27 ಕಿ.ಮೀ ಮೈಲೇಜ್.. 11 ಲಕ್ಷ.. ಈ ಜನಪ್ರಿಯ 'Maruti SUV' ಖರೀದಿಸಲು ಗ್ರಾಹಕರಿಗೆ ಮನಸಿಲ್ಲ, ಇಲ್ಲಿದೆ ಕಾರಣ!
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರನ್ನು ಸಾಮಾನ್ಯರಿಂದ ಹಿಡಿದು ಸಿನಿಮಾ ನಟ, ನಟಿಯರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಆದರೆ, ಕೆಲವು ತಿಂಗಳಿನಿಂದ ಮಾರಾಟ ಸಂಖ್ಯೆ ಅಷ್ಟು ಚೆನ್ನಾಗಿಲ್ಲ. ಈ ಏಪ್ರಿಲ್‌ನಲ್ಲೂ ಅದು ಮುಂದುವರಿದಿದೆ ಎಂದು ಹೇಳಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಕಳೆದ ತಿಂಗಳು (ಏಪ್ರಿಲ್-2025) ಮಾರುತಿ ಸುಜುಕಿ ಇಂಡಿಯಾ ಸರಿ ಸುಮಾರು 7,154 ಯುನಿಟ್ 'ಗ್ರ್ಯಾಂಡ್ ವಿಟಾರಾ' ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 7,651 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಅಂಶಕ್ಕೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ -6% ಕುಸಿತವಾಗಿದೆ.

ಈ ವರ್ಷದ ಮೊದಲು ತಿಂಗಳು ಸಹ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳು ನಿರೀಕ್ಷಿತ ಮಟ್ಟದಲ್ಲಿ ಮಾರಾಟಗೊಂಡಿಲ್ಲ. ಅಲ್ಲಿಯೂ ಏರಿಳಿತವನ್ನು ಕಾಣಲಾಗಿದೆ. ಮಾರ್ಚ್‌ನಲ್ಲಿ 10,418 ಯುನಿಟ್, ಫೆಬ್ರವರಿಯಲ್ಲಿ 10,669 ಯುನಿಟ್ ಹಾಗೂ ಜನವರಿಯಲ್ಲಿ 15,784 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.
ಗ್ರ್ಯಾಂಡ್ ವಿಟಾರಾ ಎಸ್‌ಯುವಿ ಮಾರಾಟದಲ್ಲಿ ಹಾವು - ಏಣಿ ಆಟ ಮುಂದುವರಿಯುತ್ತಿರುವ ಬಗ್ಗೆ ಕಂಪನಿಯು ಯಾವುದೇ ಸ್ಪಷ್ಟ ಕಾರಣವನ್ನು ಬಹಿರಂಗಪಡಿಸಿಲ್ಲ. ಈ ಕಾರಿಗೆ ಬೆಲೆಗೆ ಇತರೆ ಕಂಪನಿಗಳು ಕೂಡ ಹೆಚ್ಚು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ 'ಎಸ್‌ಯುವಿ'ಗಳನ್ನು ಮಾರಾಟ ಮಾಡುತ್ತಿವೆ. ಇದರಿಂದಾಗಿಯೇ 'ಮಾರಾಟ ಪ್ರಮಾಣ' ಇಳಿಕೆಯಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ವಿಶೇಷತೆಗಳೇನು..
ಈ ಎಸ್‌ಯುವಿ ಕೊಂಚ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ರೂ.11.42 ಲಕ್ಷದಿಂದ ರೂ.20.68 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 5 ಆಸನಗಳಿಸಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಜೊತೆಗೆ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ನೂತನ ಗ್ರ್ಯಾಂಡ್ ವಿಟಾರಾ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ & ಮೈಲ್ಡ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್ ಆಯ್ಕೆಯನ್ನು ಪಡೆದಿದೆ. ಇದರೊಟ್ಟಿಗೆ ಸಿಎನ್‌ಜಿ ಪವರ್‌ಟ್ರೇನ್‌ನ್ನು ಹೊಂದಿದ್ದು, 19.38 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಎಸ್‌ಯುವಿಯು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ನೆಕ್ಸಾ ಬ್ಲೂ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್ ಮತ್ತು ಹೆಡ್ಸ್-ಅಪ್ ಡಿಸ್‌ಪ್ಲೇಯನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications