28 Km ಮೈಲೇಜ್.. 5-ಸೀಟರ್, 8 ಲಕ್ಷಕ್ಕಿಂತ ಅಗ್ಗ.. 6-ಏರ್‌ಬ್ಯಾಗ್‌ನ ಈ ಕಾರನ್ನು ಖರೀದಿಸಬೇಕೇ.. ಬೆಲೆ ಎಷ್ಟು, ವಿಶೇಷತೆಗಳೇನು?

ಇತ್ತೀಚೆಗೆ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿಯನ್ನು ನವೀಕರಿಸಿ, ಮಾರಾಟಕ್ಕೆ ತರಲಾಗಿದೆ. ಸುರಕ್ಷತೆಗಾಗಿ ಇದೇ ಕಾರಿನ ಎಲ್ಲ ರೂಪಾಂತರಗಳನ್ನು (ವೇರಿಯೆಂಟ್) 6 ಏರ್‌ಬ್ಯಾಗ್‌ಗಳೊಂದಿಗೆ ಮೇಲ್ದರ್ಜೆರಿಸಲಾಗಿದೆ. ನೀವು ಹೊಚ್ಚ ಹೊಸ 'ಫ್ರಾಂಕ್ಸ್' ಕಾರನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ನಾವಿಲ್ಲಿ ಈ ಕಾರಿನ ಬೆಲೆ, ವಿನ್ಯಾಸ, ಕಾರ್ಯಕ್ಷಮತೆ, ಮೈಲೇಜ್ ಮತ್ತು ವೈಶಿಷ್ಟ್ಯಗಳ ಕುರಿತಂತೆ ಎಲ್ಲ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ಇದೊಂದು ಎಸ್‌ಯುವಿಯಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.7.54 ಲಕ್ಷ ಹಾಗೂ ಗರಿಷ್ಠ ರೂ.13.07 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಡೆಲ್ಟಾ ಪ್ಲಸ್ (ಒ), ಜಿಟಾ ಮತ್ತು ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

Maruti Suzuki Fronx Price Design Engine Features And All Top Things

ವಿನ್ಯಾಸ & ಬಣ್ಣಗಳು (Design & Colors):

ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು & ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಆರ್ಕ್ಟಿಕ್ ವೈಟ್, ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ, ಅರ್ಥನ್ ಬ್ರೌನ್ ಮತ್ತು ಆಫ್ಯುಲೆಂಟ್ ರೆಡ್ ಎಂಬ ಬಣ್ಣಗಳನ್ನು ಪಡೆದಿದೆ.

ಸುತ್ತಳತೆ (Dimensions):

ನೂತನ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಸರಿ ಸುಮಾರು 995 ಎಂಎಂ ಉದ್ದ, 1765 ಎಂಎಂ ಅಗಲ & 1550 ಎಂಎಂ ಎತ್ತರವು ಇದೆ. ಜೊತೆಗೆ 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2520 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

Maruti Suzuki Fronx Price Design Engine Features And All Top Things

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):

ಈ ಕಾರು ಶಕ್ತಿಯುತವಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20 ರಿಂದ 28 ಕಿ.ಮೀವರೆಗೂ ಮೈಲೇಜ್ ಕೊಡಬಲ್ಲದು.

Maruti Suzuki Fronx Price Design Engine Features And All Top Things

ವೈಶಿಷ್ಟ್ಯಗಳು (Features):

ಹೊಸ ಫ್ರಾಂಕ್ಸ್ ಎಸ್‌ಯುವಿಯ ಕ್ಯಾಬಿನ್ ಕೂಡ ತುಂಬಾ ಚೆನ್ನಾಗಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ - ಕ್ಲೇಮೇಟ್ ಕಂಟ್ರೋಲ್, ಹೆಡ್ಸ್ ಅಪ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, 4 ಸ್ಪೀಕರ್‌ಗಳು ಮತ್ತು ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ - ಹೋಲ್ಡ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಬ್ರೇಕ್ ಅಸಿಸ್ಟ್ ಮತ್ತು 360 - ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

Article Published On: Monday, July 28, 2025, 17:43 [IST]
English summary
Maruti suzuki fronx price design engine features and all top things
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+