5-ಸೀಟರ್.. 7.51 ಲಕ್ಷ.. 28.51 Km ಮೈಲೇಜ್.. ಈ ಮಾರುತಿ ಕಾರಿಗೆ ಮನಸೋತ ಖರೀದಿದಾರರು!
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಯಾಗಿ ಹೆಸರುವಾಸಿಯಾಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ವಿವಿಧ ಕಾರು ತಯಾರಕ ಕಂಪನಿಗಳು ಡಿಸೆಂಬರ್ ತಿಂಗಳ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ಮಾರುತಿ ಸುಜುಕಿ ಈ ಫ್ರಾಂಕ್ಸ್ ಎಸ್‌ಯುವಿ ಮಾರಾಟದಲ್ಲಿ ನೀರಿಕ್ಷೆಗೂ ಮೀರಿದ ಬೆಳವಣಿಗೆಯನ್ನು ಸಾಧಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಡಿಸೆಂಬರ್ - 2024) ಮಾರುತಿ ಸುಜುಕಿ ಇಂಡಿಯಾ, ಸರಿ ಸುಮಾರು 10,752 ಯುನಿಟ್ 'ಫ್ರಾಂಕ್ಸ್' ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 9,692 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 11% ಪ್ರಗತಿ ಕಂಡಿದೆ. ಆದರೂ ವರ್ಷಾಂತ್ಯವಾದ ಹಿನ್ನೆಲೆ, ಮಾರಾಟ ಪ್ರಮಾಣ ಕುಸಿತವಾಗಿದೆ.

2024ರ ನವೆಂಬರ್‌ನಲ್ಲಿ 14,882 ಯುನಿಟ್, ಅಕ್ಟೋಬರ್‌ನಲ್ಲಿ 16,419 ಯುನಿಟ್, ಸೆಪ್ಟೆಂಬರ್‌ನಲ್ಲಿ 13,874 ಯುನಿಟ್, ಆಗಸ್ಟ್‌ನಲ್ಲಿ 12,387 ಯುನಿಟ್ ಹಾಗೂ ಜುಲೈನಲ್ಲಿ 10,925 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಫ್ರಾಂಕ್ಸ್ ಎಸ್‌ಯುವಿ ಬಜೆಟ್ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.7.51 ಲಕ್ಷದಿಂದ ರೂ.13.04 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ.
ಈ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದ್ದು, ನೋಡುಗರನ್ನು ಸೆಳೆಯುತ್ತದೆ. ನೂತನ ಫ್ರಾಂಕ್ಸ್ ಎಸ್‌ಯುವಿ ಸಿಗ್ಮಾ, ಡೆಲ್ಟಾ & ಜಿಟಾ ಒಳಗೊಂಡಂತೆ ವಿವಿಧ ರೂಪಾಂತರಗಳನ್ನು ಹೊಂದಿದೆ. ಜೊತೆಗೆ ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್ ಮತ್ತು ಗ್ರ್ಯಾಂಡ್ಯೂರ್ ಗ್ರೇ ಒಳಗೊಂಡಂತೆ ಹಲವು ನವೀನವಾದ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಡುಯಲ್ಜೆಟ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಬರೋಬ್ಬರಿ 20.1 ರಿಂದ 28.51 ಕೆಎಂಪಿಎಲ್‌ವರೆಗೂ ಮೈಲೇಜ್‌ನ್ನು ನೀಡುತ್ತದೆ.
ಈ ಕಾರು ಸಾಕಷ್ಟು ವಿಶಾಲವಾಗಿದ್ದು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ತೆರಳಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.

ಹೊಸ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ನೂತನ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಯಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಈ ಕಾರಿಗೆ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಟಾಟಾ ಟಾಟಾ ನೆಕ್ಸಾನ್, ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications