26 Km ಮೈಲೇಜ್.. 7-ಸೀಟರ್, 6-ಏರ್‌ಬ್ಯಾಗ್‌.. ಈ Maruti Car ತೆಗೆದುಕೊಳ್ಳಬೇಕೇ.. ಆನ್-ರೋಡ್ ಬೆಲೆ ಎಷ್ಟು, ಇಎಂಐ ಏನು?

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ದೊಡ್ಡ ಗಾತ್ರದ ಎಂಪಿವಿಯಾಗಿ ಹೊರಹೊಮ್ಮಿದೆ. ಈಚೆಗೆ ಇದೇ ಕಾರನ್ನು 6-ಏರ್‌ಬ್ಯಾಗ್‌ನೊಂದಿಗೆ ನವೀಕರಿಸಲಾಯಿತು. ನೀವು ಹೊಚ್ಚ ಹೊಸ ಫ್ಯಾಮಿಲಿ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ಎರ್ಟಿಗಾ' ಎಂಪಿವಿ ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ, ಈ ಕಾರಿನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ತಿಳಿಸಿಕೊಟ್ಟಿದ್ದೇವೆ.

ದೇಶೀಯ ಮಾರುಕಟ್ಟೆಯಲ್ಲಿ ನೂತನ 'ಮಾರುತಿ ಸುಜುಕಿ ಎರ್ಟಿಗಾ' ಎಂಪಿವಿ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಇದರ ಪೆಟ್ರೋಲ್ ಚಾಲಿತ ಎಲ್ಎಕ್ಸ್ಐ (ಒ) ರೂಪಾಂತರ, ರೂ.10.85 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.5.85 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. 5 ವರ್ಷಗಳಿಗೆ ಮಾಸಿಕ ರೂ.12,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Ertiga On Road Price Emi Mileage And Features Details

ಇದೇ ಕಾರಿನ ಪೆಟ್ರೋಲ್ ಚಾಲಿತ ವಿಎಕ್ಸ್ಐ ವಿಎಕ್ಸ್ಐ (ಒ) ರೂಪಾಂತರ, ರೂ.12.55 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.7.85 ಲಕ್ಷವರೆಗೆ ಸಾಲವಿರುತ್ತದೆ. 5 ವರ್ಷಕ್ಕೆ ತಿಂಗಳಿಗೆ ರೂ.15,000 ವರೆಗೆ ಇಎಂಐ ಪಾವತಿಸಬೇಕು.

ಮತ್ತೊಂದು ಪೆಟ್ರೋಲ್ ಚಾಲಿತ ಝಡ್ಎಕ್ಸ್ಐ (ಒ) ಪೆಟ್ರೋಲ್ ರೂಪಾಂತರ, ರೂ.13.88 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.8.88 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. 5 ವರ್ಷಗಳಿಗೆ ಮಾಸಿಕ 18,000 ವರೆಗೆ ಇಎಂಐ ಕಟ್ಟಬೇಕು.

Maruti Suzuki Ertiga On Road Price Emi Mileage And Features Details

ಇನ್ನೊಂದು ಸಿಎನ್‌ಜಿ ಚಾಲಿತ ವಿಎಕ್ಸ್ಐ (ಒ) ರೂಪಾಂತರ, ರೂ.13.70 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.8.70 ಲಕ್ಷವರೆಗೆ ಸಾಲರುತ್ತದೆ. 5 ವರ್ಷಕ್ಕೆ ತಿಂಗಳಿಗೆ ರೂ.17,000 ವರೆಗೆ ಇಎಂಐ ಪಾವತಿ ಮಾಡಬೇಕು.

ಮಾರುತಿ ಸುಜುಕಿ ಎರ್ಟಿಗಾ ವಿಶೇಷತೆಗಳೇನು:

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಹ್ಯಾಲೊಜೆನ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಬರ್ನ್ ರೆಡ್, ಪರ್ಲ್ ಮೆಟಾಲಿಕ್ ಆಕ್ಸ್‌ಫರ್ಡ್ ಬ್ಲೂ, ಡಿಗ್ನಿಟಿ ಬ್ರೌನ್ ಹಾಗೂ ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು 7 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾದ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 45 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ. ಇದರೊಂದಿಗೆ 4,395 ಎಂಎಂ ಉದ್ದ, 1,735 ಅಗಲ ಮತ್ತು 1,690 ಎಂಎಂ ಎತ್ತರವು ಇದೆ. ಜೊತೆಗೆ 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,740 ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ ಎರ್ಟಿಗಾ ಕಾರು 1.5-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಸಾಮಾನ್ಯ ಬೈಕ್‌ಗಳಂತೆ 20 ರಿಂದ 26.11 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Saturday, August 2, 2025, 11:56 [IST]
English summary
Maruti suzuki ertiga on road price emi mileage and features details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+