27 Km ಮೈಲೇಜ್.. 5-ಸೀಟರ್, 10.77 ಲಕ್ಷ.. ಈ ಜನಾಕರ್ಷಣೆಯ ಮಾರುತಿ SUV ಕುರಿತ ಟಾಪ್ ಹೈಲೈಟ್‌ಗಳು!
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಪ್ರಮುಖ ಎಸ್‌ಯುವಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಈ ಕಾರನ್ನು ಸಾಮಾನ್ಯರಿಂದ ಹಿಡಿದು ಶ್ರೀಮಂತ ವರ್ಗದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ 'ಗ್ರ್ಯಾಂಡ್ ವಿಟಾರಾ' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಇಲ್ಲಿ ಈ ಕಾರಿನ ಬೆಲೆ, ವಿನ್ಯಾಸ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.10.77 ಲಕ್ಷ ಹಾಗೂ ಗರಿಷ್ಠ ರೂ.19.72 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ, ಜಿಟಾ (ಒ), ಆಲ್ಫಾ, ಆಲ್ಫಾ (ಒ), ಆಲ್ಫಾ ಪ್ಲಸ್ ಹಾಗೂ ಆಲ್ಫಾ ಪ್ಲಸ್ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 17 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ, ಆಪುಲೆಂಟ್ ರೆಡ್ ಹಾಗೂ ಮಿಡ್‌ನೈಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ನೂತನ 'ಗ್ರ್ಯಾಂಡ್ ವಿಟಾರಾ' ಎಸ್‌ಯುವಿಯು ಸಾಕಷ್ಟು ವಿಶಾಲವಾಗಿದೆ. 4,345 ಮಿ.ಮೀ ಉದ್ದ, 1,795 ಮಿ.ಮೀ ಅಗಲ ಹಾಗೂ 1,645 ಮಿ.ಮೀ ಎತ್ತರವಿದೆ. ಜೊತೆಗಿದು 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,755 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರು 5 ಆಸನಗಳನ್ನು ಹೊಂದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಹೊಸ 'ಮಾರುತಿ ಗ್ರ್ಯಾಂಡ್ ವಿಟಾರಾ' ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.5-ಲೀಟರ್ ಮೈಲ್ಡ್-ಹೈಬ್ರಿಡ್ ಪೆಟ್ರೋಲ್ ಎಂಜಿನ್, 103 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 139 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 21.11 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಮತ್ತೊಂದು 1.5-ಲೀಟರ್ ಸ್ಟ್ರಾಂಗ್-ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್, 115.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 141 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 27.97 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಇನ್ನೊಂದು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 88 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 121 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 26.6 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ವೈಶಿಷ್ಟ್ಯಗಳು (Features):
ಈ ಕಾರು 135 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 11.55 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಹಾಗೂ 360 ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಲಿದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು & 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








