28 Km ಮೈಲೇಜ್.. 5-ಸೀಟರ್, 11 ಲಕ್ಷ.. ಈ ಜನಪ್ರಿಯ ಕಾರಿಗೆ ಮನಸೋತ ಗ್ರಾಹಕರು, 3 ಲಕ್ಷ ಯುನಿಟ್ ಸೇಲ್ಸ್!

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರನ್ನು ನೆಕ್ಸಾ (NEXA) ಡೀಲರ್‌ಶಿಪ್ ಮೂಲಕ ಯಶಸ್ವಿಯಾಗಿ ಮಾರಾಟಗೊಳಿಸಲಾಗುತ್ತಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿ ಸಿಗುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ನೂತನ 'ಗ್ರ್ಯಾಂಡ್ ವಿಟಾರಾ' ಮಾರಾಟದಲ್ಲಿ ಹೊಸದೊಂದು ಇತಿಹಾಸ ಬರೆಯಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ 'ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ' ಎಸ್‌ಯುವಿಯನ್ನು 2022ರ ಸೆಪ್ಟೆಂಬರ್‌ನಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೆ ಈ ಕಾರಿಗೆ ಭಾರೀ ಬೇಡಿಕೆಯಿದ್ದು, ಕೇವಲ 32 ತಿಂಗಳು ಕಳೆಯುವುದರಲ್ಲಿ 3 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಇದರೊಂದಿಗೆ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಲಾಗಿದೆ.

Maruti Suzuki Grand Vitara Suv Achieve 3 Lakh Sales Milestone Details

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ವಿಶೇಷತೆಗಳೇನು..

ಇದೊಂದು ಮಿಡ್-ಸೈಜ್ ಎಸ್‌ಯುವಿಯಾಗಿದೆ. ಕನಿಷ್ಠ ರೂ.11.42 ಲಕ್ಷದಿಂದ ಗರಿಷ್ಠ ರೂ.20.68 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಕಾರು ಹೊರಭಾಗದಲ್ಲಿ ಉತ್ತಮವಾದ ವಿನ್ಯಾಸ ಹೊಂದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಎಸ್‌ಯುವಿಯು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19 ರಿಂದ 28 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Maruti Suzuki Grand Vitara Suv Achieve 3 Lakh Sales Milestone Details

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆ ಇದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 373 ಲೀಟರ್ ಸಾಮರ್ಥ್ಯವಿರುವ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಮತ್ತು ಹೆಡ್ಸ್-ಅಪ್ ಡಿಸ್‌ಪ್ಲೇಯನ್ನು ಪಡೆದಿದೆ.

ನೂತನ ಗ್ರ್ಯಾಂಡ್ ವಿಟಾರಾ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 - ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಡಿಸೆಂಟ್ ಕಂಟ್ರೋಲ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಅತಿ ಶೀಘ್ರದಲ್ಲೇ ಮಾರುತಿ ಸುಜುಕಿ ಇ-ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿಯು ಲಭ್ಯ..

ಇದು ರೂ.17 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. 49 ಹಾಗೂ 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುವ ಸಾಧ್ಯತೆಯಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, June 9, 2025, 10:32 [IST]
English summary
Maruti suzuki grand vitara suv achieve 3 lakh sales milestone details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+