28 Km ಮೈಲೇಜ್.. 7 ಲಕ್ಷ, 5-ಸೀಟರ್.. 6-ಏರ್‌ಬ್ಯಾಗ್‌ಗಳು, ಈ Maruti Suv ರೆಕಾರ್ಡ್ ಸಂಖ್ಯೆಯಲ್ಲಿ ಮಾರಾಟ!
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ವಿಭಾಗದಲ್ಲಿ ತನ್ನದೇಯಾದ ಛಾಪನ್ನು ಮೂಡಿಸಿದೆ. ಇದು ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಉತ್ತಮವಾದ ಕಾರ್ಯಕ್ಷಮತೆಗೂ ಹೆಸರುವಾಗಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ ಜುಲೈ ತಿಂಗಳು 'ಫ್ರಾಂಕ್ಸ್' ಕಾರು ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬರೋಬ್ಬರಿ 12,900 ಯುನಿಟ್‌ಗಳನ್ನು ಖರೀದಿದಾರರಿಗೆ ವಿವರಣೆ ಮಾಡಲಾಗಿದೆ.
ಇದೇ ವರ್ಷದ ಮೊದಲ 6 ತಿಂಗಳಲ್ಲೂ 'ಮಾರುತಿ ಸುಜುಕಿ ಫ್ರಾಂಕ್ಸ್' ಎಸ್‌ಯುವಗಳು ಭಾರೀ ಪ್ರಮಾಣದಲ್ಲಿ ಮಾರಾಟವಾಗಿವೆ. ಒಟ್ಟು 72,874 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ, ಪ್ರತಿ ತಿಂಗಳು ಸರಾಸರಿ 12,145 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ವಿಶೇಷತೆಗಳೇನು:
ಇದು ಮಾರುತಿ ಸುಜುಕಿಯ ಬಲೆನೊ ಹಾಗೂ ಬ್ರೆಝಾ ಕಾರಿನ ಕ್ರಾಸ್-ಓವರ್ ಮಾಡೆಲ್ ಆಗದ್ದು, ರೂ.7.54 ಲಕ್ಷದಿಂದ ರೂ.13.06 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಡೆಲ್ಟಾ ಪ್ಲಸ್ (ಒ), ಜಿಟಾ ಮತ್ತು ಆಲ್ಫಾ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ.
ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಫುಲ್-ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ, ಅರ್ಥನ್ ಬ್ರೌನ್ ಹಾಗೂ ಬ್ಲ್ಯೂಯಿಸ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಫ್ರಾಂಕ್ಸ್ ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 148 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಇನ್ನೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್/ಸಿಎನ್‌ಜಿ ಎಂಜಿನ್, 77.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಒಳಗೊಂಡಿದೆ. ಈ ಕಾರು 20 ರಿಂದ 28 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು.
ಇದು 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 308 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ದೂರದ ಊರುಗಳಿಗೆ ಪ್ರಯಾಣಿಸಲು ಸಾಧ್ಯವಾಗುವಂತೆ 37 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಕಾರು 9-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್ ಅಪ್ ಡಿಸ್‌ಪ್ಲೇ, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಮತ್ತು ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಲೆಕ್ಟ್ರಾನಿಕ್ ಬ್ರೇಕ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications