28 ಕಿ.ಮೀ ಮೈಲೇಜ್.. 6.85 ಲಕ್ಷ, 5-ಸೀಟರ್.. ಈ ಮಾರುತಿ ಕಾರಿಗೆ ಭರ್ಜರಿ ಬೇಡಿಕೆ, ಮುಗಿಬಿದ್ದ ಗ್ರಾಹಕರು!
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಜಗಮೆಚ್ಚಿದ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ 'ಫ್ರಾಂಕ್ಸ್' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 13,767 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 13,874 ಯುನಿಟ್‌ಗಳನ್ನು ಮಾರಲಾಗಿತ್ತು. ಆದರೂ ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಬೆರಳೆಣಿಕೆಯಷ್ಟು ಅಂದರೆ ಶೇಕಡ -1% ಕುಸಿತವಾಗಿದೆ.
'ಮಾರುತಿ ಫ್ರಾಂಕ್ಸ್' ವಿಶೇಷತೆಗಳೇನು:
ಈ ಕಾರು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿ ದೊರೆಯುತ್ತದೆ. ಕನಿಷ್ಠ ರೂ.6.85 ಲಕ್ಷ ಹಾಗೂ ಗರಿಷ್ಠ ರೂ.11.98 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಹೊಂದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ & ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಅತ್ಯಾಧುನಿಕವಾದ ವಿನ್ಯಾಸ ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 16 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ, ಅರ್ಥನ್ ಬ್ರೌನ್ ಮತ್ತು ಆಫ್ಯುಲೆಂಟ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಹೊಸ 'ಫ್ರಾಂಕ್ಸ್' ಹೆಚ್ಚು ವಿಶಾಲವಾಗಿದೆ. 995 ಮಿ.ಮೀ ಉದ್ದ, 1,765 ಮಿ.ಮೀ ಅಗಲ ಹಾಗೂ 1550 ಮಿ.ಮೀ ಎತ್ತರವಿದೆ. ಜೊತೆಗಿದು 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2520 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1480 ಕೆಜಿ ತೂಕವಿದೆ.
ಈ ಕಾರು ಶಕ್ತಿಶಾಲಿಯಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್, 99 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 148 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.1 ರಿಂದ 21.5 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಇನ್ನೊಂದು 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 89 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. 21.79 ರಿಂದ 22.89 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಮತ್ತೊಂದು 1.2-ಲೀ. ಸಿಎನ್‌ಜಿ ಎಂಜಿನ್, 76 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 99 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 28.51 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ನೂತನ 'ಫ್ರಾಂಕ್ಸ್' 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಜಾಸ್ತಿ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 308 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಮತ್ತು ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಬ್ರೇಕ್ ಅಸಿಸ್ಟ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಕೊಂಡಿದೆ.


Click it and Unblock the Notifications








