ಸಾಮಾನ್ಯ ಜನರ ಅಂಬಾರಿ: ಈ ಕಾರಿನ ಗ್ರಾಹಕರಿಗೆ ಶಾಕ್ ಕೊಟ್ಟ ಮಾರುತಿ ಸುಜುಕಿ
ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿರುವುದು, ಅವರೆಲ್ಲರಿಗೂ ತಮ್ಮ ಕುಟುಂಬಕ್ಕಾಗಿ ಹೊಸ ಕಾರು ಖರೀದಿಸಬೇಕೆಂಬ ಕನಸಿರುತ್ತದೆ. ಆದರೆ ದೊಡ್ಡ ಎಸ್‌ಯುವಿ ಹಾಗೂ ಪ್ರೀಮಿಯಂ ಎಂಪಿವಿಗಳನ್ನು ಖರೀದಿಸುವಷ್ಟು ಹಣವಿರುವುದಿಲ್ಲ. ಅಂತಹ ಗ್ರಾಹಕರನ್ನು ಗುರಿಯಾಗಿಸಿಕೊಂಡು ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿಯು ಎರ್ಟಿಗಾ ಎಂಬ ಎಂಪಿವಿಯನ್ನು ಬಿಡುಗಡೆಗೊಳಿಸಿತು. ನೀವು ಕೂಡ ಫ್ಯಾಮಿಲಿ ಕಾರನ್ನು ಖರೀದಿಸಲು ಹುಡುಕಾಟವನ್ನು ನಡೆಸುತ್ತಿದ್ದರೆ, ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿ ಉತ್ತಮ ಆಯ್ಕೆ ಎಂದು ಹೇಳಬಹುದು.
ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಭಾರತದ ಅತ್ಯಂತ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಮತ್ತು ಅದಕ್ಕೆ ತಕ್ಕಂತೆ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಮಾರುತಿ ಎರ್ಟಿಗಾ ಕಾರು ಭಾರತದ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಆದರೆ ಈ ಎಂಪಿವಿಗೆ ಸರಿ ಸುಮಾರು ರೂ.15,000 ವರೆಗೆ ಬೆಲೆ ಏರಿಕೆಯನ್ನು ಪಡೆದಿದೆ. ಈ ಕಾರು, ರೂ.8.69 ಲಕ್ಷದಿಂದ ರೂ.13.03 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ.

ಇನ್ನು 2024ರ ಡಿಸೆಂಬರ್ ತಿಂಗಳಿನ ಮಾರುತಿ ಸುಜುಕಿ ಎರ್ಟಿಗಾದ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. 2024ರ ಡಿಸೆಂಬರ್ ತಿಂಗಳಿನಲ್ಲಿ ಮಾರುತಿ ಸುಜುಕಿ ಎರ್ಟಿಗಾದ 16,056 ಯುನಿಟ್‌ಗಳು ಮಾರಾಟವಾಗಿವೆ. 2023ರ ಡಿಸೆಂಬರ್ ತಿಂಗಳಿನಲ್ಲಿ 12,975 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.24 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.
ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯಲ್ಲಿ 7 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಪಡೆದಿದೆ. ಈ ನೂತನ ಮಾರುತಿ ಸುಜುಕಿ ಎರ್ಟಿಗಾ ಕಾರು ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲಾಕ್, ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ 7-ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಈ ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪ್ಯಾಡಲ್ ಶಿಫ್ಟರ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿವೆ. ಪ್ರಯಾಣಿಕರಿಗೆ ಅವಶ್ಯಕತೆಗೆ ತಕ್ಕ ಪ್ರಮುಖ ಫೀಚರ್ಸ್ ಗಳನ್ನು ಒಳಗೊಂಡಿವೆ. ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯು ಉತ್ತಮ ಸುರಕ್ಷತೆಗೂ ಫೀಚರ್ಸ್ ಗಳನ್ನು ಒಳಗೊಂಡಿವೆ.
ಈ ಕಾರಿನಲ್ಲಿ ಸುರಕ್ಷತೆಗಾಗಿ 4 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ. ಮಾರುತಿ ಸುಜುಕಿ ಎರ್ಟಿಗಾ ಮಾದರಿಯು ಕಿಯಾ ಕ್ಯಾರೆನ್ಸ್ ಮತ್ತು ಮಹೀಂದ್ರಾ ಮರಾಜೊ ಎಂಪಿವಿಗಳು ಪೈಪೋಟಿ ನೀಡುತ್ತದೆ. ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಗಳಲ್ಲಿ ಲಭ್ಯವಿದೆ.

ಇದರಲ್ಲಿ ಮೊದಲಿಗೆ ಪೆಟ್ರೋಲ್ ಮಾದರಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 103 ಪಿಎಸ್ ಗರಿಷ್ಠ ಪವರ್ ಹಾಗೂ 137 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಎರ್ಟಿಗಾ ಸಿಎನ್‌ಜಿ ಮಾದರಿಯಲ್ಲೇ ಅದೇ ಎಂಜಿನ್ 88 ಪಿಎಸ್ ಪವರ್, 121.5 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಆಯ್ಕೆಯನ್ನು ನೀಡಲಾಗಿದೆ. ಇನ್ನು ಪೆಟ್ರೋಲ್ ರೂಪಾಂತರಗಳು 20.3 ರಿಂದ 20.51 ಕಿ.ಮೀ ಮೈಲೇಜ್ ನೀಡಿದರೆ, ಸಿಎನ್‌ಜಿ ಆವೃತ್ತಿಯು 26.11 ಕಿ.ಮೀ ಮೈಲೇಜ್ ಅನ್ನು ನಿಡುತ್ತದೆ.


Click it and Unblock the Notifications