28 Km ಮೈಲೇಜ್.. 5-ಸೀಟರ್, 11 ಲಕ್ಷ.. ಈ ಪ್ರಮುಖ Maruti Suv ಗ್ರಾಹಕರಿಗೆ ಬೇಡವಾಯ್ತಾ.. ಕಾರಣವೇನು?
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಜನಪ್ರಿಯ ಎಸ್‌ಯುವಿ ಎಂದೇ ಹೆಸರುವಾಗಿದೆ. ಇದು ಉತ್ತಮವಾದ ಕಾರ್ಯಕ್ಷಮತೆ ಹಾಗೂ ಆಕರ್ಷಕ ವೈಶಿಷ್ಟ್ಯಗಳಿಂದಲೂ ಮನೆ ಮಾತಾಗಿದೆ. ಅದರ ಹೊರತಾಗಿಯೂ ಈ ಕಾರಿನ ಮಾರಾಟ ಸಂಖ್ಯೆ ದಿನೇ ದಿನೆ ಕುಸಿತವಾಗುತ್ತಿದೆ. ಅದಕ್ಕೆ ಈ ಜೂನ್ ತಿಂಗಳು ಕೂಡ ಹೊರತಾಗಿಲ್ಲ. ಒಟ್ಟು 6,828 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ -29% ಇಳಿಕೆಯಾಗಿದೆ. 2024ರ ಇದೇ ಅವಧಿಯಲ್ಲಿ 9,679 ಯುನಿಟ್‌ಗಳನ್ನು ಮಾರಲಾಗಿತ್ತು.
ಈ ವರ್ಷದ ಮೊದಲ 5 ತಿಂಗಳಲ್ಲೂ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ಮಾರಾಟವು ಅಷ್ಟೊಂದು ಚೆನ್ನಾಗಿರಲಿಲ್ಲ. ಮೇನಲ್ಲಿ 5,197 ಯುನಿಟ್, ಏಪ್ರಿಲ್‌ನಲ್ಲಿ 7,154 ಯುನಿಟ್, ಮಾರ್ಚ್‌ನಲ್ಲಿ 10,418 ಯುನಿಟ್, ಫೆಬ್ರವರಿಯಲ್ಲಿ 10,669 ಯುನಿಟ್ ಹಾಗೂ ಜನವರಿಯಲ್ಲಿ 15,784 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮಾರಾಟ ಸಂಖ್ಯೆ ಇಳಿಮುಖವಾಗಲು ಹತ್ತಾರು ಕಾರಣಗಳಿವೆ. ಬಹುಮುಖ್ಯವಾಗಿ ಇದೇ ಎಸ್‌ಯುವಿ ಬೆಲೆಗೆ ಇತರೆ ಕಂಪನಿಗಳು ಹೆಚ್ಚು ಅತ್ಯಾಧುನಿಕವಾಗಿರುವ ಕಾರುಗಳನ್ನು ಮಾರಾಟ ಮಾಡುತ್ತಿವೆ. ಜೊತೆಗೆ ಗ್ರಾಹಕರು ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ, ಈ ಕಾರಿನ ಮಾರಾಟ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ವಿಶೇಷತೆಗಳೇನು:
ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿದಾರರಿಗೆ ಲಭ್ಯವಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಅದಕ್ಕೆ ತಕ್ಕಂತೆ ರೂ.11.42 ರಿಂದ ರೂ.20.68 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಗ್ರ್ಯಾಂಡ್ ವಿಟಾರಾ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಇದು ನೋಡುಗರನ್ನು ಸೆಳೆಯುತ್ತದೆ. ಗ್ರ್ಯಾಂಡಿಯರ್ ಗ್ರೇ, ಮಿಡ್‌ನೈಟ್ ಬ್ಲ್ಯಾಕ್, ನೆಕ್ಸಾ ಬ್ಲೂ, ಆಪ್ಯುಲೆಂಟ್ ರೆಡ್ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಈ ಕಾರು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರವು ಇದೆ. 2,600 ವೀಲ್‌ಬೇಸ್‌ನ್ನು ಒಳಗೊಂಡಿದೆ.
ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. ಜೊತೆಗೆ 45 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಸಾಕಷ್ಟು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 1.5-ಲೀ. ಮೈಲ್ಡ್ ಹೈಬ್ರಿಡ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.
ಹೊಸ ಗ್ರ್ಯಾಂಡ್ ವಿಟಾರಾ 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್ ಹಾಗೂ ಪನೋರಮಿಕ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದೇ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷೆಣೆಯನ್ನು ನೀಡಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications