಟರ್, ಈ ಅಗ್ಗದ ಮಾರುತಿ ಎಂಪಿವಿಗಾಗಿ ಮುಗಿಬಿದ್ದ ಗ್ರಾಹಕರು!

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಜಗಮೆಚ್ಚಿದ ಫ್ಯಾಮಿಲಿ ಎಂಪಿವಿಯಾಗಿದೆ. ಇದು ನೋಡಲು ಚೆನ್ನಾಗಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಎರ್ಟಿಗಾ' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 20,087 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 18,785 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 64% ಬೆಳವಣಿಗೆಯಾಗಿದೆ.

ಇದೇ ಅಕ್ಟೋಬರ್‌ನಲ್ಲಿ 'ಮಾರುತಿ ಎರ್ಟಿಗಾ' ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ, ಈ ಕಾರು ಫ್ಯಾಮಿಲಿ ಎಂಪಿವಿಯಾಗಿದೆ. ದೀಪಾವಳಿ ಹಬ್ಬವಿದ್ದರಿಂದ ಹೆಚ್ಚಿನ ಜನರ ಆಯ್ಕೆಯ ವಾಹನವಾಗಿ ಹೊರಹೊಮ್ಮಿದೆ. ಜೊತೆಗೆ ಸೆಪ್ಟೆಂಬರ್ 22 ರಿಂದಲೇ ಜಿಎಸ್‌ಟಿ ಪರಿಷ್ಕರಣೆಗೊಂಡಿದ್ದು, 'ಎರ್ಟಿಗಾ' ಬೆಲೆಯೂ ಇಳಿಕೆಯಾಗಿದೆ. ಹೀಗಾಗಿ, ದೊಡ್ಡ ಪ್ರಮಾಣದಲ್ಲಿ ಮಾರಾಟವಾಗಿದೆ ಎಂಬುದು ತಜ್ಞರ ಲೆಕ್ಕಾಚಾರವಾಗಿದೆ.

Maruti Suzuki Ertiga Mpv October 2025 Sales Report

'ಮಾರುತಿ ಸುಜುಕಿ ಎರ್ಟಿಗಾ' ವಿಶೇಷತೆಗಳೇನು:

ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.8.80 ಲಕ್ಷ ಹಾಗೂ ಗರಿಷ್ಠ ರೂ.12.94 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗಟುಕುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫ್ಲೋಟಿಂಗ್ ಟೈಪ್ ರೂಫ್ ಡಿಸೈನ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್‌ಫರ್ಡ್ ಬ್ಲೂ ಹಾಗೂ ಪರ್ಲ್ ಮೆಟಾಲಿಕ್ ಡಿಗ್ನಿಟಿ ಬ್ರೌನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Suzuki Ertiga Mpv October 2025 Sales Report

ನೂತನ ಎರ್ಟಿಗಾ ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,395 ಮಿ.ಮೀ ಉದ್ದ, 1,735 ಮಿ.ಮೀ ಅಗಲ ಹಾಗೂ 1,690 ಮಿ.ಮೀ ಎತ್ತರವಿದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,740 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 1,205 ಕೆಜಿ ತೂಕವಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.5-ಲೀ. ಪೆಟ್ರೋಲ್ ಎಂಜಿನ್, 102 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 139 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 20.30 ರಿಂದ 20.51 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಮತ್ತೊಂದು 1.5-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌, 87 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 26.11 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರು 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 209 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಕೀಲೆಸ್ ಎಂಟ್ರಿ, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ 'ಎರ್ಟಿಗಾ' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್ ಹೋಲ್ಡ್ ಅಸಿಸ್ಟ್‌ನ್ನು ಹೊಂದಿದೆ.

More from DriveSpark

Article Published On: Tuesday, November 11, 2025, 8:30 [IST]
English summary
Maruti suzuki ertiga mpv october 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+