28 Km ಮೈಲೇಜ್.. ಬರೀ 6.85 ಲಕ್ಷ, ಸಾಲು ಕಟ್ಟಿದ ಗ್ರಾಹಕರು.. ಈ ಮಾರುತಿ SUV ಭಾರೀ ಸಂಖ್ಯೆಯಲ್ಲಿ ಮಾರಾಟ!

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಜನಪ್ರಿಯ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಆಕರ್ಷಕವಾದ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಈ ಅಕ್ಟೋಬರ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬರೋಬ್ಬರಿ 17,003 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 13,874 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 3.56% ಬೆಳವಣಿಗೆಯಾಗಿದೆ.

ಆದರೂ ಇದೇ ವರ್ಷದ ಮೇನಿಂದ ಸೆಪ್ಟೆಂಬರ್‌ವರೆಗೆ 'ಮಾರುತಿ ಫ್ರಾಂಕ್ಸ್' ಮಾರಾಟವು ಒಂದಷ್ಟು ಮಟ್ಟಿಗೆ ಸಾಧಾರಣವಾಗಿತ್ತು. ಒಟ್ಟು 62,460 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ ಅಂಶಗವನ್ನು ವಿಶ್ಲೇಷಣೆ ಮಾಡಿದಾಗ ಪ್ರತಿ ತಿಂಗಳು ಸರಾಸರಿ 12,492 ಯುನಿಟ್‌ಗಳನ್ನು ಮಾರಾಟಗೊಂಡಿವೆ.

Maruti Suzuki Fronx Suv October 2025 Sales Report

ಕಳೆದ ತಿಂಗಳು (ಅಕ್ಟೋಬರ್ - 2025) 'ಮಾರುತಿ ಸುಜುಕಿ ಫ್ರಾಂಕ್ಸ್' ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್‌ 22ರಿಂದ ಪರಿಷ್ಕೃತ ಜಿಎಸ್‌ಟಿ ತೆರಿಗೆ ದರಗಳು ಜಾರಿಗೊಂಡಿವೆ. ಈ ಕಾರಿನ ದರವು ದೊಡ್ಡ ಮಟ್ಟದಲ್ಲಿ ಕಡಿಮೆಯಾಗಿದೆ. ಇದರೊಂದಿಗೆ ದೀಪಾವಳಿ ಹಬ್ಬದ ಹಿನ್ನೆಲೆಯಿಂದಲೂ 'ಫ್ರಾಂಕ್ಸ್' ಕಾರಿನ ಮಾರಾಟವು ಹೆಚ್ಚಳಗೊಂಡಿದೆ ಎಂದು ಹೇಳಲಾಗಿದೆ.

'ಮಾರುತಿ ಫ್ರಾಂಕ್ಸ್' ವಿಶೇಷತೆಗಳೇನು:

ಈ ಕಾರು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ (Sigma), ಡೆಲ್ಟಾ (Delta), ಡೆಲ್ಟಾ ಪ್ಲಸ್ (Delta Plus) ಹಾಗೂ ಆಲ್ಫಾ (Alpha) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

Maruti Suzuki Fronx Suv October 2025 Sales Report

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ ಹಾಗೂ ಅರ್ಥನ್ ಬ್ರೌನ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2520 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಫ್ರಾಂಕ್ಸ್' ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. 1-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 20 ರಿಂದ 28.51 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

Maruti Suzuki Fronx Suv October 2025 Sales Report

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಇದು 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಹಾಗೂ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Wednesday, November 19, 2025, 17:07 [IST]
English summary
Maruti suzuki fronx suv october 2025 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+