28 Km ಮೈಲೇಜ್.. 7 ಲಕ್ಷ, ಈ Maruti Suv ಕಂಡ್ರೆ ಗ್ರಾಹಕರು ಮುಗಿಬೀಳುವರು.. ಭಾರೀ ಸಂಖ್ಯೆಯಲ್ಲಿ ಸೇಲ್ಸ್!
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರನ್ನು ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಬೇಡಿಕೆ ಅಧಿಕಗೊಳ್ಳುತ್ತಿದ್ದು, ಇದೇ 'ಮೇ'ನಲ್ಲೂ ಫ್ರಾಂಕ್ಸ್ ಎಸ್‌ಯುವಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 13,584 ಯುನಿಟ್‌ಗಳನ್ನು ಮಾರಲಾಗಿದೆ. 2024ರ ಮೇ ತಿಂಗಳಲ್ಲಿ 12,681 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 7.12% ಪ್ರಗತಿಯಾಗಿದೆ.
ಈ ವರ್ಷದ ಮೊದಲ 4 ತಿಂಗಳಲ್ಲೂ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಏಪ್ರಿಲ್‌ನಲ್ಲಿ 14,345 ಯುನಿಟ್, ಮಾರ್ಚ್‌ನಲ್ಲಿ 13,669 ಯುನಿಟ್, ಫೆಬ್ರವರಿಯಲ್ಲಿ 21,461 ಯುನಿಟ್ ಹಾಗೂ ಜನವರಿಯಲ್ಲಿ 15,192 ಯುನಿಟ್‌ಗಳನ್ನು ಯಶಸ್ವಿಯಾಗಿಯೂ ಮಾರಾಟ ಮಾಡಲಾಗಿದೆ.

ಪ್ರತಿ ತಿಂಗಳು ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಳ್ಳಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರು, ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಅದಕ್ಕೆ ತಕ್ಕಂತೆ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಹೀಗಾಗಿ ಖರೀದಿದಾರರು ಸಹ ಮುಗಿಬಿದ್ದು ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ ವಿಶೇಷತೆಗಳೇನು:
ಇದೊಂದು ಎಸ್‌ಯುವಿಯಾಗಿದ್ದು, ಕನಿಷ್ಠ ರೂ.7.54 ಲಕ್ಷ ಹಾಗೂ ಗರಿಷ್ಠ ರೂ.13.03 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸಿಗ್ಮಾ, ಡೆಲ್ಟಾ ಮತ್ತು ಜಿಟಾ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್ & ಗ್ರ್ಯಾಂಡ್ಯೂರ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಡುಯಲ್ಜೆಟ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20 ರಿಂದ 28 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿವೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 308 ಲೀಟರ್ ಸಾಮರ್ಥ್ಯದ ಸ್ಪೇಸ್‌ನ್ನು ಒಳಗೊಂಡಿದೆ. 37 ಲೀಟರ್‌ನ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಈ ಕಾರು 995 ಎಂಎಂ ಉದ್ದ, 1765 ಎಂಎಂ ಅಗಲ ಹಾಗೂ 1550 ಎಂಎಂ ಎತ್ತರವು ಇದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2520 ಎಂಎಂ ವೀಲ್ ಬೇಸ್‌ನ್ನು ಹೊಂದಿದೆ.

ನೂತನ ಫ್ರಾಂಕ್ಸ್ ಎಸ್‌ಯುವಿಯು ಅತ್ಯತ್ತಮವಾದ ಕ್ಯಾಬಿನ್ ವಿನ್ಯಾಸವನ್ನು ಹೊಂದಿದೆ. ಇದು ಎಲ್ಲರನ್ನು ಈ ಕಾರಿನಲ್ಲಿ ಪ್ರಯಾಣಿಸುವಂತೆ ಪ್ರೇರೇಪಿಸುತ್ತದೆ. ಹಾಗೆಯೇ 9 - ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಹೆಡ್ಸ್ - ಅಪ್ ಡಿಸ್‌ಪ್ಲೇ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾದಂತಹ ಹತ್ತಾರು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications