28 ಕಿ.ಮೀ ಮೈಲೇಜ್.. 7 ಲಕ್ಷ, 5-ಸೀಟರ್.. ಈ ಜನಪ್ರಿಯ ಮಾರುತಿ ಕಾರಿಗೆ ಮನಸೋತ ಗ್ರಾಹಕರು!
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಪ್ರಮುಖ ಕಾಂಪ್ಯಾಕ್ಟ್ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ಇದು ಬಲೆನೊ ಹ್ಯಾಚ್‌ಬ್ಯಾಕ್‌ನ್ನು ಆಧರಿಸಿದ್ದು, ಅತ್ಯಾಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ಜೂನ್ ತಿಂಗಳಲ್ಲೂ ಇದೇ 'ಫ್ರಾಂಕ್ಸ್' ಕಾರು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, ಒಟ್ಟು 9,815 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 1% ಪ್ರಗತಿಯಾಗಿದೆ. 2024ರ ಇದೇ ಅವಧಿಯಲ್ಲಿ 9,688 ಯುನಿಟ್‌ಗಳನ್ನು ಮಾರಲಾಗಿತ್ತು.
ಈ ವರ್ಷದ ಮೊದಲ 5 ತಿಂಗಳಲ್ಲೂ 'ಮಾರುತಿ ಸುಜುಕಿ ಫ್ರಾಂಕ್ಸ್' ಕಾರಿನ ಮಾರಾಟವು ತುಂಬಾ ಚೆನ್ನಾಗಿದೆ. ಮೇನಲ್ಲಿ 13,584 ಯುನಿಟ್, ಏಪ್ರಿಲ್‌ನಲ್ಲಿ 14,345 ಯುನಿಟ್, ಮಾರ್ಚ್‌ನಲ್ಲಿ 13,669 ಯುನಿಟ್, ಫೆಬ್ರವರಿಯಲ್ಲಿ 21,461 ಯುನಿಟ್ ಹಾಗೂ ಜನವರಿ ತಿಂಗಳಲ್ಲಿ 15,192 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ವಿಶೇಷತೆಗಳೇನು:
ಈ ಎಸ್‌ಯುವಿ ಅತಿ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.7.54 ಲಕ್ಷದಿಂದ ರೂ.13.03 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಡೆಲ್ಟಾ ಪ್ಲಸ್ (ಒ), ಜಿಟಾ ಹಾಗೂ ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.
ಹೊಸ ಫ್ರಾಂಕ್ಸ್ ಕಾರು ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರನ್ನು ಸೆಳೆಯುವಂತಿದೆ. ಆರ್ಕ್ಟಿಕ್ ವೈಟ್, ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ, ಅರ್ಥನ್ ಬ್ರೌನ್ ಹಾಗೂ ಆಫ್ಯುಲೆಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರು 995 ಎಂಎಂ ಉದ್ದ, 1765 ಎಂಎಂ ಅಗಲ & 1550 ಎಂಎಂ ಎತ್ತರವು ಇದೆ.

ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಎಲ್ಲಿಯಾದರೂ ಪ್ರವಾಸಕ್ಕೆ ಹೋಗುವಾಗ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 308 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 37 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಡುಯಲ್ಜೆಟ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 20 ರಿಂದ 28 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಫ್ರಾಂಕ್ಸ್ ಎಸ್‌ಯುವಿಯ ಕ್ಯಾಬಿನ್ ವಿನ್ಯಾಸವು ಹೆಚ್ಚು ಅತ್ಯಾಧುನಿಕವಾಗಿದೆ. 9-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್, ಮಲ್ಟಿ - ಫಂಕ್ಷನ್ ಸ್ಟೀರಿಂಗ್ ವೀಲ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಹಾಗೂ 4 ಸ್ಪೀಕರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಬ್ರೇಕ್ ಅಸಿಸ್ಟ್ ಹಾಗೂ 360 - ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications