28 Km ಮೈಲೇಜ್.. 7 ಲಕ್ಷ, ಭಾರತದಲ್ಲಿ ತಯಾರಾಗುವ ಈ Maruti Suvಗೆ ಮುಗಿಬಿದ್ದ ವಿದೇಶಿಗರು.. 1 ಲಕ್ಷ ಕಾರುಗಳು ರಫ್ತು!

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಜನಮೆಚ್ಚಿದ ಎಸ್‌ಯುವಿಯಾಗಿದೆ . ಇದು ಉತ್ತಮವಾದ ಕಾರ್ಯಕ್ಷಮತೆ ಹಾಗೂ ವಿಶ್ವಾಸಾರ್ಹತೆಗೂ ಹೆಸರುವಾಸಿಯಾಗಿದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಈ ವರ್ಷದ ಮೊದಲರ್ಧದಲ್ಲಿ ಒಟ್ಟು 88,066 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. ಸದ್ಯ, ಇದೇ 'ಫ್ರಾಂಕ್ಸ್' ಕಾರಿನ ರಫ್ತಿನಲ್ಲಿ ಹೊಸ ದಾಖಲೆಯೊಂದನ್ನು ಬರೆಯಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮಾರುತಿ ಸುಜುಕಿಯು ಕೇವಲ 25 ತಿಂಗಳಲ್ಲಿ 1 ಲಕ್ಷ ಯುನಿಟ್‌ ಫ್ರಾಂಕ್ಸ್ ಕಾರುಗಳನ್ನು ವಿವಿಧ ದೇಶಗಳಿಗೆ ರವಾನಿಸಿದೆ. ಇದರೊಂದಿಗೆ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ. 2023ರ ಏಪ್ರಿಲ್ ತಿಂಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಈ ಕಾರನ್ನು ಬಿಡುಗಡೆಗೊಳಿಸಲಾಯಿತು. ಅದೇ ವರ್ಷ ವಿದೇಶಗಳಿಗೆ ರಫ್ತು ಮಾಡುವುದಕ್ಕೂ ಶುರು ಮಾಡಲಾಯಿತು.

Maruti Suzuki Exports 1 Lakh Unit Fronx Suvs Just 25 Months Details

ಗುಜರಾತ್ ಮಾರುತಿ ಸುಜುಕಿಯ ಉತ್ಪಾದನಾ ಘಟಕದಲ್ಲಿ ಈ ಫ್ರಾಂಕ್ಸ್ ಎಸ್‌ಯುವಿಯನ್ನು ತಯಾರಿಸಲಾಗುತ್ತದೆ. ಲ್ಯಾಟಿನ್ ಅಮೆರಿಕ ಮತ್ತು ಆಫ್ರಿಕಾ ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸಲಾಗುತ್ತಿದೆ. ಫ್ರಾಂಕ್ಸ್ ಮಾತ್ರವಲ್ಲದೆ, ಜಿಮ್ನಿ, ಬಲೆನೊ, ಸ್ವಿಫ್ಟ್ ಹಾಗೂ ಡಿಜೈರ್ ಕಾರುಗಳನ್ನು ರಫ್ತು ಮಾಡಲಾಗುತ್ತಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ವಿಶೇಷತೆಗಳೇನು:

ದೇಶೀಯವಾಗಿ ಈ ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಅದಕ್ಕೆ ತಕ್ಕಂತೆ ರೂ.7.54 ಲಕ್ಷ ಹಾಗೂ ರೂ.13.03 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ ಹಾಗೂ ಜಿಟಾ ಸೇರಿದಂತೆ ಹಲವು ರೂಪಾಂತರಗಳೊಂದಿಗೂ (ವೇರಿಯೆಂಟ್) ಲಭ್ಯವಿದೆ.

Maruti Suzuki Exports 1 Lakh Unit Fronx Suvs Just 25 Months Details

ನೂತನ ಫ್ರಾಂಕ್ಸ್ ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅದು ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಆರ್ಕ್ಟಿಕ್ ವೈಟ್, ಅರ್ಥನ್ ಬ್ರೌನ್, ಗ್ರ್ಯಾಂಡಿಯರ್ ಗ್ರೇ, ನೆಕ್ಸಾ ಬ್ಲೂ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ 995 ಎಂಎಂ ಉದ್ದ, 1765 ಎಂಎಂ ಅಗಲ ಮತ್ತು 1550 ಎಂಎಂ ಎತ್ತರವು ಇದೆ.

ಇದು 3 ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 20 ರಿಂದ 28 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 55 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

Maruti Suzuki Exports 1 Lakh Unit Fronx Suvs Just 25 Months Details

ಈ ಕಾರಿನಲ್ಲಿ 5 ಆಸನಗಳಿವೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 308 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ರಿಮೋರ್ಟ್ ಕಂಟ್ರೋಲ್ ಡೋರ್‌ಗಳು, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ ಫ್ರಾಂಕ್ಸ್ ಸುರಕ್ಷತೆಯಿಂದಲೂ ಸಹ ಮನೆ ಮಾತಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ ಎಮೆರ್ಜೆನ್ಸಿ ಬ್ರೇಕ್ ಲೈಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Article Published On: Thursday, July 24, 2025, 17:10 [IST]
English summary
Maruti suzuki exports 1 lakh unit fronx suvs just 25 months details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+