Maruti: ಡಾಕ್ಟರ್, ಎಂಜಿನಿಯರ್‌ಗಳ ಫೆವರೆಟ್... ಅಗ್ಗದ ಮಾರುತಿ ಕಾರಿಗೆ ಮುಗಿಬಿದ್ದ ಜನ!

ಭಾರತದಲ್ಲಿ ಮಾರುತಿ ಸುಜುಕಿ (Maruti Suzuki) ಕಾರುಗಳಿಗೆ ಬಲವಾದ ಬೇಡಿಕೆ ಇದೆ. ಅದರಲ್ಲೂ ಮಾರುತಿ ಪ್ರೀಮಿಯಂ ಕಾರುಗಳು ಭಾರೀ ಜನಪ್ರಿಯತೆ ಪಡೆದಿವೆ, ಮುಖ್ಯವಾಗಿ ಫ್ರಾಂಕ್ಸ್‌ನಂತಹ ಕಾರುಗಳು ಪ್ರತಿ ತಿಂಗಳು ಭರ್ಜರಿ ಮಾರಾಟ ಕಾಣುತ್ತವೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಫ್ರಾಂಕ್ಸ್ ಕಾರು ಉತ್ತಮ ಮಾರಾಟವನ್ನು ದಾಖಲಿಸಿದ್ದು, ಭಾರತದ ಅತಿ ಹೆಚ್ಚು ಮಾರಾಟವಾಗುವ ಕಾರಗಳ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ದಕ್ಕಿಸಿಕೊಂಡಿದೆ. ಕೈಗೆಟುಕುವ ಬೆಲೆ, ದಕ್ಷತೆ ಮತ್ತು ಪ್ರಾಯೋಗಿಕತೆಯ ಸಂಯೋಜನೆಯೊಂದಿಗೆ ಖರೀದಿದಾರರಿಗೆ ಪ್ರಮುಖ ಆಯ್ಕೆಯಾಗಿದೆ ಎಂಬುದನ್ನು ಮತ್ತೊಮ್ಮೆ ಸಾಭೀತುಪಡಿಸಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಭಾರತದಲ್ಲಿ ಸದ್ಯ ಉತ್ತಮ ಮಾರಾಟ ಕಾಣುವ ಕಾರಾಗಿ ಗುರ್ತಿಸಿಕೊಂಡಿದೆ. ಫೆಬ್ರವರಿ 2025 ರಲ್ಲಿ ಬರೋಬ್ಬರಿ 21,461 ಯುನಿಟ್‌ ಮಾರುತಿ ಫ್ರಾಂಕ್ಸ್ ಕಾರುಗಳು ಮಾರಾಟವಾಗಿವೆ. 100 ಎಚ್‌ಪಿ ಬೂಸ್ಟರ್‌ಜೆಟ್ ಟರ್ಬೊ ಎಂಜಿನ್‌ನಿಂದ ನಡೆಸಲ್ಪಡುವ ಈ ಕಾರು ಹುಂಡೈ ವೆನ್ಯೂ, ಕಿಯಾ ಸೋನೆಟ್ ಮತ್ತು ಟಾಟಾ ನೆಕ್ಸಾನ್‌ಗಳಿಗೆ ಪ್ರತಿಸ್ಪರ್ಧಿಯಾಗಿದೆ.

maruti-suzuki-fronx-february-2025-sales-report

ಇದರ ಬೆಲೆಯು ರೂ. 7.51 ಲಕ್ಷದಿಂದ ಆರಂಭವಾಗಿ ರೂ. 13.04 ಲಕ್ಷದವರೆಗೆ (ಎಕ್ಸ್‌ ಶೋರೂಂ) ಇದೆ. ಹೊಸ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಡುಯಲ್ಜೆಟ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಬರೋಬ್ಬರಿ 20.1 ರಿಂದ 28.51 ಕೆಎಂಪಿಎಲ್‌ವರೆಗೂ ಮೈಲೇಜ್‌ನ್ನು ನೀಡುತ್ತದೆ.

ಪ್ರಯಾಣಿಕರ ರಕ್ಷಣೆಯಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾ, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ)ವನ್ನು ಪಡೆದಿದೆ. ಈ ಕಾರಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಟಾಟಾ ಟಾಟಾ ನೆಕ್ಸಾನ್‌, ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಗಳಾಗಿವೆ.

maruti-suzuki-fronx-february-2025-sales-report

ಹೊಸ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ ಹಾಗೂ ಕ್ರೂಸ್ ಕಂಟ್ರೋಲ್, 9 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ ಫ್ರಾಂಕ್ಸ್ ಎಸ್‌ಯುವಿ ಸಿಗ್ಮಾ, ಡೆಲ್ಟಾ & ಜಿಟಾ ಒಳಗೊಂಡಂತೆ ವಿವಿಧ ರೂಪಾಂತರಗಳನ್ನು ಹೊಂದಿದೆ. ಜೊತೆಗೆ ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್ ಮತ್ತು ಗ್ರ್ಯಾಂಡ್ಯೂರ್ ಗ್ರೇ ಒಳಗೊಂಡಂತೆ ಹಲವು ನವೀನವಾದ ಬಣ್ಣಗಳೊಂದಿಗೂ ಸಿಗುತ್ತದೆ. ಒಟ್ಟಾರೆ ಈ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದ್ದು, ನೋಡುಗರನ್ನು ಸೆಳೆಯುತ್ತದೆ.

ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಮಾರುತಿ ಸುಜುಕಿ ಫ್ರಾಂಕ್ಸ್ ಕಳೆದ ಫೆಬ್ರವರಿ ತಿಂಗಳಿನಲ್ಲಿ ಎಸ್‌ಯುವಿ ಮಾರಾಟದಲ್ಲಿ ನೀರಿಕ್ಷೆಗೂ ಮೀರಿದ ಬೆಳವಣಿಗೆಯನ್ನು ಸಾಧಿಸಿದೆ. ಈ ಕಾರಿನ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಮೆಂಟ್‌ನಲ್ಲಿ ತಿಳಿಸಿ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, March 16, 2025, 10:00 [IST]
English summary
Maruti suzuki fronx february 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+