28 Km ಮೈಲೇಜ್.. 5-ಸೀಟರ್, 7.60 ಲಕ್ಷ.. ಎರಡೇ ವರ್ಷದಲ್ಲಿ 5,00,000 ಯುನಿಟ್ Fronx ಕಾರುಗಳು ತಯಾರು.. ಭಾರೀ ಬೇಡಿಕೆ!

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಹೆಚ್ಚು ಜನಮನ್ನಣೆ ಗಳಿಸಿರುವ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹಲವು ಬಗೆಯ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈ 2025ರ ಜುಲೈ ತಿಂಗಳಲ್ಲೂ 'ಫ್ರಾಂಕ್ಸ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 12,872 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 10,925 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ಶೇಕಡ 17.82% ಪ್ರಗತಿಯಾಗಿದೆ.

ಸದ್ಯ, ಇದೇ ಮಾರುತಿ ಸುಜುಕಿ ಫ್ರಾಂಕ್ಸ್ ತಯಾರಿಕೆಯಲ್ಲಿ ಹೊಸ ಇತಿಹಾಸ ಬರೆಯಲಾಗಿದೆ. ಎರಡೇ ವರ್ಷದಲ್ಲಿ 5 ಲಕ್ಷ ಯುನಿಟ್ ಕಾರುಗಳನ್ನು ಉತ್ಪಾದಿಸಲಾಗಿದೆ. ಈ ಮೂಲದ ಬಹುದೊಡ್ಡ ಮೈಲಿಗಲ್ಲನ್ನು ಸಾಧಿಸಲಾಗಿದೆ. 2023ರ ಆಗಸ್ಟ್‌ನಲ್ಲಿ ಈ ಫ್ರಾಂಕ್ಸ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಆ ಮೊದಲು ಅದೇ ವರ್ಷದ ಮಾರ್ಚ್ ತಿಂಗಳಲ್ಲಿ ಉತ್ಪಾದನೆಯನ್ನು ಶುರು ಮಾಡಲಾಯಿತು. ಡಿಸೆಂಬರ್ ವರ್ಷಾಂತ್ಯದ ವೇಳೆಗೆ 1 ಲಕ್ಷ ಯುನಿಟ್‌ಗಳನ್ನು ತಯಾರಿಸಲಾಯಿತು.

Maruti Suzuki Fronx Suv Achieves 5 Lakh Production Milestone Details

2024ರ ಜೂನ್ ತಿಂಗಳವರೆಗೆ ಉತ್ಪಾದನೆಗೊಂಡ ಒಟ್ಟು ಫ್ರಾಂಕ್ಸ್ ಕಾರುಗಳ ಸಂಖ್ಯೆ 2 ಲಕ್ಷ ಯುನಿಟ್‌ಗಳಿಗೆ ತಲುಪಿತು. ಆ ವರ್ಷದ ನವೆಂಬರ್ ವೇಳೆಗೆ ಅದು 3 ಲಕ್ಷ ಯುನಿಟ್‌ಗಳಿಗೆ ಹೆಚ್ಚಳವಾಯಿತು. 2025ರ ಫೆಬ್ರವರಿ ಹೊತ್ತಿಗೆ 4 ಯುನಿಟ್ ಫ್ರಾಂಕ್ಸ್ ಎಸ್‌ಯುವಿಗಳು ತಯಾರಾಗಿದ್ದವು.

2024-25ನೇ ಆರ್ಥಿಕ ವರ್ಷದಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್, ವಿದೇಶಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಫ್ತುಗೊಂಡ ಪ್ರಯಾಣಿಕ ವಾಹನವಾಗಿಯೂ ಹೊರಹೊಮ್ಮಿದೆ. ಇದು ಮಾತ್ರವಲ್ಲದೆ, ದೇಶೀಯ ಮಾರುಕಟ್ಟೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿಯೂ ಸ್ಥಾನ ಪಡೆದಿದೆ.

Maruti Suzuki Fronx Suv Achieves 5 Lakh Production Milestone Details

ಮಾರುತಿ ಸುಜುಕಿ ಫ್ರಾಂಕ್ಸ್ ವಿಶೇಷತೆಗಳೇನು:

ಇದೊಂದು ಎಸ್‌ಯುವಿಯಾಗಿದೆ. ಆದರೂ ಬಜೆಟ್ ಬೆಲೆಯಲ್ಲಿಯೇ ಲಭ್ಯವಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಅದಕ್ಕೆ ತಕ್ಕಂತೆ ರೂ.7.60 ಲಕ್ಷದಿಂದ ರೂ.13.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರೊಂದಿಗೆ ಸಿಗ್ಮಾ, ಡೆಲ್ಟಾ ಹಾಗೂ ಜಿಟಾ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ.

ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅದು ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿರುವ ಅಲಾಯ್ ವೀಲ್‌ಗಳನ್ನು ಪಡೆದಿದೆ. ಆರ್ಕ್ಟಿಕ್ ವೈಟ್, ಅರ್ಥನ್ ಬ್ರೌನ್, ಗ್ರ್ಯಾಂಡಿಯರ್ ಗ್ರೇ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Suzuki Fronx Suv Achieves 5 Lakh Production Milestone Details

ನೂತನ ಫ್ರಾಂಕ್ಸ್ 5 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 308 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 995 ಎಂಎಂ ಉದ್ದ, 1765 ಎಂಎಂ ಅಗಲ ಮತ್ತು 1550 ಎಂಎಂ ಎತ್ತರ ಕೂಡ ಇದೆ. ಜೊತೆಗೆ 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2520 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಇದು 3 ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊ ಚಾರ್ಜ್ಡ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20 ರಿಂದ 28 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 37 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. 9-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಕ್ರೂಸ್ ಕಂಟ್ರೋಲ್ ರಿಮೋರ್ಟ್ ಕಂಟ್ರೋಲ್ ಡೋರ್‌ಗಳು, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Tuesday, August 19, 2025, 17:18 [IST]
English summary
Maruti suzuki fronx suv achieves 5 lakh production milestone details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+