Maruti Fronx: 28 ಕಿ.ಮೀ ಮೈಲೇಜ್.. 5-ಸೀಟರ್, 6 ಏರ್‌ಬ್ಯಾಗ್‌ನೊಂದಿಗೆ ಅಗ್ಗದ ಮಾರುತಿ ಫ್ರಾಂಕ್ಸ್ ಕಾರು ಬಿಡುಗಡೆ
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಜನಾಕರ್ಷಣೆಯ ಎಸ್‌ಯುವಿಯಾಗಿದೆ. ಈ ಕಾರನ್ನು ನೆಕ್ಸಾ ಪ್ರೀಮಿಯಂ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸಲಾಗುತ್ತಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಈ ವರ್ಷದ ಮೊದಲರ್ಧದಲ್ಲಿ ಒಟ್ಟು 88,066 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಸದ್ಯ ಪ್ರಯಾಣಿಕರ ರಕ್ಷಣೆಗಾಗಿ ಇದೇ 'ಫ್ರಾಂಕ್ಸ್' ಕಾರನ್ನು ನವೀಕರಿಸಿಯೂ ಬಿಡುಗಡೆಗೊಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಇನ್ಮುಂದೆ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿಯ ಎಲ್ಲ ರೂಪಾಂತರಗಳು (ವೇರಿಯೆಂಟ್), ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್‌ನೊಂದಿಗೆ ಖರೀದಿಗೆ ಲಭ್ಯವಾಗಲಿವೆ. ಹೀಗಾಗಿ, ಈ ಕಾರಿನ ಬೆಲೆಯನ್ನು ಶೇಕಡ 0.5% ಹೆಚ್ಚಳ ಮಾಡಲಾಗಿದ್ದು, ರೂ.7.60 ಲಕ್ಷದಿಂದ ರೂ.13.10 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಇದೇ ತಿಂಗಳು ಬಲೆನೊ, ಎರ್ಟಿಗಾ ಹಾಗೂ ಎಕ್ಸ್ಎಲ್6 ಕಾರುಗಳನ್ನು 6 ಏರ್‌ಬ್ಯಾಗ್ ಆಯ್ಕೆಯೊಂದಿಗೆ ಮೇಲ್ದರ್ಜೆಗೇರಿಸಲಾಗಿತ್ತು.

ಮಾರುತಿ ಸುಜುಕಿ ಫ್ರಾಂಕ್ಸ್ ವಿಶೇಷತೆಗಳೇನು:
ಈ ಎಸ್‌ಯುವಿಯು ಸಿಗ್ಮಾ, ಡೆಲ್ಟಾ ಮತ್ತು ಜಿಟಾ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ವಿನ್ಯಾಸದ ದೃಷ್ಟಿಯಿಂದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 16-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಅರ್ಥನ್ ಬ್ರೌನ್, ಗ್ರ್ಯಾಂಡಿಯರ್ ಗ್ರೇ ಮತ್ತು ನೆಕ್ಸಾ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮಾಯವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 995 ಎಂಎಂ ಉದ್ದ, 1765 ಎಂಎಂ ಅಗಲ & 1550 ಎಂಎಂ ಎತ್ತರವು ಇದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ ಫ್ರಾಂಕ್ಸ್ ಮೂರು ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀಟರ್ ಟರ್ಬೊ ಚಾರ್ಜ್ಡ್ ಪೆಟ್ರೋಲ್ ಎಂಜಿನ್, 99 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 148 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಮತ್ತೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 89 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ.

ಇನ್ನೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 76 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 99 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಕಾರು ಯಾವ ಬೈಕ್‌ಗೂ ಕಮ್ಮಿಯಿಲ್ಲ ಎಂಬಂತೆ 20 ರಿಂದ 28 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ.
ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್ ಅಪ್ ಡಿಸ್‌ಪ್ಲೇ, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್, ಕ್ರೂಸ್ ಕಂಟ್ರೋಲ್ ರಿಮೋರ್ಟ್ ಕಂಟ್ರೋಲ್ ಡೋರ್‌ಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು ಮಾತ್ರವಲ್ಲದೆ, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications