Maruti Suzuki: ಏ.8ಕ್ಕೆ ಜಾರಿ.. ಗ್ರ್ಯಾಂಡ್ ವಿಟಾರಾ, ವ್ಯಾಗನ್ಆರ್ ಸೇರಿ ವಿವಿಧ ಕಾರುಗಳ ಬೆಲೆ ಭಾರೀ ಏರಿಕೆ.. ಎಷ್ಟಾಗಿದೆ?

ಮಾರುತಿ ಸುಜುಕಿ ಇಂಡಿಯಾ (Maruti Suzuki India), ವಿವಿಧ ಕಾರುಗಳ ಬೆಲೆಯನ್ನು ಏರಿಕೆ ಮಾಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನೂತನ ಪರಿಷ್ಕೃತ ದರಗಳು ಇದೇ ಏಪ್ರಿಲ್ 8 ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ. ಕಂಪನಿಯು ಕಾರುಗಳ ಮಾಡೆಲ್‌ಗಳಿಗೆ ಅನುಗುಣವಾಗಿ ರೂ.3,000 ದಿಂದ ರೂ.62,000 ವರೆಗೆ ಬೆಲೆಯನ್ನು ಹೆಚ್ಚಿಸಿದೆ. ಇದು ಶೇಕಡ 4% ದರ ಏರಿಕೆಯ ಪ್ರಕಾರವಾಗಿದೆ. ಮಾರುತಿ ಸುಜುಕಿಯು ತಯಾರಿಕಾ ವೆಚ್ಚ ಅಧಿಕಗೊಳ್ಳುವಿಕೆ ಮತ್ತು ಕಾರ್ಯಾಚರಣೆ ವೆಚ್ಚಗಳು ದ್ವಿಗುಣವಾಗಿರುವುದು ಸೇರಿದಂತೆ ನಾನಾ ಕಾರಣಗಳಿಗೆ ಬೆಲೆ ಏರಿಕೆಯನ್ನು ಘೋಷಣೆ ಮಾಡಿದೆ.

ಮಾರುತಿ ಸುಜುಕಿಯ ಜನಪ್ರಿಯ ಎಸ್‌ಯುವಿ ಗ್ರ್ಯಾಂಡ್ ವಿಟಾರಾ (Grand Vitara) ದರ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಈ ಕಾರಿನ ವಿವಿಧ ರೂಪಾಂತರಗಳ (ವೇರಿಯೆಂಟ್) ಬೆಲೆ ರೂ.62,000 ವರೆಗೆ ಹೆಚ್ಚಳಗೊಂಡಿದೆ. ಅದೇ ರೀತಿಯಲ್ಲಿ ಮಧ್ಯಮ ವರ್ಗದ ಜನರ ನೆಚ್ಚಿನ ಇಕೋ ವ್ಯಾನ್ (Eeco Van) ದರ ರೂ.22,500 ವರೆಗೆ ಅಧಿಕಗೊಂಡಿದೆ.

Maruti Suzuki Grand Vitara WagonR And Other Cars Price Increase Officially Effect From April 8

ನೂತನ ಮಾರುತಿ ಸುಜುಕಿ ವ್ಯಾಗನ್‌ಆರ್ (Maruti Suzuki WagonR) ಹ್ಯಾಚ್‌ಬ್ಯಾಕ್ ಬೆಲೆ ರೂ.14,000 ವರೆಗೆ ಏರಿಕೆಯಾಗಿದೆ. ಪ್ರಖ್ಯಾತ ಎಂಪಿವಿಗಳಾದ ಎರ್ಟಿಗಾ (Ertiga) ಹಾಗೂ ಎಕ್ಸ್ಎಲ್6 (XL6) ದರ ರೂ.12,500 ವರೆಗೆ ಜಾಸ್ತಿಯಾಗಿದೆ. ಫ್ರಾಂಕ್ಸ್ (Fronx) ಎಸ್‌ಯುವಿ ಬೆಲೆ ಅತಿ ಕಡಿಮೆ ಅಂದರೆ ರೂ.2,500 ವರೆಗೆ ಅಧಿಕಗೊಂಡಿದೆ. ಡಿಜೈರ್ ಆಧಾರಿತ ಟೂರ್ ಎಸ್ (Tour S) ಸೆಡಾನ್ ದರ ರೂ.3,000 ವರೆಗೆ ಹೆಚ್ಚಳಗೊಂಡಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ, ಕನಿಷ್ಠ ರೂ.11.19 ಲಕ್ಷ ಹಾಗೂ ಗರಿಷ್ಠ ರೂ.20.09 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, 19.38 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Maruti Suzuki Grand Vitara WagonR And Other Cars Price Increase Officially Effect From April 8

ಮಾರುತಿ ಸುಜುಕಿ ಇಕೋ ವ್ಯಾನ್ ರೂ.5.44 ಲಕ್ಷದಿಂದ ರೂ.6.70 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 19.71 ರಿಂದ 26.78 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 7 ಜನರು ಪ್ರಯಾಣಿಸಬಹುದು. ಸೆಮಿ-ಡಿಜಿಟಲ್ ಸ್ಪೀಡೋಮೀಟರ್ ಮತ್ತು ಮ್ಯಾನುವಲ್ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಹೊಸ ವ್ಯಾಗನ್‌ಆರ್ ಕಾರು, ರೂ.5.64 ಲಕ್ಷದಿಂದ ರೂ.7.47 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 23 ರಿಂದ 34 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

Maruti Suzuki Grand Vitara WagonR And Other Cars Price Increase Officially Effect From April 8

ಮಾರುತಿ ಸುಜುಕಿ ಎಕ್ಸ್ಎಲ್6 ಎಂಪಿವಿ, ಕನಿಷ್ಠ ರೂ.11.71 ಲಕ್ಷ ಮತ್ತು ಗರಿಷ್ಠ ರೂ.14.77 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಹೊಂದಿದ್ದು, 20.27 ರಿಂದ 26.32 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 6 ಜನರು ಸಂಚರಿಸಬಹುದು. ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, April 3, 2025, 15:00 [IST]
English summary
Maruti suzuki grand vitara wagonr and other cars price increase officially effect from april 8
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+