27 Km ಮೈಲೇಜ್.. 5-ಸೀಟರ್, ಈ ಕಾರನ್ನು ಜನಸಾಮಾನ್ಯರೊಂದಿಗೆ ಸಿನಿ ಸ್ಟಾರ್‌ಗಳು ಖರೀದಿಸುವರು, ಹೇಗಿದೆ ಮಾರಾಟ?
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಜನಪ್ರಿಯ ಎಸ್‌ಯುವಿಯಾಗಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಜನಸಾಮಾನ್ಯರಿಂದ ಹಿಡಿದು ಸಿನಿಮಾ ಸ್ಟಾರ್‌ಗಳು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಾರೆ. ಇತ್ತೀಚೆಗೆ ಎಲ್ಲ ವಾಹನ ತಯಾರಕ ಕಂಪನಿಗಳು ಫೆಬ್ರವರಿ ತಿಂಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ದೇಶೀಯ ಮಾರುಕಟ್ಟೆಯಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಎಸ್‌ಯುವಿ ಪಟ್ಟಿಯಲ್ಲಿ 'ಗ್ರ್ಯಾಂಡ್ ವಿಟಾರಾ' ಕೂಡ ಇದ್ದು, ಏಳನೇ ಸ್ಥಾನದಲ್ಲಿದೆ.
ಕಳೆದ ತಿಂಗಳು (ಫೆಬ್ರವರಿ - 2025) ಮಾರುತಿ ಸುಜುಕಿ, ಸರಿ ಸುಮಾರು 10,669 ಗ್ರ್ಯಾಂಡ್ ವಿಟಾರಾ ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 11,002 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಸ್ವಲ್ಪ ಮಟ್ಟಿಗೆ ಅಂದರೆ ಶೇಕಡ -3% ಇಳಿಕೆಯಾಗಿದೆ. ಸದ್ಯಕ್ಕೆ ಈ ಮಾರಾಟ ಅಂಕಿಸಂಖ್ಯೆ ಕುಸಿತವಾಗಿರುವ ಬಗ್ಗೆ ಕಂಪನಿಯು ಯಾವುದೇ ಕಾರಣವನ್ನು ಬಹಿರಂಗಪಡಿಸಿಲ್ಲ.

ಇವೆಲ್ಲ ಒಂದು ಕಡೆಯಾದರೆ, ಜನವರಿಯಲ್ಲಿ ಮಾತ್ರ 15,784 ಯುನಿಟ್ ಗ್ರ್ಯಾಂಡ್ ವಿಟಾರಾ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿತ್ತು. 2024ರ ದ್ವಿತೀಯಾರ್ಧದಲ್ಲಿ ಸಹ ಈ ಎಸ್‌ಯುವಿಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿದ್ದವು. ಡಿಸೆಂಬರ್‌ನಲ್ಲಿ 7,093 ಯುನಿಟ್, ನವೆಂಬರ್‌ನಲ್ಲಿ 10,148 ಯುನಿಟ್, ಅಕ್ಟೋಬರ್‌ನಲ್ಲಿ 14,083 ಮತ್ತು ಸೆಪ್ಟೆಂಬರ್ ತಿಂಗಳಲ್ಲಿ 10,267 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.
ಸದ್ಯ ದೇಶೀಯವಾಗಿ ಖರೀದಿಗೆ ಲಭ್ಯವಿರುವ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ, ಕನಿಷ್ಠ ರೂ.11.19 ಲಕ್ಷ ಹಾಗೂ ಗರಿಷ್ಠ ರೂ.20.09 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸಿಗ್ಮಾ, ಡೆಲ್ಟಾ, ಜಿಟಾ ಮತ್ತು ಆಲ್ಫಾ ಒಳಗೊಂಡಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ತನ್ನದಾಗಿಸಿಕೊಂಡಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ಮೈಲ್ಡ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್), 1.5-ಲೀ. ಸ್ಟ್ರಾಂಗ್ ಹೈಬ್ರಿಡ್ ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ & ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19.38 ರಿಂದ 27.97 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಲ್ಲದು.
ನೂತನ ಮಾರುತಿ ಗ್ರ್ಯಾಂಡ್ ವಿಟಾರಾ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಜೊತೆಗೆ 373 ಲೀ. ಬೂಟ್ ಸ್ಪೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್ ಹಾಗೂ ಹೆಡ್ಸ್-ಅಪ್ ಡಿಸ್‌ಪ್ಲೇಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಹೊಸ ಗ್ರ್ಯಾಂಡ್ ವಿಟಾರಾ ಎಸ್‌ಯುವಿಗೆ ಹ್ಯುಂಡೈ ಕ್ರೆಟಾ, ಹೋಂಡಾ ಎಲಿವೇಟ್, ಕಿಯಾ ಸೆಲ್ಟೋಸ್ ಎಂಜಿ ಆಸ್ಟರ್ ಹಾಗೂ ಟೊಯೊಟಾ ಹೈರೈಡರ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications